< ಯೋಬನು 19 >

1 ಆಗ ಯೋಬನು ಪುನಃ ಇಂತೆಂದನು,
욥이 대답하여 가로되
2 “ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?
너희가 내 마음을 번뇌케 하며 말로 꺾기를 어느 때까지 하겠느냐
3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.
너희가 열 번이나 나를 꾸짖고 나를 학대하고도 부끄러워 아니하는구나
4 ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.
내가 과연 허물이 있었다 할지라도 그 허물이 내게만 있는 것이니
5 ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?
너희가 참으로 나를 향하여 자긍하며 내게 수치될 행위가 있다고 증명하려면 하려니와
6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.
하나님이 나를 굴하게 하시고 자기 그물로 나를 에워싸신 줄은 알아야 할지니라
7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
내가 포학을 당한다고 부르짖으나 응답이 없고 간구할지라도 신원함이 없구나
8 ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.
그가 내 길을 막아 지나지 못하게 하시고 내 첩경에 흑암을 두셨으며
9 ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.
나의 영광을 벗기시며 나의 면류관을 머리에서 취하시고
10 ೧೦ ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.
사면으로 나를 헐으시니 나는 죽었구나 내 소망을 나무 뽑듯 뽑으시고
11 ೧೧ ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.
나를 향하여 진노하시고 원수 같이 보시는구나
12 ೧೨ ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.
그 군대가 일제히 나아와서 길을 수축하고 나를 치며 내 장막을 둘러 진 쳤구나
13 ೧೩ ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
나의 형제들로 나를 멀리 떠나게 하시니 나를 아는 모든 사람이 내게 외인이 되었구나
14 ೧೪ ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.
내 친척은 나를 버리며 가까운 친구는 나를 잊었구나
15 ೧೫ ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.
내 집에 우거한 자와 내 계집종들은 나를 외인으로 여기니 내가 그들 앞에서 타국 사람이 되었구나
16 ೧೬ ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.
내가 내 종을 불러도 대답지 아니하니 내 입으로 그에게 청하여야 하겠구나
17 ೧೭ ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.
내 숨을 내 아내가 싫어하며 내 동포들도 혐의하는구나
18 ೧೮ ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.
어린 아이들이라도 나를 업신여기고 내가 일어나면 나를 조롱하는구나
19 ೧೯ ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.
나의 가까운 친구들이 나를 미워하며 나의 사랑하는 사람들이 돌이켜 나의 대적이 되었구나
20 ೨೦ ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.
내 피부와 살이 뼈에 붙었고 남은 것은 겨우 잇꺼풀뿐이로구나
21 ೨೧ ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.
나의 친구야 너희는 나를 불쌍히 여기라 나를 불쌍히 여기라 하나님의 손이 나를 치셨구나
22 ೨೨ ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?
너희가 어찌하여 하나님처럼 나를 핍박하느냐 내 살을 먹고도 부족하냐
23 ೨೩ ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!
나의 말이 곧 기록되었으면, 책에 씌어졌으면,
24 ೨೪ ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!
철필과 연으로 영영히 돌에 새겨졌으면 좋겠노라
25 ೨೫ ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
내가 알기에는 나의 구속자가 살아 계시니 후일에 그가 땅 위에 서실 것이라
26 ೨೬ ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
나의 이 가죽, 이것이 썩은 후에 내가 육체 밖에서 하나님을 보리라
27 ೨೭ ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.
내가 친히 그를 보리니 내 눈으로 그를 보기를 외인처럼 하지 않을 것이라 내 마음이 초급하구나
28 ೨೮ ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,
너희가 만일 이르기를 우리가 그를 어떻게 칠꼬 하며 또 이르기를 일의 뿌리가 그에게 있다 할진대
29 ೨೯ ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”
너희는 칼을 두려워할지니라 분노는 칼의 형벌을 부르나니 너희가 심판이 있는 줄을 알게 되리라

< ಯೋಬನು 19 >