< ಯೋಬನು 20 >

1 ಆ ಮೇಲೆ ನಾಮಾಥ್ಯನಾದ ಚೋಫರನು ಹೀಗೆಂದನು,
וַיַּעַן צֹפַר הַנַּֽעֲמָתִי וַיֹּאמַֽר׃
2 “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.
לָכֵן שְׂעִפַּי יְשִׁיבוּנִי וּבַעֲבוּר חוּשִׁי בִֽי׃
3 ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
מוּסַר כְּלִמָּתִי אֶשְׁמָע וְרוּחַ מִֽבִּינָתִי יַעֲנֵֽנִי׃
4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,
הֲזֹאת יָדַעְתָּ מִנִּי־עַד מִנִּי שִׂים אָדָם עֲלֵי־אָֽרֶץ׃
5 ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
כִּי רִנְנַת רְשָׁעִים מִקָּרוֹב וְשִׂמְחַת חָנֵף עֲדֵי־רָֽגַע׃
6 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,
אִם־יַעֲלֶה לַשָּׁמַיִם שִׂיאוֹ וְרֹאשׁוֹ לָעָב יַגִּֽיעַ׃
7 ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.
כְּֽגֶלֲלוֹ לָנֶצַח יֹאבֵד רֹאָיו יֹאמְרוּ אַיּֽוֹ׃
8 ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.
כַּחֲלוֹם יָעוּף וְלֹא יִמְצָאוּהוּ וְיֻדַּד כְּחֶזְיוֹן לָֽיְלָה׃
9 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ.
עַיִן שְׁזָפַתּוּ וְלֹא תוֹסִיף וְלֹא־עוֹד תְּשׁוּרֶנּוּ מְקוֹמֽוֹ׃
10 ೧೦ ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.
בָּנָיו יְרַצּוּ דַלִּים וְיָדָיו תָּשֵׁבְנָה אוֹנֽוֹ׃
11 ೧೧ ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
עַצְמוֹתָיו מָלְאוּ עלומו עֲלוּמָיו וְעִמּוֹ עַל־עָפָר תִּשְׁכָּֽב׃
12 ೧೨ ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ,
אִם־תַּמְתִּיק בְּפִיו רָעָה יַכְחִידֶנָּה תַּחַת לְשׁוֹנֽוֹ׃
13 ೧೩ ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ
יַחְמֹל עָלֶיהָ וְלֹא יַֽעַזְבֶנָּה וְיִמְנָעֶנָּה בְּתוֹךְ חִכּֽוֹ׃
14 ೧೪ ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು.
לַחְמוֹ בְּמֵעָיו נֶהְפָּךְ מְרוֹרַת פְּתָנִים בְּקִרְבּֽוֹ׃
15 ೧೫ ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.
חַיִל בָּלַע וַיְקִאֶנּוּ מִבִּטְנוֹ יוֹרִשֶׁנּוּ אֵֽל׃
16 ೧೬ ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು.
רֹאשׁ־פְּתָנִים יִינָק תַּֽהַרְגֵהוּ לְשׁוֹן אֶפְעֶֽה׃
17 ೧೭ ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.
אַל־יֵרֶא בִפְלַגּוֹת נַהֲרֵי נַחֲלֵי דְּבַשׁ וְחֶמְאָֽה׃
18 ೧೮ ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.
מֵשִׁיב יָגָע וְלֹא יִבְלָע כְּחֵיל תְּמוּרָתוֹ וְלֹא יַעֲלֹֽס׃
19 ೧೯ ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
כִּֽי־רִצַּץ עָזַב דַּלִּים בַּיִת גָּזַל וְלֹא יִבֶנֵֽהוּ׃
20 ೨೦ ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.
כִּי ׀ לֹא־יָדַע שָׁלֵו בְּבִטְנוֹ בַּחֲמוּדוֹ לֹא יְמַלֵּֽט׃
21 ೨೧ ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು.
אֵין־שָׂרִיד לְאָכְלוֹ עַל־כֵּן לֹא־יָחִיל טוּבֽוֹ׃
22 ೨೨ ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.
בִּמְלֹאות שִׂפְקוֹ יֵצֶר לוֹ כָּל־יַד עָמֵל תְּבוֹאֶֽנּוּ׃
23 ೨೩ ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.
יְהִי ׀ לְמַלֵּא בִטְנוֹ יְֽשַׁלַּח־בּוֹ חֲרוֹן אַפּוֹ וְיַמְטֵר עָלֵימוֹ בִּלְחוּמֽוֹ׃
24 ೨೪ ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.
יִבְרַח מִנֵּשֶׁק בַּרְזֶל תַּחְלְפֵהוּ קֶשֶׁת נְחוּשָֽׁה׃
25 ೨೫ ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
שָׁלַף וַיֵּצֵא מִגֵּוָה וּבָרָק מִֽמְּרֹרָתוֹ יַהֲלֹךְ עָלָיו אֵמִֽים׃
26 ೨೬ ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.
כָּל־חֹשֶׁךְ טָמוּן לִצְפּוּנָיו תְּאָכְלֵהוּ אֵשׁ לֹֽא־נֻפָּח יֵרַע שָׂרִיד בְּאָהֳלֽוֹ׃
27 ೨೭ ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.
יְגַלּוּ שָׁמַיִם עֲוֺנוֹ וְאֶרֶץ מִתְקוֹמָמָה לֽוֹ׃
28 ೨೮ ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
יִגֶל יְבוּל בֵּיתוֹ נִגָּרוֹת בְּיוֹם אַפּֽוֹ׃
29 ೨೯ ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”
זֶה ׀ חֵֽלֶק־אָדָם רָשָׁע מֵאֱלֹהִים וְנַחֲלַת אִמְרוֹ מֵאֵֽל׃

< ಯೋಬನು 20 >