< ಯೆಶಾಯನು 1 >

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
חֲזוֹן יְשַֽׁעְיָהוּ בֶן־אָמוֹץ אֲשֶׁר חָזָה עַל־יְהוּדָה וִירוּשָׁלָ͏ִם בִּימֵי עֻזִּיָּהוּ יוֹתָם אָחָז יְחִזְקִיָּהוּ מַלְכֵי יְהוּדָֽה׃
2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
שִׁמְעוּ שָׁמַיִם וְהַאֲזִינִי אֶרֶץ כִּי יְהוָה דִּבֵּר בָּנִים גִּדַּלְתִּי וְרוֹמַמְתִּי וְהֵם פָּשְׁעוּ בִֽי׃
3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
יָדַע שׁוֹר קֹנֵהוּ וַחֲמוֹר אֵבוּס בְּעָלָיו יִשְׂרָאֵל לֹא יָדַע עַמִּי לֹא הִתְבּוֹנָֽן׃
4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
הוֹי ׀ גּוֹי חֹטֵא עַם כֶּבֶד עָוֺן זֶרַע מְרֵעִים בָּנִים מַשְׁחִיתִים עָזְבוּ אֶת־יְהוָה נִֽאֲצוּ אֶת־קְדוֹשׁ יִשְׂרָאֵל נָזֹרוּ אָחֽוֹר׃
5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
עַל מֶה תֻכּוּ עוֹד תּוֹסִיפוּ סָרָה כָּל־רֹאשׁ לָחֳלִי וְכָל־לֵבָב דַּוָּֽי׃
6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
מִכַּף־רֶגֶל וְעַד־רֹאשׁ אֵֽין־בּוֹ מְתֹם פֶּצַע וְחַבּוּרָה וּמַכָּה טְרִיָּה לֹא־זֹרוּ וְלֹא חֻבָּשׁוּ וְלֹא רֻכְּכָה בַּשָּֽׁמֶן׃
7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
אַרְצְכֶם שְׁמָמָה עָרֵיכֶם שְׂרֻפוֹת אֵשׁ אַדְמַתְכֶם לְנֶגְדְּכֶם זָרִים אֹכְלִים אֹתָהּ וּשְׁמָמָה כְּמַהְפֵּכַת זָרִֽים׃
8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
וְנוֹתְרָה בַת־צִיּוֹן כְּסֻכָּה בְכָרֶם כִּמְלוּנָה בְמִקְשָׁה כְּעִיר נְצוּרָֽה׃
9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
לוּלֵי יְהוָה צְבָאוֹת הוֹתִיר לָנוּ שָׂרִיד כִּמְעָט כִּסְדֹם הָיִינוּ לַעֲמֹרָה דָּמִֽינוּ׃
10 ೧೦ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
שִׁמְעוּ דְבַר־יְהוָה קְצִינֵי סְדֹם הַאֲזִינוּ תּוֹרַת אֱלֹהֵינוּ עַם עֲמֹרָֽה׃
11 ೧೧ ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
לָמָּה־לִּי רֹב־זִבְחֵיכֶם יֹאמַר יְהוָה שָׂבַעְתִּי עֹלוֹת אֵילִים וְחֵלֶב מְרִיאִים וְדַם פָּרִים וּכְבָשִׂים וְעַתּוּדִים לֹא חָפָֽצְתִּי׃
12 ೧೨ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
כִּי תָבֹאוּ לֵרָאוֹת פָּנָי מִי־בִקֵּשׁ זֹאת מִיֶּדְכֶם רְמֹס חֲצֵרָֽי׃
13 ೧೩ ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
לֹא תוֹסִיפוּ הָבִיא מִנְחַת־שָׁוְא קְטֹרֶת תּוֹעֵבָה הִיא לִי חֹדֶשׁ וְשַׁבָּת קְרֹא מִקְרָא לֹא־אוּכַל אָוֶן וַעֲצָרָֽה׃
14 ೧೪ ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
חָדְשֵׁיכֶם וּמוֹעֲדֵיכֶם שָׂנְאָה נַפְשִׁי הָיוּ עָלַי לָטֹרַח נִלְאֵיתִי נְשֹֽׂא׃
15 ೧೫ ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
וּבְפָרִשְׂכֶם כַּפֵּיכֶם אַעְלִים עֵינַי מִכֶּם גַּם כִּֽי־תַרְבּוּ תְפִלָּה אֵינֶנִּי שֹׁמֵעַ יְדֵיכֶם דָּמִים מָלֵֽאוּ׃
16 ೧೬ ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
רַחֲצוּ הִזַּכּוּ הָסִירוּ רֹעַ מַעַלְלֵיכֶם מִנֶּגֶד עֵינָי חִדְלוּ הָרֵֽעַ׃
17 ೧೭ ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
לִמְדוּ הֵיטֵב דִּרְשׁוּ מִשְׁפָּט אַשְּׁרוּ חָמוֹץ שִׁפְטוּ יָתוֹם רִיבוּ אַלְמָנָֽה׃
18 ೧೮ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
לְכוּ־נָא וְנִוָּֽכְחָה יֹאמַר יְהוָה אִם־יִֽהְיוּ חֲטָאֵיכֶם כַּשָּׁנִים כַּשֶּׁלֶג יַלְבִּינוּ אִם־יַאְדִּימוּ כַתּוֹלָע כַּצֶּמֶר יִהְיֽוּ׃
19 ೧೯ ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
אִם־תֹּאבוּ וּשְׁמַעְתֶּם טוּב הָאָרֶץ תֹּאכֵֽלוּ׃
20 ೨೦ ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
וְאִם־תְּמָאֲנוּ וּמְרִיתֶם חֶרֶב תְּאֻכְּלוּ כִּי פִּי יְהוָה דִּבֵּֽר׃
21 ೨೧ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
אֵיכָה הָיְתָה לְזוֹנָה קִרְיָה נֶאֱמָנָה מְלֵאֲתִי מִשְׁפָּט צֶדֶק יָלִין בָּהּ וְעַתָּה מְרַצְּחִֽים׃
22 ೨೨ ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
כַּסְפֵּךְ הָיָה לְסִיגִים סָבְאֵךְ מָהוּל בַּמָּֽיִם׃
23 ೨೩ ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
שָׂרַיִךְ סוֹרְרִים וְחַבְרֵי גַּנָּבִים כֻּלּוֹ אֹהֵב שֹׁחַד וְרֹדֵף שַׁלְמֹנִים יָתוֹם לֹא יִשְׁפֹּטוּ וְרִיב אַלְמָנָה לֹֽא־יָבוֹא אֲלֵיהֶֽם׃
24 ೨೪ ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
לָכֵן נְאֻם הָֽאָדוֹן יְהוָה צְבָאוֹת אֲבִיר יִשְׂרָאֵל הוֹי אֶנָּחֵם מִצָּרַי וְאִנָּקְמָה מֵאוֹיְבָֽי׃
25 ೨೫ ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
וְאָשִׁיבָה יָדִי עָלַיִךְ וְאֶצְרֹף כַּבֹּר סִיגָיִךְ וְאָסִירָה כָּל־בְּדִילָֽיִךְ׃
26 ೨೬ ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
וְאָשִׁיבָה שֹׁפְטַיִךְ כְּבָרִאשֹׁנָה וְיֹעֲצַיִךְ כְּבַתְּחִלָּה אַחֲרֵי־כֵן יִקָּרֵא לָךְ עִיר הַצֶּדֶק קִרְיָה נֶאֱמָנָֽה׃
27 ೨೭ ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
צִיּוֹן בְּמִשְׁפָּט תִּפָּדֶה וְשָׁבֶיהָ בִּצְדָקָֽה׃
28 ೨೮ ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
וְשֶׁבֶר פֹּשְׁעִים וְחַטָּאִים יַחְדָּו וְעֹזְבֵי יְהוָה יִכְלֽוּ׃
29 ೨೯ “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
כִּי יֵבֹשׁוּ מֵאֵילִים אֲשֶׁר חֲמַדְתֶּם וְתַחְפְּרוּ מֵהַגַּנּוֹת אֲשֶׁר בְּחַרְתֶּֽם׃
30 ೩೦ ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
כִּי תִֽהְיוּ כְּאֵלָה נֹבֶלֶת עָלֶהָ וּֽכְגַנָּה אֲשֶׁר־מַיִם אֵין לָֽהּ׃
31 ೩೧ ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
וְהָיָה הֶחָסֹן לִנְעֹרֶת וּפֹעֲלוֹ לְנִיצוֹץ וּבָעֲרוּ שְׁנֵיהֶם יַחְדָּו וְאֵין מְכַבֶּֽה׃

< ಯೆಶಾಯನು 1 >