< ಯೋಹಾನನು 4 >

1 ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
Basi Yesu alipofahamu kuwa Mafarisayo wamesikia kuwa Yesu alikuwa anafuasa na kuwabatiza zaidi ya Yohana,
2 (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),
(ingawa Yesu mwenyewe alikuwa habatizi ila wanafunzi wake),
3 ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.
alitoka Judea na akaenda Galilaya.
4 ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
Hivyo ilikuwa muhimu kupitia Samaria.
5 ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.
Na akafika kwenye mji wa Samaria, unaoitwa Sikari, karibu na eneo ambalo Yakobo alimpa mwanae Yusufu.
6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
Na kisima cha Yakobo kilikuwa hapo. Yesu alikuwa amechoka kwa ajili ya safari na akakaa karibu na kisima. Ilikuwa muda wa mchana.
7 ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.
Mwanamke Msamaria alikuja kuteka maji, na Yesu akamwambia, “Nipe maji ninywe.”
8 ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.
Kwa sababu wanafunzi wake walikuwa wameenda zao mjini kununua chakula.
9 ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
Yule mwanamke akamwambia, “Inakuaje wewe Myahudi, kuniomba mimi mwanamke Msamaria, kitu cha kunywa?” Kwa sababu Wayahudi hawachangamani na Wasamaria.
10 ೧೦ ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
Yesu akamjibu, “Kama ungelijua karama ya Mungu, na yule anayekuambia 'Nipe maji, ' ungelimwomba, na angelikupa maji ya uzima.”
11 ೧೧ ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
Mwanamke akajibu, “Bwana hauna ndoo ya kuchotea, na kisima ni kirefu. Utayapata wapi Maji ya Uzima?
12 ೧೨ ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
Je wewe ni mkuu, kuliko baba yetu Yakobo, ambaye alitupa kisima hiki, na yeye mwenyewe na watoto wake pamoja na mifugo yake wakanywa maji ya kisima hiki?”
13 ೧೩ ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
Yesu akajibu, “Yeyote anywae maji haya atapata kiu tena,
14 ೧೪ ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. (aiōn g165, aiōnios g166)
lakini yeye atakaye kunywa maji nitakayompa hatapata kiu tena. Badala yake maji nitakayompa yatakuwa chemchemi inayobubujika hata milele.” (aiōn g165, aiōnios g166)
15 ೧೫ ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
Yule mwanamke akamwambia, “Bwana, nayaomba maji hayo ili nisipate kiu, na nisihangaike kuja hapa kuchota maji.”
16 ೧೬ ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
Yesu akamwambia, “Nenda kamwite mumeo, kisha urudi.”
17 ೧೭ ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
Mwanamke akamwambia, “Sina mume.” Yesu akajibu, “Umesema vyema, 'Sina mume;'
18 ೧೮ ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
kwa maana umekuwa na wanaume watano, na mmoja ambaye unaye sasa sio mume wako. Katika hili umesema kweli!”
19 ೧೯ ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
Mwanamke akamwambia, “Bwana naona yakuwa wewe ni nabii.
20 ೨೦ ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
Baba zetu waliabudu katika mlima huu. Lakini ninyi mwasema ya kuwa Yerusalemu ndiyo sehemu ambayo watu wanapaswa kuabudu.”
21 ೨೧ ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
Yesu akamjibu, “Mwanamke, niamini, wakati unakuja ambapo hamtamwabudu Baba katika mlima huu au Yerusalemu.
22 ೨೨ ಸಮಾರ್ಯದವರಾದನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
Ninyi watu mwaabudu kile msichokijua, lakini sisi twaabudu tunachokijua, kwa sababu wokovu watoka kwa Wayahudi.”
23 ೨೩ ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
Hatahivyo, wakati unakuja, na sasa upo hapa, wakati waabuduo kweli watamwabudu Baba katika roho na kweli, kwa sababu Baba anawatafuta watu wa namna hiyo kuwa watu wake wanao mwabudu.
24 ೨೪ ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
Mungu ni Roho, na wale wanaomwabudu wanapaswa kumwabudu kwa roho na kweli.”
25 ೨೫ ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
Mwanamke akamwambia, “Ninajua kuwa Masihi anakuja, (aitwaye Kristo). Huyo atakapokuja atatwambia yote.”
26 ೨೬ ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
Yesu akamwambia, “Mimi unayesema nami ndiye.”
27 ೨೭ ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
Wakati huo huo wanafunzi wake wakarudi. Nao walishangaa kwa nini alikuwa akizungumza na mwanamke, lakini hakuna aliyethubutu kumuuliza, “Unataka nini?” au “Kwa nini unazungumza naye?”
28 ೨೮ ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
Hivyo mwanamke akauacha mtungi wake na akaenda mjini na akawambia watu,
29 ೨೯ “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
“Njooni mwone mtu aliyeniambia mambo yangu yote niliyoyatenda, je yawezekana akawa ndiye Kristo?”
30 ೩೦ ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
Wakatoka mjini wakaja kwake.
31 ೩೧ ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.
Wakati wa mchana wanafunzi wake walimsihi wakisema, “Rabi kula chakula.”
32 ೩೨ ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು
lakini yeye aliwambia, “Mimi ninacho chakula msichokijua ninyi.”
33 ೩೩ ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Wanafunzi wakaambizana, hakuna aliyemletea kitu chochotekula,”Je walileta?”
34 ೩೪ ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
Yesu akawambia, “Chakula changu ni kufanya mapenzi yake yeye aliyenituma na kutimiza kazi yake.
35 ೩೫ ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
Je, hamsemi, 'Bado miezi mitano na mavuno yatakuwa tayari?' Ninawambieni tazameni mashamba yalivyo tayari kwa mavuno!
36 ೩೬ ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. (aiōnios g166)
Yeye avunaye hupokea mishahara na kukusanya matunda kwa ajili ya uzima wa milele, ili kwamba yeye apandaye naye avunaye wafurahi pamoja. (aiōnios g166)
37 ೩೭ ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
Kwa kuwa msemo huu ni wa kweli, 'Mmoja apanda na mwingine avuna.'
38 ೩೮ ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
Niliwatuma kuvuna ambacho hamkukihangaikia, Wengine wamefanya kazi na ninyi mmeingia katika furaha ya kazi yao.”
39 ೩೯ “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
Wasamaria wengi katika mji ule walimwani kwa sababu ya taarifa ya yule mwanamke aliyekuwa akishuhudia, “Aliyeniambia mambo yote niliyoyafanya.”
40 ೪೦ ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
Hivyo Wasamaria walipokuja walimsihi akae pamoja nao na akakaa kwao kwa siku mbili.
41 ೪೧ ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,
Na wengi zaidi wakamwamini kwa sababu ya neno lake.
42 ೪೨ ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
Wakamwambia yule mwanamke, “Tunaamini sio tu kwa maneno yako, kwa sababu sisi wenyewe tumesikia, na sasa twafahamu kuwa hakika yeye ni mwokozi wa ulimwengu.”
43 ೪೩ ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
Baada ya siku hizo mbili, akaondoka na kuelekea Galilaya.
44 ೪೪ ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
Kwa sababu yeye mwenyewe alikuwa ametangaza kuwa nabii hana heshima katika nchi yake mwenyewe.
45 ೪೫ ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
Alipokuja kutoka Galilaya, Wagalilaya walimkaribisha. Walikuwa wameona mambo yote aliyoyafanya Yerusalemu kwenye sikukuu, kwa sababu na wao pia walikuwa wamehudhuria kwenye sikukuu.
46 ೪೬ ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
Alikuja tena Kana ya Galilaya huko alikoyabadilisha maji kuwa divai. Palikuwa na ofisa ambaye mwana wake alikuwa ni mgonjwa huko Kapernaumu.
47 ೪೭ ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
Aliposikia kuwa Yesu alitoka Judea na kwenda Galilaya, alienda kwa Yesu na kumsihi atelemke amponye mwanawe, ambaye alikuwa karibu kufa.
48 ೪೮ ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
Ndipo Yesu akamwambia, “Ninyi msipoona ishara na maajabu hamwezi kuamini.
49 ೪೯ ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
Kiongozi akasema, “Bwana shuka chini kabla mwanangu hajafa.”
50 ೫೦ ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
Yesu akamwambia, “Nenda mwanao ni mzima.” Yule mtu akaamini neno alilolisema Yesu na akaenda zake.
51 ೫೧ ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
Alipokuwa akishuka, watumishi wake walimpokea na kumwambia mwana wake alikuwa mzima.
52 ೫೨ ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
Hivyo akawauliza ni muda gani alipata nafuu. Wakajibu, “Jana muda wa saa saba homa ilipomwacha.”
53 ೫೩ ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
Ndipo baba yake akatambua kuwa ni muda ule ule Yesu aliosema, “Mwana wako ni mzima.” Hivyo yeye na familia yake wakaamini.
54 ೫೪ ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
Hii ilikuwa ni ishara ya pili aliyoifanya Yesu alipotoka Yudea kwenda Galilaya.

< ಯೋಹಾನನು 4 >