< ಯೆರೆಮೀಯನು 46 >

1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
אֲשֶׁר הָיָה דְבַר־יְהוָה אֶל־יִרְמְיָהוּ הַנָּבִיא עַל־הַגּוֹיִֽם׃
2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
לְמִצְרַיִם עַל־חֵיל פַּרְעֹה נְכוֹ מֶלֶךְ מִצְרַיִם אֲשֶׁר־הָיָה עַל־נְהַר־פְּרָת בְּכַרְכְּמִשׁ אֲשֶׁר הִכָּה נְבֽוּכַדְרֶאצַּר מֶלֶךְ בָּבֶל בִּשְׁנַת הָֽרְבִיעִית לִיהוֹיָקִים בֶּן־יֹאשִׁיָּהוּ מֶלֶךְ יְהוּדָֽה׃
3 “ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!
עִרְכוּ מָגֵן וְצִנָּה וּגְשׁוּ לַמִּלְחָמָֽה׃
4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
אִסְרוּ הַסּוּסִים וַֽעֲלוּ הַפָּרָשִׁים וְהִֽתְיַצְּבוּ בְּכוֹבָעִים מִרְקוּ הָֽרְמָחִים לִבְשׁוּ הַסִּרְיֹנֹֽת׃
5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
מַדּוּעַ רָאִיתִי הֵמָּה חַתִּים נְסֹגִים אָחוֹר וְגִבּוֹרֵיהֶם יֻכַּתּוּ וּמָנוֹס נָסוּ וְלֹא הִפְנוּ מָגוֹר מִסָּבִיב נְאֻם־יְהוָֽה׃
6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.
אַל־יָנוּס הַקַּל וְאַל־יִמָּלֵט הַגִּבּוֹר צָפוֹנָה עַל־יַד נְהַר־פְּרָת כָּשְׁלוּ וְנָפָֽלוּ׃
7 ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?
מִי־זֶה כַּיְאֹר יַֽעֲלֶה כַּנְּהָרוֹת יִֽתְגָּעֲשׁוּ מֵימָֽיו׃
8 ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.
מִצְרַיִם כַּיְאֹר יַֽעֲלֶה וְכַנְּהָרוֹת יִתְגֹּעֲשׁוּ מָיִם וַיֹּאמֶר אַֽעֲלֶה אֲכַסֶּה־אֶרֶץ אֹבִידָה עִיר וְיֹשְׁבֵי בָֽהּ׃
9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!
עֲלוּ הַסּוּסִים וְהִתְהֹלְלוּ הָרֶכֶב וְיֵצְאוּ הַגִּבּוֹרִים כּוּשׁ וּפוּט תֹּפְשֵׂי מָגֵן וְלוּדִים תֹּפְשֵׂי דֹּרְכֵי קָֽשֶׁת׃
10 ೧೦ ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.
וְֽהַיּוֹם הַהוּא לַאדֹנָי יְהוִה צְבָאוֹת יוֹם נְקָמָה לְהִנָּקֵם מִצָּרָיו וְאָכְלָה חֶרֶב וְשָׂבְעָה וְרָוְתָה מִדָּמָם כִּי זֶבַח לַאדֹנָי יְהוִה צְבָאוֹת בְּאֶרֶץ צָפוֹן אֶל־נְהַר־פְּרָֽת׃
11 ೧೧ ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
עֲלִי גִלְעָד וּקְחִי צֳרִי בְּתוּלַת בַּת־מִצְרָיִם לַשָּׁוְא הרביתי הִרְבֵּית רְפֻאוֹת תְּעָלָה אֵין לָֽךְ׃
12 ೧೨ ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.
שָׁמְעוּ גוֹיִם קְלוֹנֵךְ וְצִוְחָתֵךְ מָלְאָה הָאָרֶץ כִּֽי־גִבּוֹר בְּגִבּוֹר כָּשָׁלוּ יַחְדָּיו נָפְלוּ שְׁנֵיהֶֽם׃
13 ೧೩ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
הַדָּבָר אֲשֶׁר דִּבֶּר יְהוָה אֶֽל־יִרְמְיָהוּ הַנָּבִיא לָבוֹא נְבֽוּכַדְרֶאצַּר מֶלֶךְ בָּבֶל לְהַכּוֹת אֶת־אֶרֶץ מִצְרָֽיִם׃
14 ೧೪ “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
הַגִּידוּ בְמִצְרַיִם וְהַשְׁמִיעוּ בְמִגְדּוֹל וְהַשְׁמִיעוּ בְנֹף וּבְתַחְפַּנְחֵס אִמְרוּ הִתְיַצֵּב וְהָכֵן לָךְ כִּֽי־אָכְלָה חֶרֶב סְבִיבֶֽיךָ׃
15 ೧೫ ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.
מַדּוּעַ נִסְחַף אַבִּירֶיךָ לֹא עָמַד כִּי יְהוָה הֲדָפֽוֹ׃
16 ೧೬ ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.
הִרְבָּה כּוֹשֵׁל גַּם־נָפַל אִישׁ אֶל־רֵעֵהוּ וַיֹּֽאמְרוּ קוּמָה ׀ וְנָשֻׁבָה אֶל־עַמֵּנוּ וְאֶל־אֶרֶץ מֽוֹלַדְתֵּנוּ מִפְּנֵי חֶרֶב הַיּוֹנָֽה׃
17 ೧೭ ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು.
קָרְאוּ שָׁם פַּרְעֹה מֶֽלֶךְ־מִצְרַיִם שָׁאוֹן הֶעֱבִיר הַמּוֹעֵֽד׃
18 ೧೮ ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
חַי־אָנִי נְאֻם־הַמֶּלֶךְ יְהוָה צְבָאוֹת שְׁמוֹ כִּי כְּתָבוֹר בֶּֽהָרִים וּכְכַרְמֶל בַּיָּם יָבֽוֹא׃
19 ೧೯ ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
כְּלֵי גוֹלָה עֲשִׂי לָךְ יוֹשֶׁבֶת בַּת־מִצְרָיִם כִּֽי־נֹף לְשַׁמָּה תִֽהְיֶה וְנִצְּתָה מֵאֵין יוֹשֵֽׁב׃
20 ೨೦ ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.
עֶגְלָה יְפֵֽה־פִיָּה מִצְרָיִם קֶרֶץ מִצָּפוֹן בָּא בָֽא׃
21 ೨೧ ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
גַּם־שְׂכִרֶיהָ בְקִרְבָּהּ כְּעֶגְלֵי מַרְבֵּק כִּֽי־גַם־הֵמָּה הִפְנוּ נָסוּ יַחְדָּיו לֹא עָמָדוּ כִּי יוֹם אֵידָם בָּא עֲלֵיהֶם עֵת פְּקֻדָּתָֽם׃
22 ೨೨ ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
קוֹלָהּ כַּנָּחָשׁ יֵלֵךְ כִּֽי־בְחַיִל יֵלֵכוּ וּבְקַרְדֻּמּוֹת בָּאוּ לָהּ כְּחֹטְבֵי עֵצִֽים׃
23 ೨೩ ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
כָּרְתוּ יַעְרָהּ נְאֻם־יְהוָה כִּי לֹא יֵֽחָקֵר כִּי רַבּוּ מֵֽאַרְבֶּה וְאֵין לָהֶם מִסְפָּֽר׃
24 ೨೪ ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ.
הֹבִישָׁה בַּת־מִצְרָיִם נִתְּנָה בְּיַד עַם־צָפֽוֹן׃
25 ೨೫ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
אָמַר יְהוָה צְבָאוֹת אֱלֹהֵי יִשְׂרָאֵל הִנְנִי פוֹקֵד אֶל־אָמוֹן מִנֹּא וְעַל־פַּרְעֹה וְעַל־מִצְרַיִם וְעַל־אֱלֹהֶיהָ וְעַל־מְלָכֶיהָ וְעַל־פַּרְעֹה וְעַל הַבֹּטְחִים בּֽוֹ׃
26 ೨೬ ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
וּנְתַתִּים בְּיַד מְבַקְשֵׁי נַפְשָׁם וּבְיַד נְבֽוּכַדְרֶאצַּר מֶֽלֶךְ־בָּבֶל וּבְיַד־עֲבָדָיו וְאַחֲרֵי־כֵן תִּשְׁכֹּן כִּֽימֵי־קֶדֶם נְאֻם־יְהוָֽה׃
27 ೨೭ ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
וְאַתָּה אַל־תִּירָא עַבְדִּי יַֽעֲקֹב וְאַל־תֵּחַת יִשְׂרָאֵל כִּי הִנְנִי מוֹשִֽׁעֲךָ מֵֽרָחוֹק וְאֶֽת־זַרְעֲךָ מֵאֶרֶץ שִׁבְיָם וְשָׁב יַעֲקוֹב וְשָׁקַט וְשַׁאֲנַן וְאֵין מַחֲרִֽיד׃
28 ೨೮ ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”
אַתָּה אַל־תִּירָא עַבְדִּי יַֽעֲקֹב נְאֻם־יְהוָה כִּי אִתְּךָ אָנִי כִּי אֶעֱשֶׂה כָלָה בְּכָֽל־הַגּוֹיִם ׀ אֲשֶׁר הִדַּחְתִּיךָ שָׁמָּה וְאֹֽתְךָ לֹא־אֶעֱשֶׂה כָלָה וְיִסַּרְתִּיךָ לַמִּשְׁפָּט וְנַקֵּה לֹא אֲנַקֶּֽךָּ׃

< ಯೆರೆಮೀಯನು 46 >