< ಯೆಹೋಶುವನು 13 >

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
जब यहोशू बहुत बूढ़े हो चुके थे, तब याहवेह ने उनसे यह कहा: “तुम बूढ़े हो चुके हो, और भूमि का एक बड़ा अंश अब भी तुम्हारें अधिकार में नहीं आया हैं.
2 ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ
“वह देश जो रह गए है: “फिलिस्तीनियों की समस्त भूमि तथा गेशूरियों का देश;
3 ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,
मिस्र के पूर्व में स्थित शीहोर से लेकर उत्तर में एक्रोन की सीमा तक, जो कनान देश माना जाता था, हालांकि यह प्रदेश फिलिस्तीनियों के पांच शासकों के कब्जे में था. उनके नगर थे: गाज़ा, अशदोद, अश्कलोन, गाथ, एक्रोन; तथा दक्षिण में अव्वी,
4 ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು
कनानियों का पूरा देश तथा मेआराह, जो सीदोनियों का राज्य था, यह अमोरियों के अफेक की सीमा तक फैला था;
5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;
गिबलियों का देश लबानोन, बाल-गाद से नीचे की ओर हरमोन पर्वत से लेकर लबो-हामाथ तक.
6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
“मैं इस्राएलियों के सामने से लबानोन के पर्वतीय क्षेत्र के पूरे निवासियों को, जो मिसरेफोत-मयिम तक बसे हैं, सीदोनियों को, सबको भगा दूंगा. और मेरे कहे अनुसार यह देश इस्राएलियों को मीरास में दिया जायेगा,
7 ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
और यह देश नौ गोत्रों तथा मनश्शेह के आधा गोत्र को दे मीरास में दिया जाएगा.”
8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
मनश्शेह के आधा गोत्र के साथ रियूबेन तथा गाद के गोत्रों ने यरदन के पूर्व में मोशेह द्वारा अपना हिस्सा ले लिया, ठीक जैसा याहवेह के सेवक मोशेह ने उन्हें दिया था:
9 ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
आरनोन घाटी की सीमा तक अरोअर से तथा उस नगर से, जो घाटी के बीच में है, तथा मेदेबा से लेकर दीबोन तथा पूरे पठार तक;
10 ೧೦ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
अमोरियों का राजा, जो हेशबोन में शासन करता था, अम्मोन की सीमा तक उसके सब नगर;
11 ೧೧ ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
गिलआद, गेशूरियों तथा माकाहथियों का पूरा देश; पूरा हरमोन पर्वत तथा सलेकाह तक पूरा बाशान;
12 ೧೨ ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
बाशान में ओग का, जो अश्तारोथ तथा एद्रेइ में राज करता था और रेफाइम में केवल वही बच गया था; क्योंकि मोशेह ने उनको मारकर उनकी प्रजा को देश से निकाल दिया था.
13 ೧೩ ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
लेकिन इस्राएल वंश ने गेशूरियों अथवा माकाहथियों को देश से बाहर नहीं निकाला था. आज तक वे इस्राएलियों के बीच ही रह रहे हैं.
14 ೧೪ ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.
मोशेह ने केवल लेवी के गोत्र को कोई हिस्सा नहीं दिया. इस्राएल के परमेश्वर याहवेह के आदेश के अनुसार, उनके लिए चढ़ाये जानेवाली अन्‍नबलि ही उनका हिस्सा हैं.
15 ೧೫ ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
मोशेह ने रियूबेन गोत्र को उनके कुलों के अनुसार हिस्सा दिया:
16 ೧೬ ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
अर्थात् आरनोन कि घाटी की सीमा से लगे हुए अरोअर, जिसमें वह नगर भी है, और जो घाटी के बीच में है, उसमें मेदेबा का पूरा मैदान शामिल है;
17 ೧೭ ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
हेशबोन तथा मैदानी क्षेत्र के नगर ये हैं: दीबोन, बामोथ-बाल तथा बेथ-बाल-मेओन,
18 ೧೮ ಯಹಚಾ ಕೆದೇಮೋತ್, ಮೇಫಾಯತ್,
यहत्स, केदेमोथ तथा मेफाअथ
19 ೧೯ ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,
किरयथाईम, सिबमाह, ज़ेरेथ-शहर, जो घाटी की पहाड़ी पर है,
20 ೨೦ ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,
बेथ-पिओर, पिसगाह की ढलान, बेथ-यशिमोथ,
21 ೨೧ ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
मैदान में स्थित सभी नगर, हेशबोन में अमोरियों का राजा सीहोन जिसको मोशेह ने मारा था उसके सब नगर; मोशेह ने मिदियानी प्रधान एवी, रेकेम, ज़ुर, हूर तथा रेबा को भी पराजित किये थे.
22 ೨೨ ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.
इस्राएलियों ने बेओर के पुत्र बिलआम को भी, जो भविष्य बताया करता था, सबके साथ तलवार से मार दिया.
23 ೨೩ ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.
रियूबेन वंशजों के लिए यरदन नदी सीमा थी. रियूबेन के पुत्रों तथा उनके परिवारों के अनुसार यही नगर तथा गांव उनका हिस्सा था.
24 ೨೪ ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
मोशेह ने गाद के गोत्र को उनके परिवारों के अनुसार हिस्सा दिया;
25 ೨೫ ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,
तथा उनकी सीमा में याज़र तथा गिलआद के सभी नगर तथा अरोअर तक अम्मोनियों का आधा देश, जो रब्बाह के पूर्व में है,
26 ೨೬ ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
तथा हेशबोन से रामथ-मिज़पाह, बटोनीम और माहानाईम से दबीर की सीमा तक;
27 ೨೭ ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
तथा बेथ-हाराम की घाटी में बेथ-निमराह, सुक्कोथ तथा ज़ेफोन, हेशबोन के राजा सीहोन का बचा हुआ राज्य, जिसकी सीमा यरदन नदी थी तथा पूर्व में यरदन के किन्‍नेरेथ सागर के सीमा तक.
28 ೨೮ ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.
गाद के पुत्रों को, उनके गोत्रों के अनुसार दिया गया हिस्सा नगर एवं गांव यही थे.
29 ೨೯ ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
मोशेह ने मनश्शेह के आधे गोत्र को यह भाग उनके परिवारों के अनुसार दिया:
30 ೩೦ ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
उनकी सीमा माहानाईम से लेकर बाशान के राजा, ओग का पूरा राज्य, याईर का पूरा नगर, जो बाशान में, साठ नगर;
31 ೩೧ ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.
गिलआद का आधा भाग, अश्तारोथ तथा एद्रेइ (बाशान में ओग राजा के नगर थे ये). ये सभी मनश्शेह के पुत्र माखीर वंश को उनके परिवारों के अनुसार बांट दिया गया.
32 ೩೨ ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
ये येरीख़ो के पूर्व में यरदन के पार, मोआब के मैदानों में मोशेह द्वारा बांटी गई थी.
33 ೩೩ ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.
लेवी के गोत्र को मोशेह ने कोई हिस्सा नहीं दिया. मोशेह ने उन्हें बताया कि, याहवेह, इस्राएल के परमेश्वर ही उनका हिस्सा हैं, जैसा याहवेह ने उनसे कहा था.

< ಯೆಹೋಶುವನು 13 >