< ಯೆರೆಮೀಯನು 47 >

1 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
אֲשֶׁר הָיָה דְבַר־יְהוָה אֶל־יִרְמְיָהוּ הַנָּבִיא אֶל־פְּלִשְׁתִּים בְּטֶרֶם יַכֶּה פַרְעֹה אֶת־עַזָּֽה׃
2 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
כֹּה ׀ אָמַר יְהוָה הִנֵּה־מַיִם עֹלִים מִצָּפוֹן וְהָיוּ לְנַחַל שׁוֹטֵף וְיִשְׁטְפוּ אֶרֶץ וּמְלוֹאָהּ עִיר וְיֹשְׁבֵי בָהּ וְזָֽעֲקוּ הָֽאָדָם וְהֵילִל כֹּל יוֹשֵׁב הָאָֽרֶץ׃
3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
מִקּוֹל שַֽׁעֲטַת פַּרְסוֹת אַבִּירָיו מֵרַעַשׁ לְרִכְבּוֹ הֲמוֹן גַּלְגִּלָּיו לֹֽא־הִפְנוּ אָבוֹת אֶל־בָּנִים מֵֽרִפְיוֹן יָדָֽיִם׃
4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
עַל־הַיּוֹם הַבָּא לִשְׁדוֹד אֶת־כָּל־פְּלִשְׁתִּים לְהַכְרִית לְצֹר וּלְצִידוֹן כֹּל שָׂרִיד עֹזֵר כִּֽי־שֹׁדֵד יְהוָה אֶת־פְּלִשְׁתִּים שְׁאֵרִית אִי כַפְתּֽוֹר׃
5 “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
בָּאָה קָרְחָה אֶל־עַזָּה נִדְמְתָה אַשְׁקְלוֹן שְׁאֵרִית עִמְקָם עַד־מָתַי תִּתְגּוֹדָֽדִי׃
6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
הוֹי חֶרֶב לַֽיהוָה עַד־אָנָה לֹא תִשְׁקֹטִי הֵאָֽסְפִי אַל־תַּעְרֵךְ הֵרָגְעִי וָדֹֽמִּי׃
7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
אֵיךְ תִּשְׁקֹטִי וַֽיהוָה צִוָּה־לָהּ אֶֽל־אַשְׁקְלוֹן וְאֶל־חוֹף הַיָּם שָׁם יְעָדָֽהּ׃

< ಯೆರೆಮೀಯನು 47 >