< ಯೋಬನು 1 >

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
אִ֛ישׁ הָיָ֥ה בְאֶֽרֶץ־ע֖וּץ אִיֹּ֣וב שְׁמֹ֑ו וְהָיָ֣ה ׀ הָאִ֣ישׁ הַה֗וּא תָּ֧ם וְיָשָׁ֛ר וִירֵ֥א אֱלֹהִ֖ים וְסָ֥ר מֵרָֽע׃
2 ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.
וַיִּוָּ֥לְדוּ לֹ֛ו שִׁבְעָ֥ה בָנִ֖ים וְשָׁלֹ֥ושׁ בָּנֹֽות׃
3 ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
וַיְהִ֣י מִ֠קְנֵהוּ שִֽׁבְעַ֨ת אַלְפֵי־צֹ֜אן וּשְׁלֹ֧שֶׁת אַלְפֵ֣י גְמַלִּ֗ים וַחֲמֵ֨שׁ מֵאֹ֤ות צֶֽמֶד־בָּקָר֙ וַחֲמֵ֣שׁ מֵאֹ֣ות אֲתֹונֹ֔ות וַעֲבֻדָּ֖ה רַבָּ֣ה מְאֹ֑ד וַיְהִי֙ הָאִ֣ישׁ הַה֔וּא גָּדֹ֖ול מִכָּל־בְּנֵי־קֶֽדֶם׃
4 ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
וְהָלְכ֤וּ בָנָיו֙ וְעָשׂ֣וּ מִשְׁתֶּ֔ה בֵּ֖ית אִ֣ישׁ יֹומֹ֑ו וְשָׁלְח֗וּ וְקָרְאוּ֙ לִשְׁלֹ֣שֶׁת אַחְיֹתֵיהֶם (אַחְיֹֽותֵיהֶ֔ם) לֶאֱכֹ֥ל וְלִשְׁתֹּ֖ות עִמָּהֶֽם׃
5 ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
וַיְהִ֡י כִּ֣י הִקִּיפֽוּ֩ יְמֵ֨י הַמִּשְׁתֶּ֜ה וַיִּשְׁלַ֧ח אִיֹּ֣וב וַֽיְקַדְּשֵׁ֗ם וְהִשְׁכִּ֣ים בַּבֹּקֶר֮ וְהֶעֱלָ֣ה עֹלֹות֮ מִסְפַּ֣ר כֻּלָּם֒ כִּ֚י אָמַ֣ר אִיֹּ֔וב אוּלַי֙ חָטְא֣וּ בָנַ֔י וּבֵרֲכ֥וּ אֱלֹהִ֖ים בִּלְבָבָ֑ם כָּ֛כָה יַעֲשֶׂ֥ה אִיֹּ֖וב כָּל־הַיָּמִֽים׃ פ
6 ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.
וַיְהִ֣י הַיֹּ֔ום וַיָּבֹ֙אוּ֙ בְּנֵ֣י הָאֱלֹהִ֔ים לְהִתְיַצֵּ֖ב עַל־יְהוָ֑ה וַיָּבֹ֥וא גַֽם־הַשָּׂטָ֖ן בְּתֹוכָֽם׃
7 ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.
וַיֹּ֧אמֶר יְהוָ֛ה אֶל־הַשָּׂטָ֖ן מֵאַ֣יִן תָּבֹ֑א וַיַּ֨עַן הַשָּׂטָ֤ן אֶת־יְהוָה֙ וַיֹּאמַ֔ר מִשּׁ֣וּט בָּאָ֔רֶץ וּמֵֽהִתְהַלֵּ֖ךְ בָּֽהּ׃
8 ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
וַיֹּ֤אמֶר יְהוָה֙ אֶל־הַשָּׂטָ֔ן הֲשַׂ֥מְתָּ לִבְּךָ֖ עַל־עַבְדִּ֣י אִיֹּ֑וב כִּ֣י אֵ֤ין כָּמֹ֙הוּ֙ בָּאָ֔רֶץ אִ֣ישׁ תָּ֧ם וְיָשָׁ֛ר יְרֵ֥א אֱלֹהִ֖ים וְסָ֥ר מֵרָֽע׃
9 ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?
וַיַּ֧עַן הַשָּׂטָ֛ן אֶת־יְהוָ֖ה וַיֹּאמַ֑ר הַֽחִנָּ֔ם יָרֵ֥א אִיֹּ֖וב אֱלֹהִֽים׃
10 ೧೦ ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.
הֲלֹֽא־אַתְּ (אַ֠תָּה) שַׂ֣כְתָּ בַעֲדֹ֧ו וּבְעַד־בֵּיתֹ֛ו וּבְעַ֥ד כָּל־אֲשֶׁר־לֹ֖ו מִסָּבִ֑יב מַעֲשֵׂ֤ה יָדָיו֙ בֵּרַ֔כְתָּ וּמִקְנֵ֖הוּ פָּרַ֥ץ בָּאָֽרֶץ׃
11 ೧೧ ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.
וְאוּלָם֙ שְֽׁלַֽח־נָ֣א יָֽדְךָ֔ וְגַ֖ע בְּכָל־אֲשֶׁר־לֹ֑ו אִם־לֹ֥א עַל־פָּנֶ֖יךָ יְבָרֲכֶֽךָּ׃
12 ೧೨ ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
וַיֹּ֨אמֶר יְהוָ֜ה אֶל־הַשָּׂטָ֗ן הִנֵּ֤ה כָל־אֲשֶׁר־לֹו֙ בְּיָדֶ֔ךָ רַ֣ק אֵלָ֔יו אַל־תִּשְׁלַ֖ח יָדֶ֑ךָ וַיֵּצֵא֙ הַשָּׂטָ֔ן מֵעִ֖ם פְּנֵ֥י יְהוָֽה׃
13 ೧೩ ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,
וַיְהִ֖י הַיֹּ֑ום וּבָנָ֨יו וּבְנֹתָ֤יו אֹֽכְלִים֙ וְשֹׁתִ֣ים יַ֔יִן בְּבֵ֖ית אֲחִיהֶ֥ם הַבְּכֹֽור׃
14 ೧೪ ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.
וּמַלְאָ֛ךְ בָּ֥א אֶל־אִיֹּ֖וב וַיֹּאמַ֑ר הַבָּקָר֙ הָי֣וּ חֹֽרְשֹׁ֔ות וְהָאֲתֹנֹ֖ות רֹעֹ֥ות עַל־יְדֵיהֶֽם׃
15 ೧೫ ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.
וַתִּפֹּ֤ל שְׁבָא֙ וַתִּקָּחֵ֔ם וְאֶת־הַנְּעָרִ֖ים הִכּ֣וּ לְפִי־חָ֑רֶב וָֽאִמָּ֨לְטָ֧ה רַק־אֲנִ֛י לְבַדִּ֖י לְהַגִּ֥יד לָֽךְ׃
16 ೧೬ ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
עֹ֣וד ׀ זֶ֣ה מְדַבֵּ֗ר וְזֶה֮ בָּ֣א וַיֹּאמַר֒ אֵ֣שׁ אֱלֹהִ֗ים נָֽפְלָה֙ מִן־הַשָּׁמַ֔יִם וַתִּבְעַ֥ר בַּצֹּ֛אן וּבַנְּעָרִ֖ים וַתֹּאכְלֵ֑ם וָאִמָּ֨לְטָ֧ה רַק־אֲנִ֛י לְבַדִּ֖י לְהַגִּ֥יד לָֽךְ׃
17 ೧೭ ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
עֹ֣וד ׀ זֶ֣ה מְדַבֵּ֗ר וְזֶה֮ בָּ֣א וַיֹּאמַר֒ כַּשְׂדִּ֞ים שָׂ֣מוּ ׀ שְׁלֹשָׁ֣ה רָאשִׁ֗ים וַֽיִּפְשְׁט֤וּ עַל־הַגְּמַלִּים֙ וַיִּקָּח֔וּם וְאֶת־הַנְּעָרִ֖ים הִכּ֣וּ לְפִי־חָ֑רֶב וָאִמָּ֨לְטָ֧ה רַק־אֲנִ֛י לְבַדִּ֖י לְהַגִּ֥יד לָֽךְ׃
18 ೧೮ ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,
עַ֚ד זֶ֣ה מְדַבֵּ֔ר וְזֶ֖ה בָּ֣א וַיֹּאמַ֑ר בָּנֶ֨יךָ וּבְנֹותֶ֤יךָ אֹֽכְלִים֙ וְשֹׁתִ֣ים יַ֔יִן בְּבֵ֖ית אֲחִיהֶ֥ם הַבְּכֹֽור׃
19 ೧೯ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
וְהִנֵּה֩ ר֨וּחַ גְּדֹולָ֜ה בָּ֣אָה ׀ מֵעֵ֣בֶר הַמִּדְבָּ֗ר וַיִּגַּע֙ בְּאַרְבַּע֙ פִּנֹּ֣ות הַבַּ֔יִת וַיִּפֹּ֥ל עַל־הַנְּעָרִ֖ים וַיָּמ֑וּתוּ וָאִמָּ֨לְטָ֧ה רַק־אֲנִ֛י לְבַדִּ֖י לְהַגִּ֥יד לָֽךְ׃
20 ೨೦ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
וַיָּ֤קָם אִיֹּוב֙ וַיִּקְרַ֣ע אֶת־מְעִלֹ֔ו וַיָּ֖גָז אֶת־רֹאשֹׁ֑ו וַיִּפֹּ֥ל אַ֖רְצָה וַיִּשְׁתָּֽחוּ׃
21 ೨೧ “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
וַיֹּאמֶר֩ עָרֹ֨ם יָצָתִי (יָצָ֜אתִי) מִבֶּ֣טֶן אִמִּ֗י וְעָרֹם֙ אָשׁ֣וּב שָׁ֔מָה יְהוָ֣ה נָתַ֔ן וַיהוָ֖ה לָקָ֑ח יְהִ֛י שֵׁ֥ם יְהוָ֖ה מְבֹרָֽךְ׃
22 ೨೨ ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.
בְּכָל־זֹ֖את לֹא־חָטָ֣א אִיֹּ֑וב וְלֹא־נָתַ֥ן תִּפְלָ֖ה לֵאלֹהִֽים׃ פ

< ಯೋಬನು 1 >