< ಯೋಹಾನನು 7 >

1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
След това Исус ходеше по Галилея; защото не искаше да ходи по Юдея, понеже юдеите искаха да Го убият.
2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
А наближаваше юдейският празник шатроразпъване.
3 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
Затова Неговите братя Му рекоха: Замини от тука и иди в Юдея, така че и твоите ученици да видят делата, които вършиш;
4 ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
защото никой, като иска сам да бъде известен, не върши нещо скришно. Щом вършиш тия дела, яви Себе Си на света.
5 ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
(Защото нито братята Му вярваха в Него).
6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
А Исус им каза: Моето време още не е дошло; а вашето време винаги е готово.
7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
Вас светът не може да мрази; а Мене мрази, защото Аз заявявам за него, че делата му са нечестиви.
8 ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
Възлезте вие на празника; Аз няма още да възляза на тоя празник, защото времето Ми още не се е навършило.
9 ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
И като им рече това, остана си в Галилея.
10 ೧೦ ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
А когато братята Му бяха възлезли на празника, тогава и Той възлезе, не явно, а тайно някак си.
11 ೧೧ ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
Юдеите, прочее, Го търсеха на празника, и казваха: Къде е Онзи?
12 ೧೨ ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
И имаше за Него много глъчка между народа; едни казваха: Добър човек е; други казваха: Не е, но заблуждава народа.
13 ೧೩ ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
Обаче никой не говореше положително за Него поради страха от юдеите.
14 ೧೪ ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
Но като се преполовяваше вече празникът, Исус възлезе на храма и почна да поучава.
15 ೧೫ ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
Затова юдеите се чудеха и казваха: Как знае Този книга, като не се е учил?
16 ೧೬ ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
Исус, прочее, в отговор им каза: Моето учение не е Мое, а на Онзи, Който Ме е пратил.
17 ೧೭ ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
Ако иска някой да върши Неговата воля, ще познае дали учението е от Бога, или Аз от Себе Си говоря.
18 ೧೮ ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
Който говори от себе си търси своята си слава; а който търси славата на Онзи, Който Го е пратил, Той е истински, и в Него няма неправда.
19 ೧೯ ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
Не даде ли ви Моисей закона? но пак никой от вас не изпълнява закона. Защо искате да Ме убиете?
20 ೨೦ ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
Народът отговори: Бяс имаш. Кой иска да Те убие?
21 ೨೧ ಯೇಸು ಅವರಿಗೆ “ನಾನುಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
Исус в отговор им рече: Едно дело извърших и всички се чудите на Мене поради него.
22 ೨೨ ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
Моисей ви даде обрязването, (не че е от Моисея, но от бащите); и в събота обрязвате човека.
23 ೨೩ ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
Ако се обрязва човек в събота, за да се не наруши Моисеевия закон, на Мене ли се гневите за гдето изцяло оздравих човек в събота.
24 ೨೪ ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.
Не съдете по изглед, но съдете справедливо.
25 ೨೫ ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
Тогава някои от ерусалимляните казаха: Не е ли Този човекът, Когото искат да убият?
26 ೨೬ ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
Ето Той явно говори, и нищо не Му казват. Да не би първенците положително да знаят, че Този е Христос?
27 ೨೭ ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
Обаче Този знаем от къде е; а когато дойде Христос, никой няма да знае от къде е.
28 ೨೮ ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
Затова Исус, като поучаваше в храма извика казвайки: И Мене познавате, и от къде съм знаете; и Аз от само Себе Си не съм дошъл, но истинен е Този, Който Ме е пратил, Когото вие не познавате.
29 ೨೯ ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
Аз Го познавам, защото съм от Него, и Той Ме е пратил.
30 ೩೦ ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
И тъй, искаха да Го хванат; но никой не тури ръка на Него, защото часът Му още не беше дошъл.
31 ೩೧ ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
Обаче, мнозина от народа повярваха в Него, като казваха: Като дойде Христос, нима ще извърши повече знамения от тия, които Този е извършил?
32 ೩೨ ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
Фарисеите чуха, че тъй шушукал народът за Него; и главните свещеници и фарисеите пратиха служители да Го хванат.
33 ೩೩ ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
Исус, прочее, рече: Още малко време съм с вас, и тогава ще отида при Онзи, Който Ме е пратил.
34 ೩೪ ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
Ще ме търсите и няма да Ме намерите; и гдето съм Аз, вие не можете да дойдете.
35 ೩೫ ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
На това юдеите рекоха помежду си: Къде ще отиде Тоя та няма да можем да Го намерим? Да не би да отиде при разпръснатите между гърците и да поучава гърците?
36 ೩೬ ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Какво значи тази дума, която рече: Ще Ме търсите, и няма да Ме намерите; и, гдето към Аз вие не можете да дойдете?
37 ೩೭ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
А в последния ден, великия ден на празника, Исус застана и извика казвайки: Ако е някой жаден, нека дойде при Мене и да пие.
38 ೩೮ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
Ако някой вярва в Мене, реки от жива вода ще потекат от утробата му, както рече писанието.
39 ೩೯ ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
А това каза за Духа, който вярващите в Него щяха да приемат; защото [Светият] Дух още не бе даден, понеже Исус още не бе се прославил.
40 ೪೦ ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
За туй, някои от народа, които чуха тия думи казваха: Наистина Тоя е пророкът.
41 ೪೧ ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
Други казваха: Тоя е Христос. Някои пък казваха: Нима от Галилея ще дойде Христос?
42 ೪೨ ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
Не рече ли писанието, че Христос ще дойде от Давидовото потомство, и от градеца Витлеем, гдето беше Давид?
43 ೪೩ ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
И така възникна раздор между народа за Него.
44 ೪೪ ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
И някои от тях искаха да Го хванат; но никой не тури ръце на Него.
45 ೪೫ ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
Тогава служителите си дойдоха при главните свещеници и фарисеите; и те им рекоха: Защо Го не доведохте?
46 ೪೬ ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
Служителите отговориха: Никога човек не е говорил така [както Тоя Човек].
47 ೪೭ ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
А фарисеите им отговориха: И вие ли сте заблудени?
48 ೪೮ ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
Повярвал ли е в Него някои от първенците или от фарисеите?
49 ೪೯ ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
Но това простолюдие, което не знае закона проклето е.
50 ೫೦ ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,
Никодим, който беше един от тях, (същият, който бе ходил при Него нощем по-рано), им казва:
51 ೫೧ ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
Нашият закон осъжда ли човека, ако първо не го изслуша и не разбере що върши?
52 ೫೨ ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
Те в отговор му рекоха: Да не си и ти от Галилея? Изследвай и виж, че от Галилея пророк не се издига.
53 ೫೩ ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.
И всеки отиде у дома си.

< ಯೋಹಾನನು 7 >