< ಯೋಹಾನನು 9 >

1 ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
In gredoč mimo, ugleda človeka, kteri je bil slep od rojstva.
2 ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
In vprašajo ga učenci njegovi, govoreč: Rabi, kdo je grešil, ta ali roditelji njegovi, da se je slep rodil?
3 ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
Jezus odgovorí: Ne ta ni grešil, ne roditelji njegovi; nego da se razodenejo dela Božja na njem.
4 ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
Jaz moram delati dela tega, kteri me je poslal, dokler je dan; prišla bo noč, ko ne bo nihče mogel delati.
5 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
Dokler sem na svetu, luč sem svetu.
6 ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
Rekši to, pljune na zemljo, in napravi blato od sline, in pomaže z blatom slepcu očí.
7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
In reče mu: Pojdi, umij se v kopeli Siloamskej (kar se tolmači: Poslan). Ter odide in se umije, in vrne se videč.
8 ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
A sosedje, in kteri so ga bili poprej videli, da je slep, govorili so: Ali ni ta tisti, ki je sedel in prosil?
9 ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
Nekteri so pravili: On je; drugi pa: Podoben mu je. On je pravil: Jaz sem.
10 ೧೦ ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
Rekó mu torej: Kako so ti se odprle očí?
11 ೧೧ ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
On odgovorí in reče: Človek, ki se imenuje Jezus, napravil je blato, in pomazal mi je očí, in rekel mi je: Pojdi v kopel Siloamsko, in umij se. In ko sem odšel, in sem se umil, spregledal sem.
12 ೧೨ ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
Pa mu rekó: Kje je on? Reče: Ne vém.
13 ೧೩ ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
Peljejo ga k Farizejem, tega, ki je nekedaj slep bil.
14 ೧೪ ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
Bila je pa sobota, ko je Jezus blato napravil in mu odprl oči.
15 ೧೫ ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
In vpraševali so ga zopet tudi Farizeji, kako je spregledal. On jim pa reče: Blato mi je del na oči, in umil sem se, ter vidim.
16 ೧೬ ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
Tedaj so nekteri od Farizejev govorili: Ta človek ni od Boga, ko sobote ne sveti. Drugi so govorili: Kako more grešen človek takošne čudeže delati? In bil je razpor med njimi.
17 ೧೭ ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
Zopet rekó slepcu: Kaj ti praviš za-nj, da ti je odprl očí? On pa reče: Da je prerok.
18 ೧೮ ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
Judje pa niso verovali za-nj, da je slep bil in je spregledal, dokler niso roditeljev tega, ki je spregledal, poklicali,
19 ೧೯ ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
In jih vprašali, govoreč: Je li ta sin vaš, za kogar pravite, da se je slep rodil? Kako pa sedaj vidi?
20 ೨೦ ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
Odgovoré jim roditelji njegovi in rekó: Vémo, da je ta sin naš, in da se je slep rodil;
21 ೨೧ ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
Kako pa sedaj vidi, ne vemo; ali kdo mu je oči odprl, mi ne vemo. On ima leta; njega vprašajte, on bo sam govoril za-se.
22 ೨೨ ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
To so rekli roditelji njegovi za to, ker so se bali Judov; kajti Judje so se bili uže dogovorili, da bodo vsakega, kdor ga bo pripoznal za Kristusa, izpahnili iz shajališča.
23 ೨೩ “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
Za to so roditelji njegovi rekli: Saj ima leta; njega vprašajte.
24 ೨೪ ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
Tedaj drugoč pokličejo človeka, kteri je slep bil, in rekó mu: Daj Bogu hvalo; in vémo, da je ta človek grešnik.
25 ೨೫ ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
On pa odgovorí in reče: Če je grešnik, ne vém; samo vém, da sem slep bil, in sedaj vidim.
26 ೨೬ ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
Rekó mu torej zopet: Kaj ti je storil? Kako ti je odprl očí?
27 ೨೭ ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
Odgovorí jim: Povedal sem vam uže, in niste slišali; kaj hočete zopet slišati? Ali hočete tudi vi njegovi učenci postati?
28 ೨೮ ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
Oni pa ga opsujejo, in rekó: Ti si njegov učenec; mi smo Mojzesovi učenci.
29 ೨೯ ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
Mi vémo, da je z Mojzesom govoril Bog; za tega pa ne vémo, odkod je.
30 ೩೦ ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
Človek odgovorí in jim reče: To je pač res čudno, da vi ne véste, odkod je, in odprl mi je očí.
31 ೩೧ ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
Vémo pa, da grešnikov Bog ne posluša; nego če kdo spoštuje Boga, in voljo njegovo izpolnjuje, tega posluša.
32 ೩೨ ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn g165)
Od vekomaj se ni slišalo, da bi bil kdo od rojstva slepemu očí odprl. (aiōn g165)
33 ೩೩ ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
Ko ta ne bi bil od Boga, ne bi mogel ničesar storiti.
34 ೩೪ ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Odgovoré in rekó mu: Ves v grehih si se rodil, pa boš ti nas učil? In izženó ga ven.
35 ೩೫ ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
Jezus zasliši, da so ga izgnali ven; in ko ga najde, reče mu: Veruješ li v sina Božjega?
36 ೩೬ ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
On odgovorí in reče: Kdo je, gospod, da bom veroval va-nj?
37 ೩೭ ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
Jezus mu pa reče: In videl si ga, in kteri s teboj govori, ta je.
38 ೩೮ ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
On pa reče: Verujem, gospod! In pokloni mu se.
39 ೩೯ ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
In Jezus reče: Jaz sem prišel na sodbo na ta svet, da kteri ne vidijo, spregledajo, in kteri vidijo, oslepé.
40 ೪೦ ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
In slišali so to nekteri izmed Farizejev, kteri so bili ž njim, in rekó mu: Ali smo tudi mi slepi?
41 ೪೧ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
Reče jim Jezus: Ko bi bili slepi, ne bi imeli greha; sedaj pa pravite: Vidimo; za to greh vaš ostane.

< ಯೋಹಾನನು 9 >