< ಯೆರೆಮೀಯನು 49 >

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
암몬 자손에 대한 말씀이라 여호와께서 이같이 말씀하시되 이스라엘이 무자하냐 상속자가 없느냐 말감이 갓을 점령하며 그 백성이 그 성읍들에 거함은 어찜이뇨
2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
그러므로 나 여호와가 말하노라 보라 날이 이르리니 내가 전쟁소리로 암몬 자손의 랍바에 들리게 할 것이라 랍바는 거친 무더기가 되겠고 그 촌락들은 불에 탈 것이며 그 때에 이스라엘은 자기를 점령하였던 자를 점령하리라 여호와의 말이니라
3 “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
헤스본아 애곡할지어다 아이가 황폐하였도다 너희 랍바의 딸들아 부르짖을지어다 굵은 베를 감고 애통하며 울타리 가운데서 앞뒤로 달릴지어다 말감과 그 제사장들과 그 방백들이 다 사로잡혀 가리로다
4 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
타락한 딸아 어찌하여 골짜기 곧 네 흐르는 골짜기로 자랑하느냐 네가 어찌하여 재물을 의뢰하여 말하기를 누가 내게 오리요 하느냐
5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
주 만군의 여호와가 말하노라 보라 내가 두려움을 네 사방에서 네게 오게 하리니 너희 각 사람이 쫓겨서 바로 나갈 것이요 도망하는 자들을 모을 자가 없으리라
6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
그러나 그 후에 내가 암몬 자손의 포로로 돌아오게 하리라 여호와의 말이니라
7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
에돔에 대한 말씀이라 만군의 여호와께서 이같이 말씀하시되 데만에 다시는 지혜가 없게 되었느냐 명철한 자에게 모략이 끊어졌느냐 그들의 지혜가 없어졌느냐
8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
드단 거민아 돌이켜 도망할지어다 깊은 데 숨을지어다 내가 에서의 재난을 그에게 임하게 하여 그를 벌할 때가 이르게 하리로다
9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
포도를 거두는 자들이 네게 이르면 약간의 열매도 남기지 아니하겠고 밤에 도적이 오면 그 욕심이 차기까지 멸하느니라
10 ೧೦ ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
대저 내가 에서로 적신이 되게 하여 그 비밀한 곳들이 드러나게 하였나니 그가 그 몸을 숨길 수 없을 것이라 그 자손과 형제와 이웃이 멸망하였은즉 그가 없어졌느니라
11 ೧೧ ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
네 고아들을 남겨 두라 내가 그들을 살려 두리라 네 과부들은 나를 의지할 것이니라
12 ೧೨ ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
나 여호와가 이같이 말하노라 보라 이 잔을 마시지 않을 자도 마시지 않지 못하겠거늘 네가 형벌을 온전히 면하겠느냐 면하지 못하고 반드시 마시리라
13 ೧೩ ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
나 여호와가 말하노라 내가 나로 맹세하노니 보스라가 놀램과 수욕거리와 황폐함과 저줏거리가 될 것이요 그 모든 성읍이 영영히 황폐하리라
14 ೧೪ ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
내가 여호와에게서부터 오는 소식을 들었노라 사자를 열방 중에 보내어 이르시되 너희는 모여와서 그를 치며 일어나서 싸우라 하시도다
15 ೧೫ ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
여호와께서 가라사대 내가 너를 열방 중에 작게 하였고 사람들 중에 멸시를 받게 하였느니라
16 ೧೬ ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
바위 틈에 거하며 산꼭대기를 점령한 자여 스스로 두려운 자인줄로 여김과 네 마음의 교만이 너를 속였도다 네가 독수리 같이 보금자리를 높이 지었을지라도 내가 거기서 너를 끌어 내리리라 여호와의 말이니라
17 ೧೭ ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
에돔이 놀라운 것이 되리니 그리로 지나는 자마다 놀라며 그 모든 재앙을 인하여 비웃으리로다
18 ೧೮ ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
나 여호와가 말하노라 소돔과 고모라와 그 이웃 성읍들의 멸망된 것 같이 거기 거하는 사람이 없으며 그 중에 우거할 아무 인자가 없으리라
19 ೧೯ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
보라 사자가 요단의 수풀에서 올라오는 것 같이 그가 와서 견고한 처소를 칠 것이라 내가 즉시 그들을 거기서 쫓아내고 택한 자를 내가 그 위에 세우리니 나와 같는 자 누구며 나로 더불어 다툴 자 누구며 내 앞에 설 목자가 누구뇨
20 ೨೦ ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
그런즉 에돔에 대한 나 여호와의 도모와 데만 거민에 대하여 경영한 나 여호와의 뜻을 들으라 양떼의 어린 것들을 그들이 반드시 끌어가고 그 처소로 황무케 하리니
21 ೨೧ ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
그 넘어지는 소리에 땅이 진동하며 그 부르짖는 소리는 홍해에 들리리라
22 ೨೨ ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
보라 원수가 독수리 같이 날아와서 그 날개를 보스라 위에 펴는 그 날에 에돔 용사의 마음이 구로하는 여인 같으리라
23 ೨೩ ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
다메섹에 대한 말씀이라 하맛과 아르밧이 수치를 당하리니 이는 흉한 소문을 듣고 낙담함이라 바닷가에 슬픔이 있고 평안이 없도다
24 ೨೪ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
다메섹이 피곤하여 몸을 돌이켜 달아나려 하니 떨림이 그를 움켰고 해산하는 여인 같이 고통과 슬픔이 그를 잡았도다
25 ೨೫ ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
찬송의 성읍, 나의 즐거운 성읍이 어찌 버린 것이 되지 않겠느냐
26 ೨೬ ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
나 만군의 여호와가 말하노라 그런즉 그 날에 그의 청년들은 그 거리에 엎드러지겠고 모든 군사는 멸절될 것이며
27 ೨೭ ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
내가 다메섹의 성벽에 불을 놓으리니 벤하닷의 궁전이 살라지리라
28 ೨೮ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
바벨론 왕 느부갓네살에게 공격된 바 게달과 하솔 나라들에 대한 말씀이라 여호와께서 이같이 말씀하시되 너희는 일어나 게달로 올라가서 동방 자손들을 멸하라
29 ೨೯ “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
너희는 그 장막과 양떼를 취하며 휘장과 모든 기구와 약대를 빼앗아다가 소유를 삼고 그들을 향하여 외치기를 두려움이 사방에 있다 할지니라
30 ೩೦ ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
나 여호와가 말하노라 하솔 거민아 도망하라 멀리 가서 깊은 데 거하라 이는 바벨론 왕 느부갓네살이 너를 칠 모략과 너를 칠 계책을 정하였음이니라
31 ೩೧ ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
나 여호와가 말하노라 너는 일어나 저 평안하고 염려없이 거하는 백성 곧 성문이나 문빗장이 없이 홀로 거하는 국민을 치라
32 ೩೨ ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
그들의 약대들은 노략되겠고 그 많은 가축은 탈취를 당할것이라 내가 그 머리털을 모지게 깎는 자들을 사면에 흩고 그 재난을 각 방에서 오게 하리라 여호와의 말이니라
33 ೩೩ ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
하솔은 시랑의 거처가 되어 영원히 황무하리니 거기 거하는 사람이나 그 중에 우거하는 아무 인자가 없게 되리라
34 ೩೪ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
유다 왕 시드기야의 즉위한지 오래지 아니하여서 엘람에 대한 여호와의 말씀이 선지자 예레미야에게 임하니라 가라사대
35 ೩೫ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
나 만군의 여호와가 이같이 말하노라 보라 내가 엘람의 힘의 으뜸되는 활을 꺽을 것이요
36 ೩೬ ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
하늘의 사방에서부터 사방 바람을 엘람에 이르게 하여 그들을 사방으로 흩으리니 엘람에서 쫓겨난 자의 이르지 아니하는 나라가 없으리라
37 ೩೭ ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
나 여호와가 말하노라 내가 엘람으로 그 원수의 앞, 그 생명을 찾는 자의 앞에서 놀라게 할 것이며 내가 재앙 곧 나의 진노를 그 위에 내릴 것이며 내가 또 그 뒤로 칼을 보내어 그를 진멸하기까지 할 것이라
38 ೩೮ ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
내가 나의 위를 엘림에 베풀고 왕과 족장들을 그곳에서 멸하리라 여호와의 말이니라
39 ೩೯ ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
그러나 끝날에 이르러는 내가 엘람의 포로를 돌아오게 하리라 여호와의 말이니라

< ಯೆರೆಮೀಯನು 49 >