< ಯೆರೆಮೀಯನು 10 >

1 ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
שִׁמְע֣וּ אֶת־הַדָּבָ֗ר אֲשֶׁ֨ר דִּבֶּ֧ר יְהוָ֛ה עֲלֵיכֶ֖ם בֵּ֥ית יִשְׂרָאֵֽל׃
2 ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.
כֹּ֣ה ׀ אָמַ֣ר יְהוָ֗ה אֶל־דֶּ֤רֶךְ הַגּוֹיִם֙ אַל־תִּלְמָ֔דוּ וּמֵאֹת֥וֹת הַשָּׁמַ֖יִם אַל־תֵּחָ֑תּוּ כִּֽי־יֵחַ֥תּוּ הַגּוֹיִ֖ם מֵהֵֽמָּה׃
3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
כִּֽי־חֻקּ֥וֹת הָֽעַמִּ֖ים הֶ֣בֶל ה֑וּא כִּֽי־עֵץ֙ מִיַּ֣עַר כְּרָת֔וֹ מַעֲשֵׂ֥ה יְדֵ֥י־חָרָ֖שׁ בַּֽמַּעֲצָֽד׃
4 ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
בְּכֶ֥סֶף וּבְזָהָ֖ב יְיַפֵּ֑הוּ בְּמַסְמְר֧וֹת וּבְמַקָּב֛וֹת יְחַזְּק֖וּם וְל֥וֹא יָפִֽיק׃
5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ
כְּתֹ֨מֶר מִקְשָׁ֥ה הֵ֙מָּה֙ וְלֹ֣א יְדַבֵּ֔רוּ נָשׂ֥וֹא יִנָּשׂ֖וּא כִּ֣י לֹ֣א יִצְעָ֑דוּ אַל־תִּֽירְא֤וּ מֵהֶם֙ כִּי־לֹ֣א יָרֵ֔עוּ וְגַם־הֵיטֵ֖יב אֵ֥ין אוֹתָֽם׃ ס
6 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
מֵאֵ֥ין כָּמ֖וֹךָ יְהוָ֑ה גָּד֥וֹל אַתָּ֛ה וְגָד֥וֹל שִׁמְךָ֖ בִּגְבוּרָֽה׃
7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.
מִ֣י לֹ֤א יִֽרָאֲךָ֙ מֶ֣לֶךְ הַגּוֹיִ֔ם כִּ֥י לְךָ֖ יָאָ֑תָה כִּ֣י בְכָל־חַכְמֵ֧י הַגּוֹיִ֛ם וּבְכָל־מַלְכוּתָ֖ם מֵאֵ֥ין כָּמֽוֹךָ׃
8 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
וּבְאַחַ֖ת יִבְעֲר֣וּ וְיִכְסָ֑לוּ מוּסַ֥ר הֲבָלִ֖ים עֵ֥ץ הֽוּא׃
9 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
כֶּ֣סֶף מְרֻקָּ֞ע מִתַּרְשִׁ֣ישׁ יוּבָ֗א וְזָהָב֙ מֵֽאוּפָ֔ז מַעֲשֵׂ֥ה חָרָ֖שׁ וִידֵ֣י צוֹרֵ֑ף תְּכֵ֤לֶת וְאַרְגָּמָן֙ לְבוּשָׁ֔ם מַעֲשֵׂ֥ה חֲכָמִ֖ים כֻּלָּֽם׃
10 ೧೦ ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
וַֽיהוָ֤ה אֱלֹהִים֙ אֱמֶ֔ת הֽוּא־אֱלֹהִ֥ים חַיִּ֖ים וּמֶ֣לֶךְ עוֹלָ֑ם מִקִּצְפּוֹ֙ תִּרְעַ֣שׁ הָאָ֔רֶץ וְלֹֽא־יָכִ֥לוּ גוֹיִ֖ם זַעְמֽוֹ׃ ס
11 ೧೧ ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
כִּדְנָה֙ תֵּאמְר֣וּן לְה֔וֹם אֱלָ֣הַיָּ֔א דִּֽי־שְׁמַיָּ֥א וְאַרְקָ֖א לָ֣א עֲבַ֑דוּ יֵאבַ֧דוּ מֵֽאַרְעָ֛א וּמִן־תְּח֥וֹת שְׁמַיָּ֖א אֵֽלֶּה׃ ס
12 ೧೨ ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
עֹשֵׂ֥ה אֶ֙רֶץ֙ בְּכֹח֔וֹ מֵכִ֥ין תֵּבֵ֖ל בְּחָכְמָת֑וֹ וּבִתְבוּנָת֖וֹ נָטָ֥ה שָׁמָֽיִם׃
13 ೧೩ ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
לְק֨וֹל תִּתּ֜וֹ הֲמ֥וֹן מַ֙יִם֙ בַּשָּׁמַ֔יִם וַיַּעֲלֶ֥ה נְשִׂאִ֖ים מִקְצֵ֣ה ארץ בְּרָקִ֤ים לַמָּטָר֙ עָשָׂ֔ה וַיּ֥וֹצֵא ר֖וּחַ מֵאֹצְרֹתָֽיו׃
14 ೧೪ ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
נִבְעַ֤ר כָּל־אָדָם֙ מִדַּ֔עַת הֹבִ֥ישׁ כָּל־צוֹרֵ֖ף מִפָּ֑סֶל כִּ֛י שֶׁ֥קֶר נִסְכּ֖וֹ וְלֹא־ר֥וּחַ בָּֽם׃
15 ೧೫ ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
הֶ֣בֶל הֵ֔מָּה מַעֲשֵׂ֖ה תַּעְתֻּעִ֑ים בְּעֵ֥ת פְּקֻדָּתָ֖ם יֹאבֵֽדוּ׃
16 ೧೬ ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.
לֹֽא־כְאֵ֜לֶּה חֵ֣לֶק יַעֲקֹ֗ב כִּֽי־יוֹצֵ֤ר הַכֹּל֙ ה֔וּא וְיִ֨שְׂרָאֵ֔ל שֵׁ֖בֶט נַֽחֲלָת֑וֹ יְהוָ֥ה צְבָא֖וֹת שְׁמֽוֹ׃ ס
17 ೧೭ ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
אִסְפִּ֥י מֵאֶ֖רֶץ כִּנְעָתֵ֑ךְ ישבתי בַּמָּצֽוֹר׃ ס
18 ೧೮ “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
כִּֽי־כֹה֙ אָמַ֣ר יְהוָ֔ה הִנְנִ֥י קוֹלֵ֛עַ אֶת־יוֹשְׁבֵ֥י הָאָ֖רֶץ בַּפַּ֣עַם הַזֹּ֑את וַהֲצֵר֥וֹתִי לָהֶ֖ם לְמַ֥עַן יִמְצָֽאוּ׃ ס
19 ೧೯ ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.
א֥וֹי לִי֙ עַל־שִׁבְרִ֔י נַחְלָ֖ה מַכָּתִ֑י וַאֲנִ֣י אָמַ֔רְתִּי אַ֛ךְ זֶ֥ה חֳלִ֖י וְאֶשָּׂאֶֽנּוּ׃
20 ೨೦ ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
אָהֳלִ֣י שֻׁדָּ֔ד וְכָל־מֵיתָרַ֖י נִתָּ֑קוּ בָּנַ֤י יְצָאֻ֙נִי֙ וְאֵינָ֔ם אֵין־נֹטֶ֥ה עוֹד֙ אָהֳלִ֔י וּמֵקִ֖ים יְרִיעוֹתָֽי׃
21 ೨೧ ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
כִּ֤י נִבְעֲרוּ֙ הָֽרֹעִ֔ים וְאֶת־יְהוָ֖ה לֹ֣א דָרָ֑שׁוּ עַל־כֵּן֙ לֹ֣א הִשְׂכִּ֔ילוּ וְכָל־מַרְעִיתָ֖ם נָפֽוֹצָה׃ ס
22 ೨೨ ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
ק֤וֹל שְׁמוּעָה֙ הִנֵּ֣ה בָאָ֔ה וְרַ֥עַשׁ גָּד֖וֹל מֵאֶ֣רֶץ צָפ֑וֹן לָשׂ֞וּם אֶת־עָרֵ֧י יְהוּדָ֛ה שְׁמָמָ֖ה מְע֥וֹן תַּנִּֽים׃ ס
23 ೨೩ ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
יָדַ֣עְתִּי יְהוָ֔ה כִּ֛י לֹ֥א לָאָדָ֖ם דַּרְכּ֑וֹ לֹֽא־לְאִ֣ישׁ הֹלֵ֔ךְ וְהָכִ֖ין אֶֽת־צַעֲדֽוֹ׃
24 ೨೪ ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
יַסְּרֵ֥נִי יְהוָ֖ה אַךְ־בְּמִשְׁפָּ֑ט אַל־בְּאַפְּךָ֖ פֶּן־תַּמְעִטֵֽנִי׃
25 ೨೫ ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
שְׁפֹ֣ךְ חֲמָתְךָ֗ עַל־הַגּוֹיִם֙ אֲשֶׁ֣ר לֹֽא־יְדָע֔וּךָ וְעַל֙ מִשְׁפָּח֔וֹת אֲשֶׁ֥ר בְּשִׁמְךָ֖ לֹ֣א קָרָ֑אוּ כִּֽי־אָכְל֣וּ אֶֽת־יַעֲקֹ֗ב וַאֲכָלֻ֙הוּ֙ וַיְכַלֻּ֔הוּ וְאֶת־נָוֵ֖הוּ הֵשַֽׁמּוּ׃ פ

< ಯೆರೆಮೀಯನು 10 >