< ಯೋಬನು 25 >

1 ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, 2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. 3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? 4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? 5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. 6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”

< ಯೋಬನು 25 >