< ಯೋಬನು 16 >

1 ಆಗ ಯೋಬನು ಹೀಗೆ ಉತ್ತರಕೊಟ್ಟನು,
A Jov odgovori i reèe:
2 “ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.
Slušao sam mnogo takih stvari; svi ste dosadni tješioci.
3 ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?
Hoæe li biti kraj praznijem rijeèima? ili šta te tjera da tako odgovaraš?
4 ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
I ja bih mogao govoriti kao vi, da ste na mom mjestu, gomilati na vas rijeèi i mahati glavom na vas,
5 ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.
Mogao bih vas hrabriti ustima svojim, i micanje usana mojih olakšalo bi bol vaš.
6 ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.
Ako govorim, neæe odahnuti bol moj; ako li prestanem, hoæe li otiæi od mene?
7 ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ.
A sada me je umorio; opustošio si sav zbor moj.
8 ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.
Navukao si na me mrštine za svjedoèanstvo; i moja mrša podiže se na me, i svjedoèi mi u oèi.
9 ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
Gnjev njegov rastrže me, nenavidi me, škrguæe zubima na me, postavši mi neprijatelj sijeva oèima svojima na me.
10 ೧೦ ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೀಮಾರಿ ಹಾಕಿ, ನನ್ನ ದವಡೆಯ ಮೇಲೆ ಬಡಿದಿದ್ದಾರೆ.
Razvaljuju na me usta svoja, sramotno me biju po obrazima, skupljaju se na me.
11 ೧೧ ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.
Predao me je Bog nepravedniku, i u ruke bezbožnicima bacio me.
12 ೧೨ ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.
Bijah miran i zatr me, i uhvativši me za vrat smrska me i metnu me sebi za biljegu.
13 ೧೩ ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
Opkoliše me njegovi strijelci, cijepa mi bubrege nemilice, prosipa na zemlju žuè moju.
14 ೧೪ ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ.
Zadaje mi rane na rane, i udara na me kao junak.
15 ೧೫ ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.
Sašio sam kostrijet po koži svojoj, i uvaljao sam u prah slavu svoju.
16 ೧೬ ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.
Lice je moje podbulo od plaèa, na vjeðama je mojim smrtni sjen;
17 ೧೭ ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.
Premda nema nepravde u rukama mojim, i molitva je moja èista.
18 ೧೮ ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!
Zemljo, ne krij krvi što sam prolio, i neka nema mjesta vikanju mojemu.
19 ೧೯ ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
I sada eto na nebu je svjedok moj, svjedok je moj na visini.
20 ೨೦ ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.
Prijatelji se moji podruguju mnom; oko moje roni suze Bogu.
21 ೨೧ ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.
O da bi se èovjek mogao pravdati s Bogom, kao sin èovjeèiji s prijateljem svojim!
22 ೨೨ ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
Jer godine izbrojene navršuju se, i polazim putem odakle se neæu vratiti.

< ಯೋಬನು 16 >