< ಯೆರೆಮೀಯನು 2 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
فەرمایشتی یەزدانم بۆ هات، پێی فەرمووم:
2 “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
«بڕۆ و بە ئۆرشەلیمی ڕابگەیەنە با خەڵکەکە بیبیستن، بڵێ: «یەزدان ئەمە دەفەرموێت: «”بە یادی خۆمم هێنایەوە، دڵسۆزی کاتی مێردمنداڵیت و خۆشەویستی کاتی بووکێنیت، بەدوای مندا ڕۆیشتیت لە چۆڵەوانی، بە خاکێکدا کە کشتوکاڵی تێدا نەبوو.
3 ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
ئیسرائیل بۆ یەزدان پیرۆز بوو، یەکەمین بەرهەمی بەروبوومەکەیەتی. هەموو ئەوانەی خواردیان تاوانیان کرد، بەڵایان بەسەردا هات.“» ئەوە فەرمایشتی یەزدانە.
4 ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
گوێ لە فەرمایشتی یەزدان بگرن، ئەی بنەماڵەی یاقوب، ئەی هەموو خێڵەکانی بنەماڵەی ئیسرائیل،
5 ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
یەزدان ئەمە دەفەرموێت: «باوباپیرانتان چ کەموکوڕییەکیان لە مندا بینی کە لێم دوورکەوتنەوە؟ چوون دوای بتی پووچ کەوتن و خۆیان پووچ کرد.
6 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
پرسیاریان نەکرد:”کوا یەزدان، ئەوەی لە خاکی میسرەوە دەریهێناین، ئەوەی ئێمەی بەناو چۆڵەوانیدا برد، بە خاکێکی ڕووتەن و چاڵوچۆڵدا، بە خاکێکی وشک و سێبەری مەرگ، بە خاکێکدا کە کەسی پێدا تێنەپەڕیبوو، کەس لەوێ نیشتەجێ نەببوو؟“
7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
ئێوەم هێنایە ناو خاکێکی بەپیت بۆ ئەوەی بەروبووم و بەرهەمە چاکەکانی بخۆن. بەڵام هاتن و زەوییەکەی منتان گڵاو کرد، میراتەکەی منتان قێزەون کرد.
8 ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
کاهینەکان پرسیاریان نەکرد:”کوا یەزدان؟“ئەوانەی مامۆستای تەوراتن نەیانناسیم، ڕابەرەکان لێم یاخی بوون، پێغەمبەرەکان بەهۆی بەعلەوە پێشبینییان کرد، دوای بتی پووچ کەوتن.»
9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
یەزدان دەفەرموێت: «لەبەر ئەوە دیسان دادگاییتان دەکەم، منداڵی منداڵیشتان پەلکێشی دادگا دەکەم.
10 ೧೦ “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
لە کەنارەکانی کیتیم بپەڕنەوە و ببینن، بنێرن بۆ قێدار و بە وردی سەرنج بدەن، ببینن ئاخۆ شتی وەک ئەمە بووە؟
11 ೧೧ ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
ئایا هیچ نەتەوەیەک خوداوەندەکانی خۆی گۆڕیوە؟ هەرچەندە خودا نین. بەڵام گەلەکەی من خودای شکۆمەندیان گۆڕییەوە بە بتی پووچ.
12 ೧೨ ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
ئەی ئاسمان، لەبەر ئەمە واقت وڕبمێنێت، موچڕکەت پێدابێت و زۆر سەرسام بە.» ئەوە فەرمایشتی یەزدانە.
13 ೧೩ “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
«گەلەکەم دوو خراپەی کردووە: وازیان لە من هێنا، من کە کانی ئاوی ژیانم، هەروەها ئەمباراویان بۆ خۆیان هەڵکەند، ئەمباراوی شکاو کە ئاو ڕاناگرێت.
14 ೧೪ ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
ئایا ئیسرائیل کۆیلەیە؟ یان کوڕی کۆیلەی لەدایک بووی ماڵە؟ بۆچی بوو بە تاڵانی؟
15 ೧೫ ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
بەچکە شێران بەسەریدا نەڕاندیان، دەنگیان هات، خاکەکەیان وێران کردووە، شارۆچکەکانی سووتاون، بێ دانیشتووانن.
16 ೧೬ ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
هەروەها نەوەی مەمفیس و تەحپەنحێس تەپڵی سەری تۆیان تراشیووە.
17 ೧೭ ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
ئایا تۆ ئەمەت بە خۆت نەکرد، کە وازت لە یەزدانی پەروەردگارت هێنا کاتێک بە ڕێگادا دەیبردیت؟
18 ೧೮ ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
ئێستا بۆچی دەچیتە میسر بۆ خواردنەوەی ئاوی نیل؟ ئێستا بۆچی دەچیتە ئاشور بۆ خواردنەوەی ئاوی ڕووباری فورات؟
19 ೧೯ ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
خراپەی خۆت تەمبێت دەکات و هەڵگەڕانەوەت سەرزەنشتت دەکات. جا بزانە و ببینە کە بۆتان خراپ و تاڵە، کاتێک واز لە یەزدانی پەروەردگارت دەهێنیت و ترسی منت لە دڵدا نییە،» ئەوە فەرمایشتی یەزدانە، پەروەردگاری سوپاسالار.
20 ೨೦ ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
«تۆ لە کۆنەوە نیری خۆتت شکاندووە، کۆتەکانت پساندووە، گوتت:”تۆ ناپەرستم!“تۆ بە ڕاستی لەسەر هەموو گردێکی بەرز و لەژێر هەموو دارێکی سەوزدا وەک لەشفرۆشێک ڕاکشایت.
21 ೨೧ “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
من وەک شامێوێک لە نایابترین جۆر تۆم چاند، ئیتر چۆن لێم گۆڕایت، گۆڕایت بۆ زڕمێو؟
22 ೨೨ ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
هەرچەندە بە سۆدەش خۆت بشۆیت، زیاد سابوونیش لە خۆت بدەیت، هێشتا لەکەی تاوانەکەت لەبەردەممە.» ئەمە فەرمایشتی یەزدانی باڵادەستە.
23 ೨೩ “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
«ئیتر چۆن دەڵێیت:”گڵاو نەبووم، دوای بەعلەکان نەکەوتووم؟“تەماشای ڕێگاکەی خۆت بکە لە دۆڵەکە، بزانە چیت کردووە. تۆ وەک وشترە سووکەکەی کە لە ڕۆیشتندا بەلادادێی،
24 ೨೪ ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
وەک کەرەکێوییەکەی کە فێری چۆڵەوانیت، لەتاو هەوەسی با هەڵدەمژێت، لە کاتی بەتەڵەب هاتنی کێ دەیگێڕێتەوە؟ هەموو ئەوانەی داوای دەکەن بەبێ ماندووبوون لە کاتی زاوزێ دەیدۆزنەوە.
25 ೨೫ “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
ئەوەندە مەگەڕێ تاوەکو ئەوەی پێیەکانت ڕووت بێتەوە و گەرووت وشک بێت. بەڵام گوتت:”بێهوودەیە! نا! چونکە خوداوەندە بێگانەکانم خۆشویستووە، دوای ئەوان دەکەوم.“
26 ೨೬ ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
«وەک شەرمەزاری دز کە دەگیرێت، ئاوا بنەماڵەی ئیسرائیل شەرمەزاربوون، خۆیان و پاشا و میر و کاهین و پێغەمبەرەکانیان.
27 ೨೭ ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
هەریەکەیان بە دار دەڵێت:”تۆ باوکی منیت“و بە بەرد:”تۆ منت بووە.“پشتیان تێ کردم نەک ڕوو، بەڵام لە کاتی بەڵایاندا دەڵێن:”هەستە و ڕزگارمان بکە!“
28 ೨೮ ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
ئیتر کوا خوداوەندەکانت کە بۆ خۆت دروستت کردن؟ با هەستن، ئەگەر لە کاتی بەڵادا دەتوانن ڕزگارت بکەن! ئەی یەهودا، خوداوەندەکانت بەقەد ژمارەی شارۆچکەکانتن.»
29 ೨೯ ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
یەزدان دەفەرموێت: «بۆچی سکاڵام لێ دەکەن؟ هەمووتان لێم یاخی بوون،
30 ೩೦ ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
بەخۆڕایی سزای منداڵەکانتانم دا، تەمبێکردنیان وەرنەگرت، شمشێرەکانتان پێغەمبەرەکانتانی خوارد، وەک شێرێکی لەناوبەر.
31 ೩೧ ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
«ئەی نەوە، ئێوە ئاگاداری فەرمایشتی یەزدان بن: «ئایا بۆ ئیسرائیل بووم بە چۆڵەوانی، یان خاکی تاریک و تنۆک؟ بۆچی گەلەکەم دەڵێن:”بەڕەڵا بووین، ئیتر بۆ لات نایەینەوە؟“
32 ೩೨ ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
ئایا کچ خشڵی خۆی لەبیر دەکات، یان بووک جلی بووکێنی؟ بەڵام گەلەکەی خۆم ڕۆژانێکی بێشومار منیان لەبیر کرد.
33 ೩೩ ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
تۆ چەند لێزانیت لە گەڕان بەدوای خۆشەویستیدا! تەنانەت سۆزانییەکانیشت فێری ڕێگای خۆت کرد.
34 ೩೪ ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
هەروەها بە جلەکانتەوە دەبینرێت، خوێنی گیانی نەدارە بێتاوانەکان، هەرچەندە ئەوانت لە کاتی دیواربڕیندا نەگرت. بەڵام لە سەرووی هەموو ئەمانەشەوە
35 ೩೫ ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
دەڵێیت:”من بێتاوانم، خودا لە من تووڕە نییە.“بەڵام دادگاییت دەکەم، چونکە گوتت:”گوناهم نەکرد.“
36 ೩೬ ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
بۆچی زۆر دەگەڕێیت بۆ گۆڕینی ڕێگاکانت؟ هەروەها لە میسریش شەرمەزار دەبیت، وەک چۆن لە ئاشور شەرمەزار بوویت.
37 ೩೭ ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
هەروەها میسر بەجێدەهێڵیت و وەک دیل دەستەکانت بەسەر سەرتەوە دەبن، چونکە ئەوانەی تۆ پشتیان پێ دەبەستیت یەزدان ڕەتیکردنەوە، بەوان سەرکەوتوو نابیت.»

< ಯೆರೆಮೀಯನು 2 >