< ಯೆರೆಮೀಯನು 40 >

1 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
הַדָּבָ֞ר אֲשֶׁר־הָיָ֤ה אֶֽל־יִרְמְיָ֙הוּ֙ מֵאֵ֣ת יְהוָ֔ה אַחַ֣ר ׀ שַׁלַּ֣ח אֹתֹ֗ו נְבוּזַרְאֲדָ֛ן רַב־טַבָּחִ֖ים מִן־הָֽרָמָ֑ה בְּקַחְתֹּ֣ו אֹתֹ֗ו וְהֽוּא־אָס֤וּר בָּֽאזִקִּים֙ בְּתֹ֨וךְ כָּל־גָּל֤וּת יְרוּשָׁלַ֙͏ִם֙ וִֽיהוּדָ֔ה הַמֻּגְלִ֖ים בָּבֶֽלָה׃
2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
וַיִּקַּ֥ח רַב־טַבָּחִ֖ים לְיִרְמְיָ֑הוּ וַיֹּ֣אמֶר אֵלָ֔יו יְהוָ֣ה אֱלֹהֶ֗יךָ דִּבֶּר֙ אֶת־הָרָעָ֣ה הַזֹּ֔את אֶל־הַמָּקֹ֖ום הַזֶּֽה׃
3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
וַיָּבֵ֥א וַיַּ֛עַשׂ יְהוָ֖ה כַּאֲשֶׁ֣ר דִּבֵּ֑ר כִּֽי־חֲטָאתֶ֤ם לַֽיהוָה֙ וְלֹֽא־שְׁמַעְתֶּ֣ם בְּקֹולֹ֔ו וְהָיָ֥ה לָכֶ֖ם דָּבָר (הַדָּבָ֥ר) הַזֶּֽה׃
4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
וְעַתָּ֞ה הִנֵּ֧ה פִתַּחְתִּ֣יךָ הַיֹּ֗ום מִֽן־הָאזִקִּים֮ אֲשֶׁ֣ר עַל־יָדֶךָ֒ אִם־טֹ֨וב בְּעֵינֶ֜יךָ לָבֹ֧וא אִתִּ֣י בָבֶ֗ל בֹּ֚א וְאָשִׂ֤ים אֶת־עֵינִי֙ עָלֶ֔יךָ וְאִם־רַ֧ע בְּעֵינֶ֛יךָ לָבֹֽוא־אִתִּ֥י בָבֶ֖ל חֲדָ֑ל רְאֵה֙ כָּל־הָאָ֣רֶץ לְפָנֶ֔יךָ אֶל־טֹ֨וב וְאֶל־הַיָּשָׁ֧ר בְּעֵינֶ֛יךָ לָלֶ֥כֶת שָׁ֖מָּה לֵֽךְ׃
5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
וְעֹודֶ֣נּוּ לֹֽא־יָשׁ֗וּב וְשֻׁ֡בָה אֶל־גְּדַלְיָ֣ה בֶן־אֲחִיקָ֣ם בֶּן־שָׁפָ֡ן אֲשֶׁר֩ הִפְקִ֨יד מֶֽלֶךְ־בָּבֶ֜ל בְּעָרֵ֣י יְהוּדָ֗ה וְשֵׁ֤ב אִתֹּו֙ בְּתֹ֣וךְ הָעָ֔ם אֹ֠ו אֶל־כָּל־הַיָּשָׁ֧ר בְּעֵינֶ֛יךָ לָלֶ֖כֶת לֵ֑ךְ וַיִּתֶּן־לֹ֧ו רַב־טַבָּחִ֛ים אֲרֻחָ֥ה וּמַשְׂאֵ֖ת וַֽיְשַׁלְּחֵֽהוּ׃
6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
וַיָּבֹ֧א יִרְמְיָ֛הוּ אֶל־גְּדַלְיָ֥ה בֶן־אֲחִיקָ֖ם הַמִּצְפָּ֑תָה וַיֵּ֤שֶׁב אִתֹּו֙ בְּתֹ֣וךְ הָעָ֔ם הַנִּשְׁאָרִ֖ים בָּאָֽרֶץ׃ ס
7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
וַיִּשְׁמְעוּ֩ כָל־שָׂרֵ֨י הַחֲיָלִ֜ים אֲשֶׁ֣ר בַּשָּׂדֶ֗ה הֵ֚מָּה וְאַנְשֵׁיהֶ֔ם כִּֽי־הִפְקִ֧יד מֶֽלֶךְ־בָּבֶ֛ל אֶת־גְּדַלְיָ֥הוּ בֶן־אֲחִיקָ֖ם בָּאָ֑רֶץ וְכִ֣י ׀ הִפְקִ֣יד אִתֹּ֗ו אֲנָשִׁ֤ים וְנָשִׁים֙ וָטָ֔ף וּמִדַּלַּ֣ת הָאָ֔רֶץ מֵאֲשֶׁ֥ר לֹֽא־הָגְל֖וּ בָּבֶֽלָה׃
8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
וַיָּבֹ֥אוּ אֶל־גְּדַלְיָ֖ה הַמִּצְפָּ֑תָה וְיִשְׁמָעֵ֣אל בֶּן־נְתַנְיָ֡הוּ וְיֹוחָנָ֣ן וְיֹונָתָ֣ן בְּנֵֽי־קָ֠רֵחַ וּשְׂרָיָ֨ה בֶן־תַּנְחֻ֜מֶת וּבְנֵ֣י ׀ עֹופַי (עֵיפַ֣י) הַנְּטֹפָתִ֗י וִֽיזַנְיָ֙הוּ֙ בֶּן־הַמַּ֣עֲכָתִ֔י הֵ֖מָּה וְאַנְשֵׁיהֶֽם׃
9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
וַיִּשָּׁבַ֨ע לָהֶ֜ם גְּדַלְיָ֨הוּ בֶן־אֲחִיקָ֤ם בֶּן־שָׁפָן֙ וּלְאַנְשֵׁיהֶ֣ם לֵאמֹ֔ר אַל־תִּֽירְא֖וּ מֵעֲבֹ֣וד הַכַּשְׂדִּ֑ים שְׁב֣וּ בָאָ֗רֶץ וְעִבְד֛וּ אֶת־מֶ֥לֶךְ בָּבֶ֖ל וְיִיטַ֥ב לָכֶֽם׃
10 ೧೦ ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
וַאֲנִ֗י הִנְנִ֤י יֹשֵׁב֙ בַּמִּצְפָּ֔ה לַֽעֲמֹד֙ לִפְנֵ֣י הַכַּשְׂדִּ֔ים אֲשֶׁ֥ר יָבֹ֖אוּ אֵלֵ֑ינוּ וְאַתֶּ֡ם אִסְפוּ֩ יַ֨יִן וְקַ֜יִץ וְשֶׁ֗מֶן וְשִׂ֙מוּ֙ בִּכְלֵיכֶ֔ם וּשְׁב֖וּ בְּעָרֵיכֶ֥ם אֲשֶׁר־תְּפַשְׂתֶּֽם׃
11 ೧೧ ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
וְגַ֣ם כָּֽל־הַיְּהוּדִ֡ים אֲשֶׁר־בְּמֹואָ֣ב ׀ וּבִבְנֵֽי־עַמֹּ֨ון וּבֶאֱדֹ֜ום וַאֲשֶׁ֤ר בְּכָל־הָֽאֲרָצֹות֙ שָֽׁמְע֔וּ כִּֽי־נָתַ֧ן מֶֽלֶךְ־בָּבֶ֛ל שְׁאֵרִ֖ית לִֽיהוּדָ֑ה וְכִי֙ הִפְקִ֣יד עֲלֵיהֶ֔ם אֶת־גְּדַלְיָ֖הוּ בֶּן־אֲחִיקָ֥ם בֶּן־שָׁפָֽן׃
12 ೧೨ ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
וַיָּשֻׁ֣בוּ כָל־הַיְּהוּדִ֗ים מִכָּל־הַמְּקֹמֹות֙ אֲשֶׁ֣ר נִדְּחוּ־שָׁ֔ם וַיָּבֹ֧אוּ אֶֽרֶץ־יְהוּדָ֛ה אֶל־גְּדַלְיָ֖הוּ הַמִּצְפָּ֑תָה וַיַּאַסְפ֛וּ יַ֥יִן וָקַ֖יִץ הַרְבֵּ֥ה מְאֹֽד׃ פ
13 ೧೩ ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
וְיֹֽוחָנָן֙ בֶּן־קָרֵ֔חַ וְכָל־שָׂרֵ֥י הַחֲיָלִ֖ים אֲשֶׁ֣ר בַּשָּׂדֶ֑ה בָּ֥אוּ אֶל־גְּדַלְיָ֖הוּ הַמִּצְפָּֽתָה׃
14 ೧೪ ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
וַיֹּאמְר֣וּ אֵלָ֗יו הֲיָדֹ֤עַ תֵּדַע֙ כִּ֞י בַּעֲלִ֣יס ׀ מֶ֣לֶךְ בְּנֵֽי־עַמֹּ֗ון שָׁלַח֙ אֶת־יִשְׁמָעֵ֣אל בֶּן־נְתַנְיָ֔ה לְהַכֹּתְךָ֖ נָ֑פֶשׁ וְלֹא־הֶאֱמִ֣ין לָהֶ֔ם גְּדַלְיָ֖הוּ בֶּן־אֲחִיקָֽם׃
15 ೧೫ ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
וְיֹוחָנָ֣ן בֶּן־קָרֵ֡חַ אָמַ֣ר אֶל־גְּדַלְיָהוּ֩ בַסֵּ֨תֶר בַּמִּצְפָּ֜ה לֵאמֹ֗ר אֵ֤לְכָה נָּא֙ וְאַכֶּה֙ אֶת־יִשְׁמָעֵ֣אל בֶּן־נְתַנְיָ֔ה וְאִ֖ישׁ לֹ֣א יֵדָ֑ע לָ֧מָּה יַכֶּ֣כָּה נֶּ֗פֶשׁ וְנָפֹ֙צוּ֙ כָּל־יְהוּדָ֔ה הַנִּקְבָּצִ֣ים אֵלֶ֔יךָ וְאָבְדָ֖ה שְׁאֵרִ֥ית יְהוּדָֽה׃
16 ೧೬ ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.
וַיֹּ֨אמֶר גְּדַלְיָ֤הוּ בֶן־אֲחִיקָם֙ אֶל־יֹוחָנָ֣ן בֶּן־קָרֵ֔חַ אַֽל־תַּעַשׂ (תַּעֲשֵׂ֖ה) אֶת־הַדָּבָ֣ר הַזֶּ֑ה כִּֽי־שֶׁ֛קֶר אַתָּ֥ה דֹבֵ֖ר אֶל־יִשְׁמָעֵֽאל׃ ס

< ಯೆರೆಮೀಯನು 40 >