< ಯೆರೆಮೀಯನು 28 >

1 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
و در همان سال در ابتدای سلطنت صدقیا پادشاه یهودا در ماه پنجم ازسال چهارم واقع شد که حننیا ابن عزور نبی که ازجبعون بود مرا در خانه خداوند در حضور کاهنان و تمامی قوم خطاب کرده، گفت:۱
2 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
«یهوه صبایوت خدای اسرائیل بدین مضمون تکلم نموده و گفته است من یوغ پادشاه بابل را شکسته‌ام.۲
3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
بعد از انقضای دو سال من همه ظرف های خانه خداوند را که نبوکدنصر پادشاه بابل از این مکان گرفته، به بابل برد به اینجا بازخواهم آورد.۳
4 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
و خداوند می‌گوید من یکنیا ابن یهویاقیم پادشاه یهودا و جمیع اسیران یهودا را که به بابل رفته‌اند به اینجا باز خواهم آورد زیرا که یوغ پادشاه بابل را خواهم شکست.»۴
5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
آنگاه ارمیا نبی به حننیا نبی در حضورکاهنان و تمامی قومی که در خانه خداوند حاضربودند گفت؛۵
6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
پس ارمیا نبی گفت: «آمین خداوندچنین بکند و خداوند سخنانت را که به آنها نبوت کردی استوار نماید و ظروف خانه خداوند وجمیع اسیران را از بابل به اینجا باز بیاورد.۶
7 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
لیکن این کلام را که من به گوش تو و به سمع تمامی قوم می‌گویم بشنو:۷
8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
انبیایی که از زمان قدیم قبل ازمن و قبل از تو بوده‌اند درباره زمینهای بسیاروممالک عظیم به جنگ و بلا و وبا نبوت کرده‌اند.۸
9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.
اما آن نبی‌ای که بسلامتی نبوت کند اگر کلام آن نبی واقع گردد، آنگاه آن نبی معروف خواهد شدکه خداوند فی الحقیقه او را فرستاده است.»۹
10 ೧೦ ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
پس حننیا نبی یوغ را از گردن ارمیا نبی گرفته، آن را شکست.۱۰
11 ೧೧ “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
و حننیا به حضور تمامی قوم خطاب کرده، گفت: «خداوند چنین می‌گوید: بهمین طور یوغ نبوکدنصر پادشاه بابل را بعد ازانقضای دو سال از گردن جمیع امت‌ها خواهم شکست.» و ارمیا نبی به راه خود رفت.۱۱
12 ೧೨ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
و بعد از آنکه حننیا نبی یوغ را از گردن ارمیانبی شکسته بود کلام خداوند بر ارمیا نازل شده، گفت:۱۲
13 ೧೩ “ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
«برو و حننیا نبی را بگو: خداوند چنین می‌گوید: یوغهای چوبی را شکستی اما بجای آنها یوغهای آهنین را خواهی ساخت.۱۳
14 ೧೪ ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
زیرا که یهوه صبایوت خدای اسرائیل چنین می‌گوید: من یوغی آهنین بر گردن جمیع این امت‌ها نهادم تانبوکدنصر پادشاه بابل را خدمت نمایند پس او راخدمت خواهند نمود و نیز حیوانات صحرا را به او دادم.»۱۴
15 ೧೫ ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
آنگاه ارمیا نبی به حننیا نبی گفت: «ای حننیا بشنو! خداوند تو را نفرستاده است بلکه تواین قوم را وامیداری که به دروغ توکل نمایند.۱۵
16 ೧೬ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
بنابراین خداوند چنین می‌گوید: اینک من تو رااز روی این زمین دور می‌اندازم و تو امسال خواهی مرد زیرا که سخنان فتنه انگیز به ضدخداوند گفتی.»۱۶
17 ೧೭ ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
پس در ماه هفتم همانسال حننیا نبی مرد.۱۷

< ಯೆರೆಮೀಯನು 28 >