< ಯಾಕೋಬನು ಬರೆದ ಪತ್ರಿಕೆ 5 >

1 ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
αγε νυν οι πλουσιοι κλαυσατε ολολυζοντες επι ταις ταλαιπωριαις υμων ταις επερχομεναις
2 ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
ο πλουτος υμων σεσηπεν και τα ιματια υμων σητοβρωτα γεγονεν
3 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
ο χρυσος υμων και ο αργυρος κατιωται και ο ιος αυτων εις μαρτυριον υμιν εσται και φαγεται τας σαρκας υμων ως πυρ εθησαυρισατε εν εσχαταις ημεραις
4 ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
ιδου ο μισθος των εργατων των αμησαντων τας χωρας υμων ο απεστερημενος αφ υμων κραζει και αι βοαι των θερισαντων εις τα ωτα κυριου σαβαωθ εισεληλυθασιν
5 ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
ετρυφησατε επι της γης και εσπαταλησατε εθρεψατε τας καρδιας υμων ως εν ημερα σφαγης
6 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
κατεδικασατε εφονευσατε τον δικαιον ουκ αντιτασσεται υμιν
7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
μακροθυμησατε ουν αδελφοι εως της παρουσιας του κυριου ιδου ο γεωργος εκδεχεται τον τιμιον καρπον της γης μακροθυμων επ αυτω εως λαβη υετον πρωιμον και οψιμον
8 ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
μακροθυμησατε και υμεις στηριξατε τας καρδιας υμων οτι η παρουσια του κυριου ηγγικεν
9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
μη στεναζετε κατ αλληλων αδελφοι ινα μη κριθητε ιδου ο κριτης προ των θυρων εστηκεν
10 ೧೦ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
υποδειγμα λαβετε αδελφοι μου της κακοπαθειας και της μακροθυμιας τους προφητας οι ελαλησαν τω ονοματι κυριου
11 ೧೧ ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ιδου μακαριζομεν τους υπομενοντας την υπομονην ιωβ ηκουσατε και το τελος κυριου ειδετε οτι πολυσπλαγχνος εστιν ο κυριος και οικτιρμων
12 ೧೨ ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
προ παντων δε αδελφοι μου μη ομνυετε μητε τον ουρανον μητε την γην μητε αλλον τινα ορκον ητω δε υμων το ναι ναι και το ου ου ινα μη εις υποκρισιν πεσητε
13 ೧೩ ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
κακοπαθει τις εν υμιν προσευχεσθω ευθυμει τις ψαλλετω
14 ೧೪ ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
ασθενει τις εν υμιν προσκαλεσασθω τους πρεσβυτερους της εκκλησιας και προσευξασθωσαν επ αυτον αλειψαντες αυτον ελαιω εν τω ονοματι του κυριου
15 ೧೫ ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
και η ευχη της πιστεως σωσει τον καμνοντα και εγερει αυτον ο κυριος καν αμαρτιας η πεποιηκως αφεθησεται αυτω
16 ೧೬ ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
εξομολογεισθε αλληλοις τα παραπτωματα και ευχεσθε υπερ αλληλων οπως ιαθητε πολυ ισχυει δεησις δικαιου ενεργουμενη
17 ೧೭ ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
ηλιας ανθρωπος ην ομοιοπαθης ημιν και προσευχη προσηυξατο του μη βρεξαι και ουκ εβρεξεν επι της γης ενιαυτους τρεις και μηνας εξ
18 ೧೮ ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
και παλιν προσηυξατο και ο ουρανος υετον εδωκεν και η γη εβλαστησεν τον καρπον αυτης
19 ೧೯ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
αδελφοι εαν τις εν υμιν πλανηθη απο της αληθειας και επιστρεψη τις αυτον
20 ೨೦ ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
γινωσκετω οτι ο επιστρεψας αμαρτωλον εκ πλανης οδου αυτου σωσει ψυχην εκ θανατου και καλυψει πληθος αμαρτιων

< ಯಾಕೋಬನು ಬರೆದ ಪತ್ರಿಕೆ 5 >