< ಯೆರೆಮೀಯನು 32 >

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
Esta es la palabra que vino a Jeremías de parte de Yahvé en el décimo año de Sedequías, rey de Judá, que era el año dieciocho de Nabucodonosor.
2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
En aquel tiempo el ejército del rey de Babilonia estaba sitiando Jerusalén. El profeta Jeremías estaba encerrado en el patio de la guardia, que estaba en la casa del rey de Judá.
3 ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Porque Sedequías, rey de Judá, le había hecho callar, diciendo: “¿Por qué profetizas y dices: “El Señor dice: “He aquí que yo entrego esta ciudad en manos del rey de Babilonia, y él la tomará;
4 ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
y Sedequías, rey de Judá, no escapará de la mano de los caldeos, sino que será entregado a la mano del rey de Babilonia, y hablará con él de boca a boca, y sus ojos verán sus ojos;
5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
y él llevará a Sedequías a Babilonia, y estará allí hasta que yo lo visite — dice Yahvé —, aunque luches con los caldeos, no prosperarás?”’”
6 ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
Jeremías dijo: “La palabra de Yahvé vino a mí, diciendo:
7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
‘He aquí que Hanamel, hijo de Salum, tu tío, vendrá a ti, diciendo: “Compra mi campo que está en Anatot; porque el derecho de redención es tuyo para comprarlo”’”.
8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
“Entonces Hanamel, el hijo de mi tío, vino a mí en el patio de la guardia, según la palabra de Yahvé, y me dijo: ‘Por favor, compra mi campo que está en Anatot, que está en la tierra de Benjamín; porque el derecho de herencia es tuyo, y la redención es tuya. Cómpralo para ti’. “Entonces supe que ésta era la palabra de Yahvé.
9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
Compré el campo que estaba en Anatot a Hanamel, hijo de mi tío, y le pesé el dinero, diecisiete siclos de plata.
10 ೧೦ ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
Firmé la escritura, la sellé, llamé a los testigos y le pesé el dinero en la balanza.
11 ೧೧ ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
Entonces tomé la escritura de la compra, tanto la que estaba sellada, que contenía los términos y condiciones, como la que estaba abierta;
12 ೧೨ ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
y entregué la escritura de la compra a Baruc hijo de Nerías, hijo de Maseías, en presencia de Hanamel, hijo de mi tío, y en presencia de los testigos que firmaron la escritura de la compra, ante todos los judíos que estaban sentados en el patio de la guardia.
13 ೧೩ ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
“Ordené a Baruc delante de ellos, diciendo:
14 ೧೪ “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
Yahvé de los Ejércitos, el Dios de Israel, dice: ‘Toma estas escrituras, esta escritura de compra que está sellada, y esta escritura que está abierta, y ponlas en una vasija de barro, para que duren muchos días’.
15 ೧೫ ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
Porque el Señor de los Ejércitos, el Dios de Israel, dice: ‘Todavía se comprarán casas, campos y viñedos en esta tierra.’
16 ೧೬ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
Después de entregar la escritura de compra a Baruc, hijo de Nerías, oré a Yahvé, diciendo
17 ೧೭ “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
“¡Ah, Señor Yahvé! He aquí que tú has hecho los cielos y la tierra con tu gran poder y con tu brazo extendido. No hay nada demasiado difícil para ti.
18 ೧೮ ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
Tú muestras tu bondad a miles de personas, y devuelves la iniquidad de los padres al seno de sus hijos después de ellos. El grande, el poderoso Dios, Yahvé de los Ejércitos es tu nombre:
19 ೧೯ ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
grande en el consejo y poderoso en la obra; cuyos ojos están abiertos a todos los caminos de los hijos de los hombres, para dar a cada uno según sus caminos y según el fruto de sus obras;
20 ೨೦ ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
que hiciste señales y prodigios en la tierra de Egipto, hasta el día de hoy, tanto en Israel como entre los demás hombres; y te hiciste un nombre, como lo es hoy;
21 ೨೧ ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
y sacaste a tu pueblo Israel de la tierra de Egipto con señales, con prodigios, con mano fuerte, con brazo extendido y con gran terror;
22 ೨೨ ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
y les diste esta tierra, que juraste a sus padres que les darías, una tierra que mana leche y miel.
23 ೨೩ ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
Entraron y la poseyeron, pero no obedecieron tu voz ni anduvieron en tu ley. No han hecho nada de todo lo que les mandaste hacer. Por eso has hecho que les sobrevenga todo este mal.
24 ೨೪ ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
“He aquí que se han construido rampas de asedio contra la ciudad para tomarla. La ciudad está en manos de los caldeos que luchan contra ella, a causa de la espada, del hambre y de la peste. Lo que has dicho ha sucedido. He aquí, tú lo ves.
25 ೨೫ ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
Tú me has dicho, Señor Yahvé, ‘Compra el campo por dinero y llama a los testigos’, mientras que la ciudad ha sido entregada en manos de los caldeos.”
26 ೨೬ ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
Entonces vino la palabra de Yahvé a Jeremías, diciendo:
27 ೨೭ “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
“He aquí que yo soy Yahvé, el Dios de toda carne. ¿Hay algo que sea demasiado difícil para mí?
28 ೨೮ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Por eso dice Yahvé: He aquí que yo entrego esta ciudad en manos de los caldeos y en manos de Nabucodonosor, rey de Babilonia, y él la tomará.
29 ೨೯ ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
Los caldeos, que luchan contra esta ciudad, vendrán y prenderán fuego a esta ciudad, y la quemarán con las casas en cuyos tejados han ofrecido incienso a Baal y han derramado libaciones a otros dioses, para provocarme a la ira.
30 ೩೦ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
“Porque los hijos de Israel y los hijos de Judá no han hecho más que lo malo ante mis ojos desde su juventud; porque los hijos de Israel no han hecho más que provocarme a la ira con la obra de sus manos, dice Yahvé.
31 ೩೧ ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
Porque esta ciudad ha sido para mí una provocación de mi ira y de mi enojo desde el día en que la construyeron hasta el día de hoy, para que la elimine de delante de mí,
32 ೩೨ ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
a causa de toda la maldad de los hijos de Israel y de los hijos de Judá, que han hecho para provocarme a la ira: ellos, sus reyes, sus príncipes, sus sacerdotes, sus profetas, los hombres de Judá y los habitantes de Jerusalén.
33 ೩೩ ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
Me han dado la espalda y no el rostro. A pesar de que les enseñé, madrugando y enseñándoles, no han escuchado para recibir instrucción.
34 ೩೪ ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
Pero pusieron sus abominaciones en la casa que se llama con mi nombre, para profanarla.
35 ೩೫ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
Edificaron los lugares altos de Baal, que están en el valle del hijo de Hinom, para hacer pasar por el fuego a sus hijos y a sus hijas a Moloc, cosa que yo no les mandé. Ni siquiera se me ocurrió que hicieran esta abominación, para hacer pecar a Judá”.
36 ೩೬ ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
Ahora bien, Yahvé, el Dios de Israel, dice con respecto a esta ciudad, de la cual ustedes dicen: “Ha sido entregada en manos del rey de Babilonia por la espada, por el hambre y por la peste”:
37 ೩೭ ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
“He aquí que yo los reuniré de todas las tierras a las que los he expulsado con mi cólera, con mi ira y con gran indignación, y los haré volver a este lugar. Haré que habiten con seguridad.
38 ೩೮ ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Entonces serán mi pueblo, y yo seré su Dios.
39 ೩೯ ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
Les daré un solo corazón y un solo camino, para que me teman para siempre, por su bien y el de sus hijos después de ellos.
40 ೪೦ ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Haré un pacto eterno con ellos, que no me apartaré de seguirlos para hacerles el bien. Pondré mi temor en sus corazones, para que no se aparten de mí.
41 ೪೧ ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
Sí, me alegraré por ellos para hacerles el bien, y los plantaré en esta tierra con seguridad, con todo mi corazón y con toda mi alma.”
42 ೪೨ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
Porque Yahvé dice: “Así como he traído todo este gran mal sobre este pueblo, así traeré sobre él todo el bien que le he prometido.
43 ೪೩ ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
Se comprarán campos en esta tierra, de la que ustedes dicen: ‘Está desolada, sin hombres ni animales. Está entregada en manos de los caldeos’.
44 ೪೪ ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.
Los hombrescomprarán campos por dinero, firmarán las escrituras, las sellarán y llamarán a testigos, en la tierra de Benjamín y en los lugares que rodean a Jerusalén, en las ciudades de Judá, en las ciudades de la región montañosa, en las ciudades de la llanura y en las ciudades del sur; porque haré que su cautiverio sea revertido”, dice el Señor.

< ಯೆರೆಮೀಯನು 32 >