< ಯೋಬನು 22 >

1 ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
Kisha Elifazi Mtemani akajibu na kusema,
2 “ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.
Je mtu anaweza kumfaa Mungu “Je mwenye hekima anaweza kufaa kwake.
3 ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
Je inafurahisha kwa Mwenyezi ikiwa u mwenye haki? Je ni faida yake ukiyafanya safi maisha yako?
4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
Je ni kwa sababu ya uchaji wako kwake hata akukemee na kukuadhibu?
5 ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?
Je si kwa sababu ya wingi wa uovu wako? Je hakuna mwisho wa makosa yako?
6 ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.
Kwa maana umechukua dhamana kutoka kwa ndugu yako bila sababu; umechukua mavazi ya mtu na kumwacha uchi.
7 ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.
Haukuwapa wenye kiu maji ya kunywea; umewanyima chakula wenye njaa
8 ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ.
japokuwa wewe, mwenye uwezo, uliimiliki nchi, japokuwa wewe, mwenye kuheshimiwa, uliishi ndani yake.
9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.
Umewaacha wajane waondoke bila kitu; umewatesa yatima.
10 ೧೦ ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.
Kwa hiyo, mabaya yanakuzunguka, na hofu za ghafla zinakusumbua.
11 ೧೧ ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.
Kuna giza, hata usione; gharika inakufunika.
12 ೧೨ ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!
Je Mungu hayupo juu mbinguni? Anaangalia juu ya nyota, jinsi zilivyo juu!
13 ೧೩ ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
Unasema, 'Mungu anajua nini? Je anaweza kuamua kupitia giza totoro?
14 ೧೪ ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.
Mawingu ni kifuniko chake, hata asituone; anatembea anga la mbinguni.'
15 ೧೫ ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
Je utayaishi maisha ya zamani walioishi waovu -
16 ೧೬ ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.
walioondolewa kabla ya siku zao, ambao misingi yao imeondolewa kama mto,
17 ೧೭ ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
waliomwambia Mungu, 'Ondoka kwetu'; waliosema, 'Mwenyezi anaweza kututenda nini?
18 ೧೮ ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
Hata hivyo bado alizijaza nyumba zao kwa mema; mipango ya waovu iko mbali nami.
19 ೧೯ ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.
Wenye haki wanayaona yawapatayo waovu na kufurahi; wasio na hatia wanawacheka kwa dhihaka.
20 ೨೦ ‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
Wanasema, 'Bila shaka walioinuka kinyume chetu wameondolewa; moto umeteketeza mali zao.'
21 ೨೧ ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.
Basi patana na Mungu na uwe na amani naye; kwa njia hiyo, mema yatakujia.
22 ೨೨ ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.
Nakusihi, pokea, maelekezo yake; uyatii maneno yake.
23 ೨೩ ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
Ukimrudia Mwenyezi, utajengwa, ukiacha kutenda uovu makaoni mwako.
24 ೨೪ ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.
Weka hazina zako mavumbini, dhahabu ya Ofiri kati ya mawe ya vijito,
25 ೨೫ ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
na Mwenyezi atakuwa hazina zako, fedha ya thamani kwako.
26 ೨೬ ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.
Nawe utajifurahisha katika Mwenyezi; utamwangalia Mungu.
27 ೨೭ ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
Utamwomba, naye atakusikiliza; utamtolea nadhiri.
28 ೨೮ ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.
Lakini pia utatamka lolote, nawe utapewa; nuru itaangaza maishani mwako.
29 ೨೯ ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.
Mungu humshusha mwenye kiburi, naye humwinua mnyenyekevu.
30 ೩೦ ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”
Atamwokoa asiye na hatia; utaokolewa kupitia usafi wa mikono yako.”

< ಯೋಬನು 22 >