< ಯೆಹೋಶುವನು 17 >

1 ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.
וַיְהִי הַגּוֹרָל לְמַטֵּה מְנַשֶּׁה כִּי־הוּא בְּכוֹר יוֹסֵף לְמָכִיר בְּכוֹר מְנַשֶּׁה אֲבִי הַגִּלְעָד כִּי הוּא הָיָה אִישׁ מִלְחָמָה וַֽיְהִי־לוֹ הַגִּלְעָד וְהַבָּשָֽׁן׃
2 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.
וַיְהִי לִבְנֵי מְנַשֶּׁה הַנּֽוֹתָרִים לְמִשְׁפְּחֹתָם לִבְנֵי אֲבִיעֶזֶר וְלִבְנֵי־חֵלֶק וְלִבְנֵי אַשְׂרִיאֵל וְלִבְנֵי־שֶׁכֶם וְלִבְנֵי־חֵפֶר וְלִבְנֵי שְׁמִידָע אֵלֶּה בְּנֵי מְנַשֶּׁה בֶן־יוֹסֵף הַזְּכָרִים לְמִשְׁפְּחֹתָֽם׃
3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.
וְלִצְלׇפְחָד בֶּן־חֵפֶר בֶּן־גִּלְעָד בֶּן־מָכִיר בֶּן־מְנַשֶּׁה לֹא־הָיוּ לוֹ בָּנִים כִּי אִם־בָּנוֹת וְאֵלֶּה שְׁמוֹת בְּנֹתָיו מַחְלָה וְנֹעָה חׇגְלָה מִלְכָּה וְתִרְצָֽה׃
4 ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
וַתִּקְרַבְנָה לִפְנֵי אֶלְעָזָר הַכֹּהֵן וְלִפְנֵי ׀ יְהוֹשֻׁעַ בִּן־נוּן וְלִפְנֵי הַנְּשִׂיאִים לֵאמֹר יְהֹוָה צִוָּה אֶת־מֹשֶׁה לָתֶת־לָנוּ נַחֲלָה בְּתוֹךְ אַחֵינוּ וַיִּתֵּן לָהֶם אֶל־פִּי יְהֹוָה נַחֲלָה בְּתוֹךְ אֲחֵי אֲבִיהֶֽן׃
5 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
וַיִּפְּלוּ חַבְלֵֽי־מְנַשֶּׁה עֲשָׂרָה לְבַד מֵאֶרֶץ הַגִּלְעָד וְהַבָּשָׁן אֲשֶׁר מֵעֵבֶר לַיַּרְדֵּֽן׃
6 ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
כִּי בְּנוֹת מְנַשֶּׁה נָחֲלוּ נַחֲלָה בְּתוֹךְ בָּנָיו וְאֶרֶץ הַגִּלְעָד הָיְתָה לִבְנֵי־מְנַשֶּׁה הַנּוֹתָרִֽים׃
7 ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
וַיְהִי גְבוּל־מְנַשֶּׁה מֵאָשֵׁר הַֽמִּכְמְתָת אֲשֶׁר עַל־פְּנֵי שְׁכֶם וְהָלַךְ הַגְּבוּל אֶל־הַיָּמִין אֶל־יֹשְׁבֵי עֵין תַּפּֽוּחַ׃
8 ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;
לִמְנַשֶּׁה הָיְתָה אֶרֶץ תַּפּוּחַ וְתַפּוּחַ אֶל־גְּבוּל מְנַשֶּׁה לִבְנֵי אֶפְרָֽיִם׃
9 ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
וְיָרַד הַגְּבוּל נַחַל קָנָה נֶגְבָּה לַנַּחַל עָרִים הָאֵלֶּה לְאֶפְרַיִם בְּתוֹךְ עָרֵי מְנַשֶּׁה וּגְבוּל מְנַשֶּׁה מִצְּפוֹן לַנַּחַל וַיְהִי תֹצְאֹתָיו הַיָּֽמָּה׃
10 ೧೦ ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.
נֶגְבָּה לְאֶפְרַיִם וְצָפוֹנָה לִמְנַשֶּׁה וַיְהִי הַיָּם גְּבוּלוֹ וּבְאָשֵׁר יִפְגְּעוּן מִצָּפוֹן וּבְיִשָּׂשכָר מִמִּזְרָֽח׃
11 ೧೧ ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
וַיְהִי לִמְנַשֶּׁה בְּיִשָּׂשכָר וּבְאָשֵׁר בֵּית־שְׁאָן וּבְנוֹתֶיהָ וְיִבְלְעָם וּבְנוֹתֶיהָ וְֽאֶת־יֹשְׁבֵי דֹאר וּבְנוֹתֶיהָ וְיֹשְׁבֵי עֵֽין־דֹּר וּבְנוֹתֶיהָ וְיֹשְׁבֵי תַעְנַךְ וּבְנֹתֶיהָ וְיֹשְׁבֵי מְגִדּוֹ וּבְנוֹתֶיהָ שְׁלֹשֶׁת הַנָּֽפֶת׃
12 ೧೨ ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
וְלֹא יָֽכְלוּ בְּנֵי מְנַשֶּׁה לְהוֹרִישׁ אֶת־הֶעָרִים הָאֵלֶּה וַיּוֹאֶל הַֽכְּנַעֲנִי לָשֶׁבֶת בָּאָרֶץ הַזֹּֽאת׃
13 ೧೩ ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.
וַיְהִי כִּי חָֽזְקוּ בְּנֵי יִשְׂרָאֵל וַיִּתְּנוּ אֶת־הַֽכְּנַעֲנִי לָמַס וְהוֹרֵשׁ לֹא הֽוֹרִישֽׁוֹ׃
14 ೧೪ ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು
וַֽיְדַבְּרוּ בְּנֵי יוֹסֵף אֶת־יְהוֹשֻׁעַ לֵאמֹר מַדּוּעַ נָתַתָּה לִּי נַחֲלָה גּוֹרָל אֶחָד וְחֶבֶל אֶחָד וַאֲנִי עַם־רָב עַד אֲשֶׁר־עַד־כֹּה בֵּרְכַנִי יְהֹוָֽה׃
15 ೧೫ ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.
וַיֹּאמֶר אֲלֵיהֶם יְהוֹשֻׁעַ אִם־עַם־רַב אַתָּה עֲלֵה לְךָ הַיַּעְרָה וּבֵרֵאתָ לְךָ שָׁם בְּאֶרֶץ הַפְּרִזִּי וְהָרְפָאִים כִּי־אָץ לְךָ הַר־אֶפְרָֽיִם׃
16 ೧೬ ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
וַיֹּֽאמְרוּ בְּנֵי יוֹסֵף לֹא־יִמָּצֵא לָנוּ הָהָר וְרֶכֶב בַּרְזֶל בְּכׇל־הַֽכְּנַעֲנִי הַיֹּשֵׁב בְּאֶרֶץ־הָעֵמֶק לַאֲשֶׁר בְּבֵית־שְׁאָן וּבְנוֹתֶיהָ וְלַאֲשֶׁר בְּעֵמֶק יִזְרְעֶֽאל׃
17 ೧೭ ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
וַיֹּאמֶר יְהוֹשֻׁעַ אֶל־בֵּית יוֹסֵף לְאֶפְרַיִם וְלִמְנַשֶּׁה לֵאמֹר עַם־רַב אַתָּה וְכֹחַ גָּדוֹל לָךְ לֹֽא־יִֽהְיֶה לְךָ גּוֹרָל אֶחָֽד׃
18 ೧೮ ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.
כִּי הַר יִֽהְיֶה־לָּךְ כִּֽי־יַעַר הוּא וּבֵרֵאתוֹ וְהָיָה לְךָ תֹּצְאֹתָיו כִּֽי־תוֹרִישׁ אֶת־הַֽכְּנַעֲנִי כִּי רֶכֶב בַּרְזֶל לוֹ כִּי חָזָק הֽוּא׃

< ಯೆಹೋಶುವನು 17 >