< ಯೋಬನು 42 >

1 ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
Potem je Job odgovoril Gospodu in rekel:
2 “ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
»Vem, da lahko narediš vsako stvar in da nobena misel ne more biti zadržana pred teboj.
3 ‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.
Kdo je tisti, ki skriva nasvet brez spoznanja? Torej sem rekel, da ne razumem. Stvari zame prečudovite, ki jih nisem poznal.
4 ದಯಮಾಡಿ ಕೇಳು, ನಾನೇ ಮಾತನಾಡುವೆನು; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು ಎಂದು ಅಪ್ಪಣೆಕೊಟ್ಟೆ.
Prisluhni, rotim te in bom govoril. Zahteval bom od tebe in oznani mi.
5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
Slišal sem o tebi po poslušanju svojega ušesa. Toda sedaj te vidi moje oko.
6 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
Torej preziram samega sebe in se kesam v prahu in pepelu.«
7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.
To je bilo tako, da je potem, ko je Gospod te besede govoril Jobu, Gospod rekel Elifázu Temáncu: »Moj bes je vnet zoper tebe in zoper tvoja dva prijatelja, kajti o meni niste govorili stvari, ki je pravilna, kakor je [govoril] moj služabnik Job.
8 ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.
Zatorej si vzemite k sebi sedem bikcev in sedem ovnov in pojdite k mojemu služabniku Jobu in zase darujte žgalno daritev, moj služabnik Job pa bo molil za vas, kajti njega bom sprejel, da ne bom z vami postopal po vaši neumnosti, v tem, da niste govorili o meni besede, ki je pravilna, kakor moj služabnik Job.«
9 ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.
Tako so Elifáz Temánec, Bildád Suhéjec in Cofár Naámčan odšli in storili glede na to, kakor jim je Gospod zapovedal, Gospod pa je sprejel Joba.
10 ೧೦ ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
Gospod je obrnil Jobovo ujetništvo, ko je molil za svoje prijatelje. Gospod je dal Jobu tudi dvakrat toliko, kot je imel poprej.
11 ೧೧ ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.
Potem so prišli k njemu vsi njegovi bratje in vse njegove sestre in vsi, ki so bili poprej izmed njegovih znancev in so v njegovi hiši z njim jedli kruh. Sočustvovali so in ga tolažili glede vsega zla, ki ga je Gospod privedel nadenj. Prav tako mu je vsak človek dal kos denarja in vsakdo uhan iz zlata.
12 ೧೨ ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.
Tako je Gospod bolj blagoslovil Jobov poznejši konec kakor njegov začetek, kajti imel je štirinajst tisoč ovc, šest tisoč kamel, tisoč jarmov volov in tisoč oslic.
13 ೧೩ ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Imel je tudi sedem sinov in tri hčere.
14 ೧೪ ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.
Ime prve je imenoval Golobica, ime druge Dišavka in ime tretje Lepotica.
15 ೧೫ ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.
Po vsej deželi ni bilo najti tako lepih žensk kakor Jobove hčere in njihov oče jim je dal dediščino med njihovimi brati.
16 ೧೬ ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು.
Potem je Job živel sto štirideset let in videl svoje sinove in svojih sinov sinove, celó štiri rodove.
17 ೧೭ ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.
Tako je Job umrl, star in izpolnjen z dnevi.

< ಯೋಬನು 42 >