< ಯೆಹೋಶುವನು 19 >

1 ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
А другий жеребо́к вийшов Симеонові, племені Симеонових синів за їхніми ро́дами. І був їхній спа́док серед спа́дку Юдиних синів.
2 ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೋಲಾದಾ,
І був їм у спа́дку: Беер-Шева, і Молада,
3 ಹಚರ್‌ ಷೂವಾಲ್, ಬಾಲಾ, ಎಚೆಮ್,
і Хацар-Шуал, і Бала, і Ецем,
4 ಎಲ್ತೋಲದ್, ಬೆತೂಲ್, ಹೊರ್ಮಾ,
і Елтолад, і Бетул, і Хорма,
5 ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ,
і Ціклаґ, і Бет-Гаммаркавот, і Хацар-Суса,
6 ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
і Бет-Леваот, і Шарухен, — тринадцять міст та їхні оселі.
7 ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Аїн, Ріммон, і Етер, і Ашан, — чотири місті та їхні оселі.
8 ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
А всі оселі, що навколо тих міст аж до Баалат-Беер-Рамат-Неґеву, це спа́док племени Симеонових синів за їхніми ро́дами.
9 ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.
З наділу Юдиних синів — спадок синів Симеонових, бо наділ Юдиних синів був численні́ший від них. І посіли Симеонові сини в сере́дині їхнього спа́дку.
10 ೧೦ ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
А третій жеребо́к вийшов Завуло́новим синам за їхніми ро́дами, і була́ границя їхнього спа́дку аж до Саріду.
11 ೧೧ ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.
І підіймається їхня границя до Яму та Мар'али, і стикається з Даббешетом, і стикається з потоком, що навпроти Йокнеаму,
12 ೧೨ ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
і вертається з Саріду на схід, до сходу сонця, на границю Кіслот-Фавору, і виходить до Доврату, і підіймається до Яфія.
13 ೧೩ ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
А звідти переходить на схід, на схід до Ґат-Хеферу, Ет-Каціну, до Ріммон-Гамметоару, до Неї.
14 ೧೪ ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
І поверта́ється його границя з пі́вночі Ханнатону, і закі́нчується при Ґе-Їфтах-Елі.
15 ೧೫ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
І Каттат, і Нагалал, і Шімрон, і Їд'ала, і Віфлеєм, дванадцять міст та їхні оселі.
16 ೧೬ ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು.
Це спа́док Завуло́нових синів за їхніми ро́дами, оці міста́ та їхні оселі.
17 ೧೭ ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
Четвертий жеребо́к вийшов Іссаха́рові, — Іссаха́ровим синам за їхніми ро́дами.
18 ೧೮ ಇಜ್ರೇಲ್, ಕೆಸುಲ್ಲೋತ್, ಶೂನೇಮ್,
І була́ їхня границя: їзреел, і Кесуллот, і Шунем,
19 ೧೯ ಹಫಾರಯಿಮ್, ಶೀಯೋನ್, ಅನಾಹರತ್,
і Хафараїм, і Шіон, і Анахарат,
20 ೨೦ ರಬ್ಬೀತ್, ಕಿಷ್ಯೋನ್, ಎಬೆಜ್,
і Раббіт, і Кішйон, і Евес,
21 ೨೧ ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.
і Ремет, і Ен-Ґаннім, і Ен-Хадда, і Бет-Паццец.
22 ೨೨ ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
І дотикається та границя до Фаво́ру, і Шахаціми, і Бет-Шемету, і їхня границя закінчується при Йорда́ні, — шістнадцять міст та їхні оселі.
23 ೨೩ ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು.
Оце спа́док пле́мени Іссаха́рових синів за їхніми ро́дами, — міста́ та їхні оселі.
24 ೨೪ ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -
А п'ятий жеребо́к вийшов племені Асирових синів за їхніми ро́дами.
25 ೨೫ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,
І була́ їхня границя: Хелкат, і Халі, і Бетен, і Ахшат,
26 ೨೬ ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,
і Алламмелех, і Ам'ад, і Міш'ал, і дотикається Карме́лю на за́хід та Шіхор-Лівнату, (questioned)
27 ೨೭ ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು
і вертається на схід сонця до Бет-Даґону, і дотикається Завуло́на та Ґе-Їфтах-Елу, на пі́вніч Бет-Гаемеку та Ніелу, і виходить до Кавулу зліва.
28 ೨೮ ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.
І Еврон, і Рехов, і Хаммон, і Кана аж до Сидону Великого.
29 ೨೯ ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.
І вертається та границя до Рами́ та аж до міста Мівцар-Цору, і вертається границя до Хоси, і закінчується при за́ході від околиці Ахзіву,
30 ೩೦ ಉಮ್ಮಾ, ಅಫೇಕ್‌, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
і Умма, і Афек, і Рехов, — двадцять і двоє міст та їхні оселі.
31 ೩೧ ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.
Оце са́ддок пле́мени Аси́рових синів за їхніми ро́дами, ті міста та їхні оселі.
32 ೩೨ ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
Синам Нефталимовим вийшов шостий жеребо́к, — для синів Нефталимових за їхніми ро́дами.
33 ೩೩ ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
І була їхня границя: від Хелефу, від Елону при Цаананнімі, і Адамі — Ганнекев, і Явнеїл аж до Лаккуму, і кінча́лася вона при Йорда́ні.
34 ೩೪ ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
І повертається та границя на за́хід до Ашнот-Фавору, і виходить звідти до Хуккоку та дотикається Завуло́на з полу́дня, а Асира дотикається з за́ходу, а Юди при Йорда́ні на схід сонця.
35 ೩೫ ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,
А міста тверди́нні: Ціддім, Цер, і Хаммат, Раккат і Кіннерет,
36 ೩೬ ಆದಾಮಾ, ರಾಮಾ, ಹಾಚೋರ್,
і Адама, і Рама, і Хацор,
37 ೩೭ ಕೆದೆಷ್ ಎದ್ರೈ, ಏನ್ ಹಾಚೋರ್,
і Кедеш, і Едреї, і Ен-Хасор,
38 ೩೮ ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
і Їр'он, і Міґдал-Ел, Хорем, і Бет-Анат, і Бет-Шамеш, — дев'ятнадцять міст та їхні оселі.
39 ೩೯ ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ.
Оце спа́док племени синів Нефтали́мових за їхніми ро́дами, міста́ та їхні оселі.
40 ೪೦ ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:
А пле́мені Да́нових синів за їхніми ро́дами вийшов сьомий жеребок.
41 ೪೧ ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,
І була границя їхнього насліддя: Цор'а, і Ештаол, і Ір-Шемеш,
42 ೪೨ ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
і Шаалаббін, і Айялон, і Їтла,
43 ೪೩ ಏಲೋನ್, ತಿಮ್ನಾ ಎಕ್ರೋನ್,
і Елон, і Тімната, і Екрон,
44 ೪೪ ಎಲ್ತೆಕೇ, ಗಿಬ್ಬೆತೋನ್, ಬಾಲತ್,
і Елтеке, і Ґіббетон, і Баалат,
45 ೪೫ ಯೆಹುದ್, ಬೆನೇಬೆರಕ್, ಗತ್ ರಿಮ್ಮೋನ್,
і Єгуд, і Бене-Берак, і Ґат-Ріммон,
46 ೪೬ ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.
і Ме-Яркон, і Раккон із границею навпроти Яфи.
47 ೪೭ ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.
І вийшла границя Данових синів від них. А Да́нові сини пішли й воювали з Лешемом, і здобули його, і побили ві́стрям меча, і посіли його, та й осілися в ньому. І вони назвали Лешему ім'я́: Дан, як ім'я́ їхнього батька Дана.
48 ೪೮ ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ.
Оце спа́док племени Да́нових синів за їхніми ро́дами, ті міста́ та їхні оселі.
49 ೪೯ ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
І скінчи́ли вони посідати край згідно з його границями. І дали Ізраїлеві сини спа́док Ісусові, синові Навиновому, посеред себе.
50 ೫೦ ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.
На Господній нака́з дали йому те місто, яке він жадав: Тімнат-Серах на Єфремовій горі. І збудував він місто, та й осівся в ньому.
51 ೫೧ ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.
Оце той спа́док, що священик Елеазар і Ісус, син Навинів, та голови домів батьків давали племе́нам Ізраїлевих синів жеребком у Шіло́ перед Господнім лицем при вході до скинії заповіту. І покінчи́ли вони ділити край.

< ಯೆಹೋಶುವನು 19 >