< ಯೋಹಾನನು 20 >

1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
Τῇ δὲ μιᾷ τῶν σαββάτων, Μαρία ἡ Μαγδαληνὴ ἔρχεται πρωῒ, σκοτίας ἔτι οὔσης, εἰς τὸ μνημεῖον, καὶ βλέπει τὸν λίθον ἠρμένον ἐκ τοῦ μνημείου.
2 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
Τρέχει οὖν καὶ ἔρχεται πρὸς Σίμωνα Πέτρον, καὶ πρὸς τὸν ἄλλον μαθητὴν ὃν ἐφίλει ὁ ˚Ἰησοῦς, καὶ λέγει αὐτοῖς, “Ἦραν τὸν ˚Κύριον ἐκ τοῦ μνημείου, καὶ οὐκ οἴδαμεν ποῦ ἔθηκαν αὐτόν.”
3 ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
Ἐξῆλθεν οὖν ὁ Πέτρος καὶ ὁ ἄλλος μαθητής, καὶ ἤρχοντο εἰς τὸ μνημεῖον.
4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
Ἔτρεχον δὲ οἱ δύο ὁμοῦ, καὶ ὁ ἄλλος μαθητὴς προέδραμεν τάχιον τοῦ Πέτρου, καὶ ἦλθεν πρῶτος εἰς τὸ μνημεῖον.
5 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
Καὶ παρακύψας, βλέπει κείμενα τὰ ὀθόνια, οὐ μέντοι εἰσῆλθεν.
6 ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
Ἔρχεται οὖν καὶ Σίμων Πέτρος ἀκολουθῶν αὐτῷ, καὶ εἰσῆλθεν εἰς τὸ μνημεῖον, καὶ θεωρεῖ τὰ ὀθόνια κείμενα,
7 ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
καὶ τὸ σουδάριον, ὃ ἦν ἐπὶ τῆς κεφαλῆς αὐτοῦ, οὐ μετὰ τῶν ὀθονίων κείμενον, ἀλλὰ χωρὶς ἐντετυλιγμένον εἰς ἕνα τόπον.
8 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
Τότε οὖν εἰσῆλθεν καὶ ὁ ἄλλος μαθητὴς, ὁ ἐλθὼν πρῶτος εἰς τὸ μνημεῖον, καὶ εἶδεν καὶ ἐπίστευσεν·
9 ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
οὐδέπω γὰρ ᾔδεισαν τὴν Γραφὴν ὅτι δεῖ αὐτὸν ἐκ νεκρῶν ἀναστῆναι.
10 ೧೦ ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
Ἀπῆλθον οὖν πάλιν πρὸς αὑτοὺς οἱ μαθηταί.
11 ೧೧ ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
Μαρία δὲ εἱστήκει πρὸς τῷ μνημείῳ ἔξω κλαίουσα. Ὡς οὖν ἔκλαιεν, παρέκυψεν εἰς τὸ μνημεῖον,
12 ೧೨ ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
καὶ θεωρεῖ δύο ἀγγέλους ἐν λευκοῖς καθεζομένους, ἕνα πρὸς τῇ κεφαλῇ, καὶ ἕνα πρὸς τοῖς ποσίν, ὅπου ἔκειτο τὸ σῶμα τοῦ ˚Ἰησοῦ.
13 ೧೩ ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
Καὶ λέγουσιν αὐτῇ ἐκεῖνοι, “Γύναι, τί κλαίεις;” Λέγει αὐτοῖς, “Ὅτι ἦραν τὸν ˚Κύριόν μου, καὶ οὐκ οἶδα ποῦ ἔθηκαν αὐτόν.”
14 ೧೪ ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
Ταῦτα εἰποῦσα, ἐστράφη εἰς τὰ ὀπίσω, καὶ θεωρεῖ τὸν ˚Ἰησοῦν ἑστῶτα, καὶ οὐκ ᾔδει ὅτι ˚Ἰησοῦς ἐστιν.
15 ೧೫ ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
Λέγει αὐτῇ ˚Ἰησοῦς, “Γύναι, τί κλαίεις; Τίνα ζητεῖς;” Ἐκείνη δοκοῦσα ὅτι ὁ κηπουρός ἐστιν, λέγει αὐτῷ, “Κύριε, εἰ σὺ ἐβάστασας αὐτόν, εἰπέ μοι ποῦ ἔθηκας αὐτόν, κἀγὼ αὐτὸν ἀρῶ.”
16 ೧೬ ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
Λέγει αὐτῇ ὁ ˚Ἰησοῦς, “Μαριάμ!” Στραφεῖσα ἐκείνη λέγει αὐτῷ Ἑβραϊστί, “Ραββουνί” (ὃ λέγεται, “Διδάσκαλε”).
17 ೧೭ ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
Λέγει αὐτῇ ὁ ˚Ἰησοῦς, “Μή μου ἅπτου, οὔπω γὰρ ἀναβέβηκα πρὸς τὸν Πατέρα· πορεύου δὲ πρὸς τοὺς ἀδελφούς μου, καὶ εἰπὲ αὐτοῖς, ‘Ἀναβαίνω πρὸς τὸν Πατέρα μου, καὶ Πατέρα ὑμῶν, καὶ ˚Θεόν μου, καὶ ˚Θεὸν ὑμῶν.’”
18 ೧೮ ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
Ἔρχεται Μαριὰμ ἡ Μαγδαληνὴ ἀγγέλλουσα τοῖς μαθηταῖς, ὅτι “Ἑώρακα τὸν ˚Κύριον”, καὶ ταῦτα εἶπεν αὐτῇ.
19 ೧೯ ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
Οὔσης οὖν ὀψίας τῇ ἡμέρᾳ ἐκείνῃ τῇ μιᾷ σαββάτων, καὶ τῶν θυρῶν κεκλεισμένων ὅπου ἦσαν οἱ μαθηταὶ διὰ τὸν φόβον τῶν Ἰουδαίων, ἦλθεν ὁ ˚Ἰησοῦς καὶ ἔστη εἰς τὸ μέσον, καὶ λέγει αὐτοῖς, “Εἰρήνη ὑμῖν.”
20 ೨೦ ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
Καὶ τοῦτο εἰπὼν, ἔδειξεν τὰς χεῖρας καὶ τὴν πλευρὰν αὐτοῖς. Ἐχάρησαν οὖν οἱ μαθηταὶ, ἰδόντες τὸν ˚Κύριον.
21 ೨೧ ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
Εἶπεν οὖν αὐτοῖς ὁ ˚Ἰησοῦς πάλιν, “Εἰρήνη ὑμῖν· καθὼς ἀπέσταλκέν με ὁ Πατήρ, κἀγὼ πέμπω ὑμᾶς.”
22 ೨೨ ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
Καὶ τοῦτο εἰπὼν, ἐνεφύσησεν καὶ λέγει αὐτοῖς, “Λάβετε ˚Πνεῦμα Ἅγιον.
23 ೨೩ ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
Ἄν τινων ἀφῆτε τὰς ἁμαρτίας, ἀφέωνται αὐτοῖς· ἄν τινων κρατῆτε, κεκράτηνται.”
24 ೨೪ ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
Θωμᾶς δὲ, εἷς ἐκ τῶν δώδεκα, ὁ λεγόμενος Δίδυμος, οὐκ ἦν μετʼ αὐτῶν ὅτε ἦλθεν ˚Ἰησοῦς.
25 ೨೫ ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
Ἔλεγον οὖν αὐτῷ οἱ ἄλλοι μαθηταί, “Ἑωράκαμεν τὸν ˚Κύριον.” Ὁ δὲ εἶπεν αὐτοῖς, “Ἐὰν μὴ ἴδω ἐν ταῖς χερσὶν αὐτοῦ τὸν τύπον τῶν ἥλων, καὶ βάλω τὸν δάκτυλόν μου εἰς τὸν τύπον τῶν ἥλων, καὶ βάλω μου τὴν χεῖραν εἰς τὴν πλευρὰν αὐτοῦ, οὐ μὴ πιστεύσω.”
26 ೨೬ ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
Καὶ μεθʼ ἡμέρας ὀκτὼ πάλιν ἦσαν ἔσω οἱ μαθηταὶ αὐτοῦ, καὶ Θωμᾶς μετʼ αὐτῶν. Ἔρχεται ὁ ˚Ἰησοῦς, τῶν θυρῶν κεκλεισμένων, καὶ ἔστη εἰς τὸ μέσον, καὶ εἶπεν, “Εἰρήνη ὑμῖν.”
27 ೨೭ ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
Εἶτα λέγει τῷ Θωμᾷ, “Φέρε τὸν δάκτυλόν σου ὧδε, καὶ ἴδε τὰς χεῖράς μου, καὶ φέρε τὴν χεῖρά σου, καὶ βάλε εἰς τὴν πλευράν μου, καὶ μὴ γίνου ἄπιστος, ἀλλὰ πιστός.”
28 ೨೮ ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
Ἀπεκρίθη Θωμᾶς καὶ εἶπεν αὐτῷ, “Ὁ ˚Κύριός μου καὶ ὁ ˚Θεός μου!”
29 ೨೯ ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
Λέγει αὐτῷ ὁ ˚Ἰησοῦς, “Ὅτι ἑώρακάς με, πεπίστευκας· μακάριοι οἱ μὴ ἰδόντες, καὶ πιστεύσαντες.”
30 ೩೦ ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.
Πολλὰ μὲν οὖν καὶ ἄλλα σημεῖα ἐποίησεν ὁ ˚Ἰησοῦς ἐνώπιον τῶν μαθητῶν αὐτοῦ, ἃ οὐκ ἔστιν γεγραμμένα ἐν τῷ βιβλίῳ τούτῳ.
31 ೩೧ ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
Ταῦτα δὲ γέγραπται, ἵνα πιστεύητε ὅτι ˚Ἰησοῦς ἐστιν ὁ ˚Χριστὸς, ὁ Υἱὸς τοῦ ˚Θεοῦ, καὶ ἵνα πιστεύοντες, ζωὴν ἔχητε ἐν τῷ ὀνόματι αὐτοῦ.

< ಯೋಹಾನನು 20 >