< ಯೆಶಾಯನು 66 >

1 ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
כֹּ֚ה אָמַ֣ר יְהוָ֔ה הַשָּׁמַ֣יִם כִּסְאִ֔י וְהָאָ֖רֶץ הֲדֹ֣ם רַגְלָ֑י אֵי־זֶ֥ה בַ֙יִת֙ אֲשֶׁ֣ר תִּבְנוּ־לִ֔י וְאֵי־זֶ֥ה מָק֖וֹם מְנוּחָתִֽי׃
2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
וְאֶת־כָּל־אֵ֙לֶּה֙ יָדִ֣י עָשָׂ֔תָה וַיִּהְי֥וּ כָל־אֵ֖לֶּה נְאֻם־יְהוָ֑ה וְאֶל־זֶ֣ה אַבִּ֔יט אֶל־עָנִי֙ וּנְכֵה־ר֔וּחַ וְחָרֵ֖ד עַל־דְּבָרִֽי׃
3 ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
שׁוֹחֵ֨ט הַשּׁ֜וֹר מַכֵּה־אִ֗ישׁ זוֹבֵ֤חַ הַשֶּׂה֙ עֹ֣רֵֽף כֶּ֔לֶב מַעֲלֵ֤ה מִנְחָה֙ דַּם־חֲזִ֔יר מַזְכִּ֥יר לְבֹנָ֖ה מְבָ֣רֵֽךְ אָ֑וֶן גַּם־הֵ֗מָּה בָּֽחֲרוּ֙ בְּדַרְכֵיהֶ֔ם וּבְשִׁקּוּצֵיהֶ֖ם נַפְשָׁ֥ם חָפֵֽצָה׃
4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”
גַּם־אֲנִ֞י אֶבְחַ֣ר בְּתַעֲלֻלֵיהֶ֗ם וּמְגֽוּרֹתָם֙ אָבִ֣יא לָהֶ֔ם יַ֤עַן קָרָ֙אתִי֙ וְאֵ֣ין עוֹנֶ֔ה דִּבַּ֖רְתִּי וְלֹ֣א שָׁמֵ֑עוּ וַיַּעֲשׂ֤וּ הָרַע֙ בְּעֵינַ֔י וּבַאֲשֶׁ֥ר לֹֽא־חָפַ֖צְתִּי בָּחָֽרוּ׃ ס
5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
שִׁמְעוּ֙ דְּבַר־יְהוָ֔ה הַחֲרֵדִ֖ים אֶל־דְּבָר֑וֹ אָמְרוּ֩ אֲחֵיכֶ֨ם שֹׂנְאֵיכֶ֜ם מְנַדֵּיכֶ֗ם לְמַ֤עַן שְׁמִי֙ יִכְבַּ֣ד יְהוָ֔ה וְנִרְאֶ֥ה בְשִׂמְחַתְכֶ֖ם וְהֵ֥ם יֵבֹֽשׁוּ׃
6 ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
ק֤וֹל שָׁאוֹן֙ מֵעִ֔יר ק֖וֹל מֵֽהֵיכָ֑ל ק֣וֹל יְהוָ֔ה מְשַׁלֵּ֥ם גְּמ֖וּל לְאֹיְבָֽיו׃
7 ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.
בְּטֶ֥רֶם תָּחִ֖יל יָלָ֑דָה בְּטֶ֨רֶם יָב֥וֹא חֵ֛בֶל לָ֖הּ וְהִמְלִ֥יטָה זָכָֽר׃
8 ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.
מִֽי־שָׁמַ֣ע כָּזֹ֗את מִ֤י רָאָה֙ כָּאֵ֔לֶּה הֲי֤וּחַל אֶ֙רֶץ֙ בְּי֣וֹם אֶחָ֔ד אִם־יִוָּ֥לֵֽד גּ֖וֹי פַּ֣עַם אֶחָ֑ת כִּֽי־חָ֛לָה גַּם־יָלְדָ֥ה צִיּ֖וֹן אֶת־בָּנֶֽיהָ׃
9 “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.
הַאֲנִ֥י אַשְׁבִּ֛יר וְלֹ֥א אוֹלִ֖יד יֹאמַ֣ר יְהוָ֑ה אִם־אֲנִ֧י הַמּוֹלִ֛יד וְעָצַ֖רְתִּי אָמַ֥ר אֱלֹהָֽיִךְ׃ ס
10 ೧೦ ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
שִׂמְח֧וּ אֶת־יְרוּשָׁלִַ֛ם וְגִ֥ילוּ בָ֖הּ כָּל־אֹהֲבֶ֑יהָ שִׂ֤ישׂוּ אִתָּהּ֙ מָשׂ֔וֹשׂ כָּל־הַמִּֽתְאַבְּלִ֖ים עָלֶֽיהָ׃
11 ೧೧ ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
לְמַ֤עַן תִּֽינְקוּ֙ וּשְׂבַעְתֶּ֔ם מִשֹּׁ֖ד תַּנְחֻמֶ֑יהָ לְמַ֧עַן תָּמֹ֛צּוּ וְהִתְעַנַּגְתֶּ֖ם מִזִּ֥יז כְּבוֹדָֽהּ׃ ס
12 ೧೨ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
כִּֽי־כֹ֣ה ׀ אָמַ֣ר יְהוָ֗ה הִנְנִ֣י נֹטֶֽה־אֵ֠לֶיהָ כְּנָהָ֨ר שָׁל֜וֹם וּכְנַ֧חַל שׁוֹטֵ֛ף כְּב֥וֹד גּוֹיִ֖ם וִֽינַקְתֶּ֑ם עַל־צַד֙ תִּנָּשֵׂ֔אוּ וְעַל־בִּרְכַּ֖יִם תְּשָׁעֳשָֽׁעוּ׃
13 ೧೩ ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
כְּאִ֕ישׁ אֲשֶׁ֥ר אִמּ֖וֹ תְּנַחֲמֶ֑נּוּ כֵּ֤ן אָֽנֹכִי֙ אֲנַ֣חֶמְכֶ֔ם וּבִירֽוּשָׁלִַ֖ם תְּנֻחָֽמוּ׃
14 ೧೪ ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
וּרְאִיתֶם֙ וְשָׂ֣שׂ לִבְּכֶ֔ם וְעַצְמוֹתֵיכֶ֖ם כַּדֶּ֣שֶׁא תִפְרַ֑חְנָה וְנוֹדְעָ֤ה יַד־יְהוָה֙ אֶת־עֲבָדָ֔יו וְזָעַ֖ם אֶת־אֹיְבָֽיו׃
15 ೧೫ ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
כִּֽי־הִנֵּ֤ה יְהוָה֙ בָּאֵ֣שׁ יָב֔וֹא וְכַסּוּפָ֖ה מַרְכְּבֹתָ֑יו לְהָשִׁ֤יב בְּחֵמָה֙ אַפּ֔וֹ וְגַעֲרָת֖וֹ בְּלַהֲבֵי־אֵֽשׁ׃
16 ೧೬ ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
כִּ֤י בָאֵשׁ֙ יְהוָ֣ה נִשְׁפָּ֔ט וּבְחַרְבּ֖וֹ אֶת־כָּל־בָּשָׂ֑ר וְרַבּ֖וּ חַֽלְלֵ֥י יְהוָֽה׃
17 ೧೭ ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.
הַמִּתְקַדְּשִׁ֨ים וְהַמִּֽטַּהֲרִ֜ים אֶל־הַגַּנּ֗וֹת אַחַ֤ר אחד בַּתָּ֔וֶךְ אֹֽכְלֵי֙ בְּשַׂ֣ר הַחֲזִ֔יר וְהַשֶּׁ֖קֶץ וְהָעַכְבָּ֑ר יַחְדָּ֥ו יָסֻ֖פוּ נְאֻם־יְהוָֽה׃
18 ೧೮ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
וְאָנֹכִ֗י מַעֲשֵׂיהֶם֙ וּמַחְשְׁבֹ֣תֵיהֶ֔ם בָּאָ֕ה לְקַבֵּ֥ץ אֶת־כָּל־הַגּוֹיִ֖ם וְהַלְּשֹׁנ֑וֹת וּבָ֖אוּ וְרָא֥וּ אֶת־כְּבוֹדִֽי׃
19 ೧೯ ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
וְשַׂמְתִּ֨י בָהֶ֜ם א֗וֹת וְשִׁלַּחְתִּ֣י מֵהֶ֣ם ׀ פְּ֠לֵיטִים אֶֽל־הַגּוֹיִ֞ם תַּרְשִׁ֨ישׁ פּ֥וּל וְל֛וּד מֹ֥שְׁכֵי קֶ֖שֶׁת תֻּבַ֣ל וְיָוָ֑ן הָאִיִּ֣ים הָרְחֹקִ֗ים אֲשֶׁ֨ר לֹא־שָׁמְע֤וּ אֶת־שִׁמְעִי֙ וְלֹא־רָא֣וּ אֶת־כְּבוֹדִ֔י וְהִגִּ֥ידוּ אֶת־כְּבוֹדִ֖י בַּגּוֹיִֽם׃
20 ೨೦ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
וְהֵבִ֣יאוּ אֶת־כָּל־ אֲחֵיכֶ֣ם מִכָּל־הַגּוֹיִ֣ם ׀ מִנְחָ֣ה ׀ לַֽיהוָ֡ה בַּסּוּסִ֡ים וּ֠בָרֶכֶב וּבַצַּבִּ֨ים וּבַפְּרָדִ֜ים וּבַכִּרְכָּר֗וֹת עַ֣ל הַ֥ר קָדְשִׁ֛י יְרוּשָׁלִַ֖ם אָמַ֣ר יְהוָ֑ה כַּאֲשֶׁ֣ר יָבִיאוּ֩ בְנֵ֨י יִשְׂרָאֵ֧ל אֶת־הַמִּנְחָ֛ה בִּכְלִ֥י טָה֖וֹר בֵּ֥ית יְהוָֽה׃
21 ೨೧ ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.
וְגַם־מֵהֶ֥ם אֶקַּ֛ח לַכֹּהֲנִ֥ים לַלְוִיִּ֖ם אָמַ֥ר יְהוָֽה׃
22 ೨೨ “ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
כִּ֣י כַאֲשֶׁ֣ר הַשָּׁמַ֣יִם הַ֠חֳדָשִׁים וְהָאָ֨רֶץ הַחֲדָשָׁ֜ה אֲשֶׁ֨ר אֲנִ֥י עֹשֶׂ֛ה עֹמְדִ֥ים לְפָנַ֖י נְאֻם־יְהוָ֑ה כֵּ֛ן יַעֲמֹ֥ד זַרְעֲכֶ֖ם וְשִׁמְכֶֽם׃
23 ೨೩ ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
וְהָיָ֗ה מִֽדֵּי־חֹ֙דֶשׁ֙ בְּחָדְשׁ֔וֹ וּמִדֵּ֥י שַׁבָּ֖ת בְּשַׁבַּתּ֑וֹ יָב֧וֹא כָל־בָּשָׂ֛ר לְהִשְׁתַּחֲוֺ֥ת לְפָנַ֖י אָמַ֥ר יְהוָֽה׃
24 ೨೪ “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
וְיָצְא֣וּ וְרָא֔וּ בְּפִגְרֵי֙ הָאֲנָשִׁ֔ים הַפֹּשְׁעִ֖ים בִּ֑י כִּ֣י תוֹלַעְתָּ֞ם לֹ֣א תָמ֗וּת וְאִשָּׁם֙ לֹ֣א תִכְבֶּ֔ה וְהָי֥וּ דֵרָא֖וֹן לְכָל־בָּשָֽׂר׃

< ಯೆಶಾಯನು 66 >