< ಯೆರೆಮೀಯನು 21 >

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,
הַדָּבָר אֲשֶׁר־הָיָה אֶֽל־יִרְמְיָהוּ מֵאֵת יְהֹוָה בִּשְׁלֹחַ אֵלָיו הַמֶּלֶךְ צִדְקִיָּהוּ אֶת־פַּשְׁחוּר בֶּן־מַלְכִּיָּה וְאֶת־צְפַנְיָה בֶן־מַעֲשֵׂיָה הַכֹּהֵן לֵאמֹֽר׃
2 “ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
דְּרׇשׁ־נָא בַעֲדֵנוּ אֶת־יְהֹוָה כִּי נְבוּכַדְרֶאצַּר מֶֽלֶךְ־בָּבֶל נִלְחָם עָלֵינוּ אוּלַי יַעֲשֶׂה יְהֹוָה אוֹתָנוּ כְּכׇל־נִפְלְאֹתָיו וְיַעֲלֶה מֵעָלֵֽינוּ׃
3 ಆಗ ಯೆರೆಮೀಯನು, “ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ” ಎಂದು ಅವರಿಗೆ ಹೇಳಿದನು.
וַיֹּאמֶר יִרְמְיָהוּ אֲלֵיהֶם כֹּה תֹֽאמְרֻן אֶל־צִדְקִיָּֽהוּ׃
4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.
כֹּה־אָמַר יְהֹוָה אֱלֹהֵי יִשְׂרָאֵל הִנְנִי מֵסֵב אֶת־כְּלֵי הַמִּלְחָמָה אֲשֶׁר בְּיֶדְכֶם אֲשֶׁר אַתֶּם נִלְחָמִים בָּם אֶת־מֶלֶךְ בָּבֶל וְאֶת־הַכַּשְׂדִּים הַצָּרִים עֲלֵיכֶם מִחוּץ לַחוֹמָה וְאָסַפְתִּי אוֹתָם אֶל־תּוֹךְ הָעִיר הַזֹּֽאת׃
5 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.
וְנִלְחַמְתִּי אֲנִי אִתְּכֶם בְּיָד נְטוּיָה וּבִזְרוֹעַ חֲזָקָה וּבְאַף וּבְחֵמָה וּבְקֶצֶף גָּדֽוֹל׃
6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.
וְהִכֵּיתִי אֶת־יֽוֹשְׁבֵי הָעִיר הַזֹּאת וְאֶת־הָאָדָם וְאֶת־הַבְּהֵמָה בְּדֶבֶר גָּדוֹל יָמֻֽתוּ׃
7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.
וְאַחֲרֵי־כֵן נְאֻם־יְהֹוָה אֶתֵּן אֶת־צִדְקִיָּהוּ מֶלֶךְ־יְהוּדָה וְאֶת־עֲבָדָיו ׀ וְאֶת־הָעָם וְאֶת־הַנִּשְׁאָרִים בָּעִיר הַזֹּאת מִן־הַדֶּבֶר ׀ מִן־הַחֶרֶב וּמִן־הָרָעָב בְּיַד נְבוּכַדְרֶאצַּר מֶלֶךְ־בָּבֶל וּבְיַד אֹֽיְבֵיהֶם וּבְיַד מְבַקְשֵׁי נַפְשָׁם וְהִכָּם לְפִי־חֶרֶב לֹא־יָחוּס עֲלֵיהֶם וְלֹא יַחְמֹל וְלֹא יְרַחֵֽם׃
8 “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
וְאֶל־הָעָם הַזֶּה תֹּאמַר כֹּה אָמַר יְהֹוָה הִנְנִי נֹתֵן לִפְנֵיכֶם אֶת־דֶּרֶךְ הַחַיִּים וְאֶת־דֶּרֶךְ הַמָּֽוֶת׃
9 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
הַיֹּשֵׁב בָּעִיר הַזֹּאת יָמוּת בַּחֶרֶב וּבָרָעָב וּבַדָּבֶר וְהַיּוֹצֵא וְנָפַל עַל־הַכַּשְׂדִּים הַצָּרִים עֲלֵיכֶם (יחיה) [וְחָיָה] וְהָיְתָה־לּוֹ נַפְשׁוֹ לְשָׁלָֽל׃
10 ೧೦ ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”
כִּי שַׂמְתִּי פָנַי בָּעִיר הַזֹּאת לְרָעָה וְלֹא לְטוֹבָה נְאֻם־יְהֹוָה בְּיַד־מֶלֶךְ בָּבֶל תִּנָּתֵן וּשְׂרָפָהּ בָּאֵֽשׁ׃
11 ೧೧ ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.
וּלְבֵית מֶלֶךְ יְהוּדָה שִׁמְעוּ דְּבַר־יְהֹוָֽה׃
12 ೧೨ ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
בֵּית דָּוִד כֹּה אָמַר יְהֹוָה דִּינוּ לַבֹּקֶר מִשְׁפָּט וְהַצִּילוּ גָזוּל מִיַּד עוֹשֵׁק פֶּן־תֵּצֵא כָאֵשׁ חֲמָתִי וּבָֽעֲרָה וְאֵין מְכַבֶּה מִפְּנֵי רֹעַ (מעלליהם) [מַעַלְלֵיכֶֽם]׃
13 ೧೩ ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,
הִנְנִי אֵלַיִךְ יֹשֶׁבֶת הָעֵמֶק צוּר הַמִּישֹׁר נְאֻם־יְהֹוָה הָאֹֽמְרִים מִֽי־יֵחַת עָלֵינוּ וּמִי יָבוֹא בִּמְעוֹנוֹתֵֽינוּ׃
14 ೧೪ ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
וּפָקַדְתִּי עֲלֵיכֶם כִּפְרִי מַעַלְלֵיכֶם נְאֻם־יְהֹוָה וְהִצַּתִּי אֵשׁ בְּיַעְרָהּ וְאָכְלָה כׇּל־סְבִיבֶֽיהָ׃

< ಯೆರೆಮೀಯನು 21 >