< ಯೋಬನು 36 >

1 ಆಮೇಲೆ ಎಲೀಹು ಮತ್ತೆ ಹೀಗೆಂದನು,
エリフまた言詞を繼て曰く
2 “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.
暫らく我に容せ我なんぢに示すこと有ん 尚神のために言ふべき事あればなり
3 ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.
われ廣くわが知識を取り我の造化主に正義を歸せんとす
4 ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
わが言語は眞實に虚僞ならず 知識の完全き者なんぢの前にあり
5 ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.
視よ神は權能ある者にましませども何をも藐視めたまはず その了知の能力は大なり
6 ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.
惡しき者を生し存ず 艱難者のために審判を行ひたまふ
7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
義しき者に目を離さず 位にある王等とともに永遠に坐せしめて之を貴くしたまふ
8 ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
もし彼ら鏈索に繋がれ 艱難の繩にかかる時は
9 ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.
彼らの所行と愆尤とを示してその驕れるを知せ
10 ೧೦ ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.
彼らの耳を開きて敎を容れしめ かつ惡を離れて歸れよと彼らに命じたまふ
11 ೧೧ ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.
もし彼ら聽したがひて之に事へなば繁昌てその日を送り 樂しくその年を渉らん
12 ೧೨ ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.
若かれら聽したがはずば刀劍にて亡び 知識を得ずして死なん
13 ೧೩ ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
しかれども心の邪曲なる者等は忿怒を蓄はへ 神に縛しめらるるとも祈ることを爲ず
14 ೧೪ ಯೌವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು.
かれらは年わかくして死亡せ 男娼とその生命をひとしうせん
15 ೧೫ ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.
神は艱難者を艱難によりて救ひ 之が耳を虐遇によりて開きたまふ
16 ೧೬ ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.
然ば神また汝を狹きところより出して狹からぬ廣き所に移したまふあらん 而して汝の席に陳ぬる物は凡て肥たる物ならん
17 ೧೭ ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.
今は惡人の鞫罰なんぢの身に充り 審判と公義となんぢを執ふ
18 ೧೮ ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!
なんぢ忿怒に誘はれて嘲笑に陷いらざるやう愼しめよ 收贖の大なるが爲に自ら誤るなかれ
19 ೧೯ ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?
なんぢの號叫なんぢを艱難の中より出さんや 如何に力を盡すとも所益あらじ
20 ೨೦ ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.
世の人のその處より絶る其夜を慕ふなかれ
21 ೨೧ ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.
愼しみて惡に傾むくなかれ 汝は艱難よりも寧ろ之を取んとせり
22 ೨೨ ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?
それ神はその權能をもて大なる事を爲したまふ 誰か能く彼のごとくに敎晦を埀んや
23 ೨೩ ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?
たれか彼のためにその道を定めし者あらんや 誰かなんぢは惡き事をなせりと言ふことを得ん
24 ೨೪ ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.
なんぢ神の御所爲を讚歎ふることを忘れざれ これ世の人の歌ひ崇むる所なり
25 ೨೫ ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ.
人みな之を仰ぎ觀る 遠き方より人これを視たてまつるなり
26 ೨೬ ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.
神は大なる者にいまして我儕かれを知たてまつらず その御年の數は計り知るべからず
27 ೨೭ ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.
かれ水を細にして引あげたまへば霧の中に滴り出て雨となるに
28 ೨೮ ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು.
雲これを降せて人々の上に沛然に灌ぐなり
29 ೨೯ ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?
たれか能く雲の舒展る所以 またその幕屋の響く所以を了知んや
30 ೩೦ ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.
視よ彼その光明を自己の周圍に繞らし また海の底をも蔽ひたまひ
31 ೩೧ ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.
これらをもて民を鞫き また是等をもて食物を豐饒に賜ひ
32 ೩೨ ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.
電光をもてその兩手を包み その電光に命じて敵を撃しめたまふ
33 ೩೩ ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”
その鳴聲かれを顯はし 家畜すらも彼の來ますを知らすなり

< ಯೋಬನು 36 >