< ಯೋಹಾನನು 15 >

1 “ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.
Jaz sem prava trta, in oče moj je vinogradnik.
2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
Vsako mladiko na meni, ktera ne rodí sadú, njo bo odrezal; in vsako, ktera rodí sad, očistil jo bo, da bo več sadú rodila.
3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.
Vi ste uže čisti, za voljo besede, ktero sem vam govoril.
4 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Ostanite v meni, in jaz bom v vas. Kakor mladika sama od sebe ne more roditi sadú, če ne ostane na trti: tako tudi vi, če ne ostanete v meni.
5 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
Jaz sem trta, vi mladike. Kdor ostane v meni, in jaz v njem, ta bo rodil veliko sadú: kajti brez mene ne morete ničesar storiti.
6 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
Kdor ne ostane v meni, vržen bo ven kakor mladika, in osuší se, in zberó jih in vržejo na ogenj, in zgoré.
7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
Če ostanete v meni, in besede moje v vas ostanejo: prosite, karkoli hočete, in zgodilo vam se bo.
8 ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
S tem se bo oče moj oslavil, da obrodite veliko sadú; in moji učenci boste.
9 “ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
Kakor je oče mene ljubil, ljubim tudi jaz vas; ostanite v ljubezni mojej.
10 ೧೦ ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Če boste zapovedi moje izpolnjevali, ostali boste v ljubezni mojej; kakor sem jaz zapovedi očeta svojega izpolnil, in prebivam v ljubezni njegovej.
11 ೧೧ ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
To sem vam povedal, da moja radost ostane v vas, in da se vaša radost dopolni.
12 ೧೨ ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ.
Moja zapoved je ta, da se ljubite med seboj, kakor sem vas jaz ljubil.
13 ೧೩ ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
Veče ljubezni od té nima nikdor, da kdo dušo svojo položi za prijatelje svoje.
14 ೧೪ ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.
Vi ste prijatelji moji, ako delate, kar vam ukazujem.
15 ೧೫ ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.
Ne imenujem vas več hlapcev, ker hlapec ne vé, kaj dela gospodar njegov; nego imenoval sem vas prijatelje, ker sem vam vse, kar sem slišal od očeta svojega, oznanil.
16 ೧೬ ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
Niste izvolili vi mene, nego jaz sem izvolil vas, in postavil sem vas, da vi greste in obrodite sad, in da sad vaš ostane: da karkoli boste očeta v moje ime prosili, da vam bo dal.
17 ೧೭ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.
To vam zapovedujem, da se ljubíte med seboj.
18 ೧೮ “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.
Če vas svet sovraži, védite, da je mene poprej sovražil, nego vas.
19 ೧೯ ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
Ko bi bili od sveta, svet bi svoje ljubil; ker pa niste od sveta, nego sem vas jaz odbral od sveta, za to vas svet sovraži.
20 ೨೦ ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.
Spominjajte se besede, ktero sem vam jaz rekel: Hlapec ni veči od gospodarja svojega. Če so mene pregnali, pregnali bodo tudi vas; če so mojo besedo ohranili, ohranili bodo tudi vašo.
21 ೨೧ ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.
Ali to vse vam bodo delali za voljo imena mojega, ker ne poznajo tega, kteri me je poslal.
22 ೨೨ ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.
Ko ne bi bil prišel, in jim ne bi bil govoril, ne bi imeli greha; sedaj pa nimajo izgovora za grehe svoje.
23 ೨೩ ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.
Kdor mene sovraži, sovraži tudi očeta mojega.
24 ೨೪ ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ
Ko ne bi bil dél storil med njimi, ne bi imeli greha; sedaj so pa videli, in sovražijo mene in očeta mojega.
25 ೨೫ ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
Pa da se izpolni beseda, ktera je pisana v zakonu njih: "Sovražili so me zastonj."
26 ೨೬ ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
Kedar pa pride tolažnik, kterega vam bom jaz poslal od očeta, Duh resnice, kteri izhaja od očeta, on bo za-me pričal;
27 ೨೭ ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.
Pa tudi vi boste pričali, ker ste od začetka z menoj.

< ಯೋಹಾನನು 15 >