< ಯೆರೆಮೀಯನು 12 >

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
Wewe ni mwenye haki, Bwana, wakati wowote ninapoleta mashitaka kwako. Lazima nikuambie sababu yangu ya kulalamika: Kwa nini njia za waovu hufanikiwa? Watu wote wasiokuwa na imani wanafanikiwa.
2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.
Wewe uliwapanda nao wakawa na mizizi. Wanaendelea kuzaa matunda. Wewe upo karibu nao katika vinywa vyao, lakini mbali na mioyo yao.
3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.
Lakini wewe mwenyewe unanijua, Bwana. Umeona mimi na kuchunguza moyo wangu. Waondoe kama kondoo wa kuchinjwa. Ukakaweke tayari kwa siku ya kuchinjwa.
4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.
Je! Nchi itakauka kwa muda gani, na mimea katika kila shamba itaota kwa sababu ya uovu wa wenyeji wake? Wanyama na ndege wameondolewa. Hakika, watu wanasema, “Mungu hajui nini kitatokea kwetu.”
5 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
Bwana akasema, “Kweli, wewe, Yeremia, umetembea na askari wa miguu na wamechoka, unawezaje kushindana dhidi ya farasi? Ikiwa unashuka chini ya nchi iliyo salama, utafanyaje katika misitu karibu na Yordani?
6 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.
Kwa maana hata ndugu zako na familia ya baba yako wamekudharau na kukukemea kwa sauti kubwa. Usiwaamini, hata kama wanasema mambo mazuri kwako.
7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
Nimeiacha nyumba yangu; Nimeacha urithi wangu. Nimewatia watu wangu wapendwa mikononi mwa adui zake.
8 ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
Urithi wangu umekuwa kwangu kama simba katika tundu; yeye hujiweka juu yangu kwa sauti yake mwenyewe, hivyo nimemchukia.
9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.
Malipo yangu ya thamani ni fisi, na ndege wenye madoadoa karibu na kichwa chake. Nenda, ukakusanye viumbe vyote vilivyomo katika mashamba, na uwalete ili wale.
10 ೧೦ ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
Wachungaji wengi wameharibu shamba langu la mizabibu. Wameipoteza sehemu yangu yote ya ardhi; Waligeuza sehemu yangu nzuri kuwa jangwa, ukiwa.
11 ೧೧ ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.
Wamemfanya kuwa ukiwa. Ninaomboleza kwa ajili yake; yeye ni ukiwa. Nchi yote imefanywa kuwa ukiwa, kwa maana hakuna mtu aliyeweka haya moyoni mwake.
12 ೧೨ ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.
Waangamizi wamekuja juu ya maeneo yote yaliyo wazi jangwani, kwa maana upanga wa Bwana unakula kutoka upande mmoja wa nchi hadi mwingine. Hakuna usalama katika nchi kwa kiumbe chochote kilicho hai.
13 ೧೩ ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.
Walipanda ngano lakini mavuno ya miiba. Wao wamechoka kutokana na kazi lakini hawajapata chochote. Basi muaibike kwa faida yenu kwa sababu ya ghadhabu ya Bwana.”
14 ೧೪ ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
Bwana asema hivi dhidi ya majirani zangu wote, waovu wanaopiga milki niliyowarithisha watu wangu Israeli, “Tazama, mimi ndimi ambaye nitawafukuza kutoka nchi yao wenyewe, nami nitaifuta nyumba ya Yuda kutoka kati yao.
15 ೧೫ ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.
Ndipo baada ya kuangamiza mataifa hayo, itatokea kwamba nitakuwa na huruma juu yao na kuwaleta tena; Nitawarudi-kila mtu kwa urithi wake na nchi yake.
16 ೧೬ ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.
Kisha itakuwa ikiwa mataifa hayo yatajifunza kwa makini njia za watu wangu, kuapa kwa jina langu 'Kama Bwana anaishivyo!' vile vile kama walivyowafundishwa watu wangu kuapa kwa Baali, basi watajengwa katikati ya watu wangu.
17 ೧೭ ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.
Lakini kama hakuna yeyote anayesikiliza, basi nitaling'oa taifa hilo. Kwa hakika litang'olewa na kuharibiwa-hili ndilo tamko la Bwana.”

< ಯೆರೆಮೀಯನು 12 >