< ಯೋಹಾನನು 21 >

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
Po tem se je Jezus zopet prikazal učencem na morji Tiberijadskem; prikazal se je pa tako-le;
2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
Bili so skupaj Simon Peter in Tomaž, ki se imenuje Dvojček, in Natanael iz Kane Galilejske, in Zebedejeva, in dva druga izmed učencev njegovih.
3 ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
Reče jim Simon Peter: Ribe grem lovit. Rekó mu: Tudi mi pojdemo s teboj. Ter izidejo in vstopijo precej v ladjo, in tisto noč niso nič vjeli.
4 ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
Ko je pa uže jutro napočilo, stal je Jezus na bregu: ali učenci niso vedeli, da je Jezus.
5 ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
In reče jim Jezus: Otroci! jeli imate kakošne jedí? Odgovoré mu: Ne.
6 ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
On jim pa reče: Vrzite mrežo na desno stran ladje, pa boste našli. Ter vržejo, in niso je več mogli vleči od množice rib.
7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
Tedaj reče učenec, ta, kterega je Jezus ljubil, Petru: Gospod je. Simon Peter pa, ko zasliši, da je Gospod, opaše si srajco, (bil je namreč nag, ) in skoči v morje.
8 ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
A drugi učenci pridejo na ladjo, (niso bili namreč daleč od zemlje, nego kakih dvesto komolcev, ) in vlekli so mrežo z ribami.
9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
Ko pa izstopijo na zemljo, ugledajo ogenj naložen in na njem ribo položeno, in kruh.
10 ೧೦ ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
Velí jim Jezus: Prinesite od rib, ktere ste sedaj vjeli.
11 ೧೧ ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
Simon Peter vstopi, in izvleče mrežo na zemljo, polno velikih rib sto in tri in petdeset; in da si ravno jih je toliko bilo, ni se mreža raztrgala.
12 ೧೨ ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
Velí jim Jezus: Pridite, obedujte! Nobeden pa od učencev si ni upal vprašati ga: Kdo si ti? vedoč, da je Gospod.
13 ೧೩ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
In Jezus pride, in vzeme kruh, in dá jim, in ravno tako ribo.
14 ೧೪ ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
To se je uže v tretje prikazal Jezus učencem svojim, odkar je vstal od mrtvih.
15 ೧೫ ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
A ko so poobedovali, reče Jezus Simonu Petru: Simon Jonov, ljubiš li me bolj, nego té? Reče mu: Dà, Gospod! ti véš, da te ljubim. Reče mu: Pasi jagnjeta moja.
16 ೧೬ ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
Reče mu zopet drugoč: Simon Jonov, ali me ljubiš? Reče mu: Dà, Gospod! ti veš, da te ljubim. Veli mu: Pasi ovce moje.
17 ೧೭ ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
Reče mu v tretje: Simon Jonov, ali me ljubiš? Peter postane žalosten, da mu je v tretje rekel: Ali me ljubiš? in reče mu: Gospod! ti vse véš; ti znaš, da te ljubim. Veli mu Jezus: Pasi ovce moje.
18 ೧೮ “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
Resnično resnično ti pravim: Ko si bil mlajši, opasoval si se sam, in hodil si, kamor si hotel; kedar boš pa star, raztegnil boš roke svoje, in drugi te bo opasal, in odpeljal te bo, kamor ne boš hotel.
19 ೧೯ ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
To je pa povedal, da je na znanje dal, s kakošno smrtjo bo oslavil Boga. In ko je to povedal, reče mu: Pojdi za menoj!
20 ೨೦ ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
Obrnivši se pa Peter, ugleda učenca, kterega je Jezus ljubil, da gre za njim, kteri je bil na večerji tudi legel na prsi njegove, in je bil rekel: Gospod! kdo je tisti, ki te bo izdal?
21 ೨೧ ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
Ko tega Peter ugleda, reče Jezusu: Gospod! Kaj pa ta?
22 ೨೨ ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Reče mu Jezus: Če hočem, da ostane dotlej, ko pridem, kaj tebi za to? Ti pojdi za menoj.
23 ೨೩ ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
In razglasila se je med brati ta beseda: Ta učenec ne bo umrl. Ali Jezus mu ni bil rekel, da ne bo umrl; nego: Če hočem, da ostane dotlej, ko pridem, kaj tebi za to?
24 ೨೪ ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
Ta učenec je ta, ki pričuje za to, in je napisal to; in vémo, da je pričevanje njegovo resnično.
25 ೨೫ ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
Je pa še drugega veliko, kar je storil Jezus, in to, ko bi se posamez vse napisalo, menim, da tudi ves svet ne bi imel prostora za bukve, ktere bi se napisale. Amen.

< ಯೋಹಾನನು 21 >