< ಯೆಶಾಯನು 64 >

1 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
کاش که آسمانها را منشق ساخته، نازل می شدی و کوهها از رویت تو متزلزل می‌گشت.۱
2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
مثل آتشی که خورده چوبها رامشتعل سازد و ناری که آب را به جوش آورد تانام خود را بر دشمنانت معروف سازی و امت‌ها ازرویت تو لرزان گردند.۲
3 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
حینی که کارهای هولناک را که منتظر آنها نبودیم بجا آوردی. آنگاه نزول فرمودی و کوهها از رویت تو متزلزل گردید.۳
4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
زیرا که از ایام قدیم نشنیدند و استماع ننمودند و چشم خدایی را غیر از تو که برای منتظران خویش بپردازد ندید.۴
5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
تو آنانی را که شادمانند و عدالت را بجا می‌آورند و به راههای تو تو را به یاد می‌آورند ملاقات می‌کنی. اینک توغضبناک شدی و ما گناه کرده‌ایم در اینها مدت مدیدی بسر بردیم و آیا نجات توانیم یافت؟۵
6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
زیرا که جمیع ما مثل شخص نجس شده‌ایم وهمه اعمال عادله ما مانند لته ملوث می‌باشد. وهمگی ما مثل برگ، پژمرده شده، گناهان ما مثل باد، ما را می‌رباید.۶
7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
و کسی نیست که اسم تو رابخواند یا خویشتن را برانگیزاند تا به تو متمسک شود زیرا که روی خود را از ما پوشیده‌ای و ما رابه‌سبب گناهان ما گداخته‌ای.۷
8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
اما الان‌ای خداوند، تو پدر ما هستی. ما گل هستیم و تو صانع ما هستی و جمیع ما مصنوع دستهای تو می‌باشیم.۸
9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
‌ای خداوند بشدت غضبناک مباش و گناه را تا به ابد بخاطر مدار. هان ملاحظه نما که همگی ما قوم تو هستیم.۹
10 ೧೦ ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
شهرهای مقدس تو بیابان شده. صهیون، بیابان و اورشلیم، ویرانه گردیده است.۱۰
11 ೧೧ ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
خانه مقدس و زیبای ما که پدران ما تو را در آن تسبیح می خواندند به آتش سوخته شده و تمامی نفایس ما به خرابی مبدل گردیده است.۱۱
12 ೧೨ ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”
‌ای خداوندآیا با وجود این همه، خودداری می‌کنی وخاموش شده، ما را بشدت رنجور می‌سازی؟۱۲

< ಯೆಶಾಯನು 64 >