< ಯೋಹಾನನು 11 >

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
有一個患病的人,名叫拉撒路,住在伯大尼,就是馬利亞和她姊姊馬大的村莊。
2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
這馬利亞就是那用香膏抹主,又用頭髮擦他腳的;患病的拉撒路是她的兄弟。
3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
她姊妹兩個就打發人去見耶穌,說:「主啊,你所愛的人病了。」
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
耶穌聽見,就說:「這病不至於死,乃是為上帝的榮耀,叫上帝的兒子因此得榮耀。」
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
耶穌素來愛馬大和她妹子並拉撒路。
6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
聽見拉撒路病了,就在所居之地仍住了兩天。
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
然後對門徒說:「我們再往猶太去吧。」
8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
門徒說:「拉比,猶太人近來要拿石頭打你,你還往那裏去嗎?」
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
耶穌回答說:「白日不是有十二小時嗎?人在白日走路,就不致跌倒,因為看見這世上的光。
10 ೧೦ ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
若在黑夜走路,就必跌倒,因為他沒有光。」
11 ೧೧ ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
耶穌說了這話,隨後對他們說:「我們的朋友拉撒路睡了,我去叫醒他。」
12 ೧೨ ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
門徒說:「主啊,他若睡了,就必好了。」
13 ೧೩ ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
耶穌這話是指着他死說的,他們卻以為是說照常睡了。
14 ೧೪ ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
耶穌就明明地告訴他們說:「拉撒路死了。
15 ೧೫ ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
我沒有在那裏就歡喜,這是為你們的緣故,好叫你們相信。如今我們可以往他那裏去吧。」
16 ೧೬ ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
多馬,又稱為低土馬,就對那同作門徒的說:「我們也去和他同死吧。」
17 ೧೭ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
耶穌到了,就知道拉撒路在墳墓裏已經四天了。
18 ೧೮ ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
伯大尼離耶路撒冷不遠,約有六里路。
19 ೧೯ ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
有好些猶太人來看馬大和馬利亞,要為她們的兄弟安慰她們。
20 ೨೦ ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
馬大聽見耶穌來了,就出去迎接他;馬利亞卻仍然坐在家裏。
21 ೨೧ ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
馬大對耶穌說:「主啊,你若早在這裏,我兄弟必不死。
22 ೨೨ ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
就是現在,我也知道,你無論向上帝求甚麼,上帝也必賜給你。」
23 ೨೩ ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
耶穌說:「你兄弟必然復活。」
24 ೨೪ ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
馬大說:「我知道在末日復活的時候,他必復活。」
25 ೨೫ ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
耶穌對她說:「復活在我,生命也在我。信我的人雖然死了,也必復活;
26 ೨೬ ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
凡活着信我的人必永遠不死。你信這話嗎?」 (aiōn g165)
27 ೨೭ ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
馬大說:「主啊,是的,我信你是基督,是上帝的兒子,就是那要臨到世界的。」
28 ೨೮ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
馬大說了這話,就回去暗暗地叫她妹子馬利亞,說:「夫子來了,叫你。」
29 ೨೯ ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
馬利亞聽見了,就急忙起來,到耶穌那裏去。
30 ೩೦ ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
那時,耶穌還沒有進村子,仍在馬大迎接他的地方。
31 ೩೧ ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
那些同馬利亞在家裏安慰她的猶太人,見她急忙起來出去,就跟着她,以為她要往墳墓那裏去哭。
32 ೩೨ ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
馬利亞到了耶穌那裏,看見他,就俯伏在他腳前,說:「主啊,你若早在這裏,我兄弟必不死。」
33 ೩೩ ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
耶穌看見她哭,並看見與她同來的猶太人也哭,就心裏悲歎,又甚憂愁,
34 ೩೪ “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
便說:「你們把他安放在哪裏?」他們回答說:「請主來看。」
35 ೩೫ ಯೇಸು ಕಣ್ಣೀರಿಟ್ಟನು.
耶穌哭了。
36 ೩೬ ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
猶太人就說:「你看他愛這人是何等懇切。」
37 ೩೭ ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
其中有人說:「他既然開了瞎子的眼睛,豈不能叫這人不死嗎?」
38 ೩೮ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
耶穌又心裏悲歎,來到墳墓前;那墳墓是個洞,有一塊石頭擋着。
39 ೩೯ ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
耶穌說:「你們把石頭挪開。」那死人的姊姊馬大對他說:「主啊,他現在必是臭了,因為他死了已經四天了。」
40 ೪೦ ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
耶穌說:「我不是對你說過,你若信,就必看見上帝的榮耀嗎?」
41 ೪೧ ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
他們就把石頭挪開。耶穌舉目望天,說:「父啊,我感謝你,因為你已經聽我。
42 ೪೨ ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
我也知道你常聽我,但我說這話是為周圍站着的眾人,叫他們信是你差了我來。」
43 ೪೩ ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
說了這話,就大聲呼叫說:「拉撒路出來!」
44 ೪೪ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
那死人就出來了,手腳裹着布,臉上包着手巾。耶穌對他們說:「解開,叫他走!」
45 ೪೫ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
那些來看馬利亞的猶太人見了耶穌所做的事,就多有信他的;
46 ೪೬ ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
但其中也有去見法利賽人的,將耶穌所做的事告訴他們。
47 ೪೭ ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
祭司長和法利賽人聚集公會,說:「這人行好些神蹟,我們怎麼辦呢?
48 ೪೮ ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
若這樣由着他,人人都要信他,羅馬人也要來奪我們的地土和我們的百姓。」
49 ೪೯ ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
內中有一個人,名叫該亞法,本年作大祭司,對他們說:「你們不知道甚麼。
50 ೫೦ ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
獨不想一個人替百姓死,免得通國滅亡,就是你們的益處。」
51 ೫೧ ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
他這話不是出於自己,是因他本年作大祭司,所以預言耶穌將要替這一國死;
52 ೫೨ ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
也不但替這一國死,並要將上帝四散的子民都聚集歸一。
53 ೫೩ ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
從那日起,他們就商議要殺耶穌。
54 ೫೪ ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
所以,耶穌不再顯然行在猶太人中間,就離開那裏往靠近曠野的地方去,到了一座城,名叫以法蓮,就在那裏和門徒同住。
55 ೫೫ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
猶太人的逾越節近了,有許多人從鄉下上耶路撒冷去,要在節前潔淨自己。
56 ೫೬ ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
他們就尋找耶穌,站在殿裏彼此說:「你們的意思如何,他不來過節嗎?」
57 ೫೭ ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
那時,祭司長和法利賽人早已吩咐說,若有人知道耶穌在哪裏,就要報明,好去拿他。

< ಯೋಹಾನನು 11 >