< ಯೆಹೋಶುವನು 24 >

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.
و یوشع تمامی اسباط اسرائیل را درشکیم جمع کرد، و مشایخ اسرائیل وروسا و داوران و ناظران ایشان را طلبیده، به حضور خدا حاضر شدند.۱
2 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
و یوشع به تمامی قوم گفت که «یهوه خدای اسرائیل چنین می‌گوید که پدران شما، یعنی طارح پدر ابراهیم و پدر ناحور، در زمان قدیم به آن طرف نهر ساکن بودند، وخدایان غیر را عبادت می‌نمودند.۲
3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
و پدر شماابراهیم را از آن طرف نهر گرفته، در تمامی زمین کنعان گردانیدم، و ذریت او را زیاد کردم و اسحاق را به او دادم.۳
4 ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
و یعقوب و عیسو را به اسحاق دادم، و کوه سعیر را به عیسو دادم تا ملکیت اوبشود، و یعقوب و پسرانش به مصر فرود شدند.۴
5 ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
و موسی و هارون را فرستاده مصر را به آنچه دروسط آن کردم، مبتلا ساختم؛ پس شما را از آن بیرون آوردم.۵
6 ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
و چون پدران شما را از مصر بیرون آوردم وبه دریا رسیدید، مصریان با ارابه‌ها و سواران، پدران شما را تا بحر قلزم تعاقب نمودند.۶
7 ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.
و چون نزد خداوند فریاد کردند، او در میان شما ومصریان تاریکی گذارد، و دریا را برایشان آورده، ایشان را پوشانید، و چشمان شما آنچه را در مصرکردم دید، پس روزهای بسیار در بیابان ساکن می‌بودید.۷
8 ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.
پس شما را در زمین اموریانی که به آن طرف اردن ساکن بودند آوردم، و با شما جنگ کردند، و ایشان را به‌دست شما تسلیم نمودم، وزمین ایشان را در تصرف آوردید، و ایشان را ازحضور شما هلاک ساختم.۸
9 ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
و بالاق بن صفور ملک موآب برخاسته، با اسرائیل جنگ کرد وفرستاده، بلعام بن بعور را طلبید تا شما را لعنت کند.۹
10 ೧೦ ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.
و نخواستم که بلعام را بشنوم لهذا شما رابرکت همی داد و شما را از دست او رهانیدم.۱۰
11 ೧೧ ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
واز اردن عبور کرده، به اریحا رسیدید، و مردان اریحا یعنی اموریان و فرزیان و کنعانیان و حتیان و جرجاشیان و حویان و یبوسیان با شما جنگ کردند، و ایشان را به‌دست شما تسلیم نمودم.۱۱
12 ೧೨ ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
و زنبور را پیش شما فرستاده، ایشان، یعنی دوپادشاه اموریان را از حضور شما براندم، نه به شمشیر و نه به کمان شما.۱۲
13 ೧೩ ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”
و زمینی که در آن زحمت نکشیدید، و شهرهایی را که بنا ننمودید، به شما دادم که در آنها ساکن می‌باشید و ازتاکستانها و باغات زیتون که نکاشتید، می‌خورید.۱۳
14 ೧೪ ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.
پس الان از یهوه بترسید، و او را به خلوص و راستی عبادت نمایید، و خدایانی را که پدران شما به آن طرف نهر و در مصر عبادت نمودند ازخود دور کرده، یهوه را عبادت نمایید.۱۴
15 ೧೫ ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
و اگردر نظر شما پسند نیاید که یهوه را عبادت نمایید، پس امروز برای خود اختیار کنید که را عبادت خواهید نمود، خواه خدایانی را که پدران شما که به آن طرف نهر بودند عبادت نمودند، خواه خدایان اموریانی را که شما در زمین ایشان ساکنید، و اما من و خاندان من، یهوه را عبادت خواهیم نمود.»۱۵
16 ೧೬ ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.
آنگاه قوم در جواب گفتند: «حاشا از ما که یهوه را ترک کرده، خدایان غیر را عبادت نماییم.۱۶
17 ೧೭ ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
زیرا که یهوه، خدای ما، اوست که ما و پدران مارا از زمین مصر از خانه بندگی بیرون آورد، و این آیات بزرگ را در نظر ما نمود، و ما را در تمامی راه که رفتیم و در تمامی طوایفی که از میان ایشان گذشتیم، نگاه داشت.۱۷
18 ೧೮ ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
و یهوه تمامی طوایف، یعنی اموریانی را که در این زمین ساکن بودند ازپیش روی ما بیرون کرد، پس ما نیز یهوه را عبادت خواهیم نمود، زیرا که او خدای ماست.»۱۸
19 ೧೯ ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
پس یوشع به قوم گفت: «نمی توانید یهوه راعبادت کنید زیرا که او خدای قدوس است و اوخدای غیور است که عصیان و گناهان شما رانخواهد آمرزید.۱۹
20 ೨೦ ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
اگر یهوه را ترک کرده، خدایان غیر را عبادت نمایید، آنگاه او خواهدبرگشت و به شما ضرر رسانیده، بعد از آنکه به شما احسان نموده است، شما را هلاک خواهدکرد.»۲۰
21 ೨೧ ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
قوم به یوشع گفتند: «نی بلکه یهوه راعبادت خواهیم نمود.»۲۱
22 ೨೨ ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು
یوشع به قوم گفت: «شما برخود شاهد هستید که یهوه را برای خوداختیار نموده‌اید تا او را عبادت کنید.» گفتند: «شاهد هستیم.»۲۲
23 ೨೩ ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
(گفت ): «پس الان خدایان غیررا که در میان شما هستند دور کنید، و دلهای خودرا به یهوه، خدای اسرائیل، مایل سازید.»۲۳
24 ೨೪ ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
قوم به یوشع گفتند: «یهوه خدای خود را عبادت خواهیم نمود و آواز او را اطاعت خواهیم کرد.»۲۴
25 ೨೫ ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
پس در آن روز یوشع با قوم عهد بست و برای ایشان فریضه و شریعتی در شکیم قرار داد.۲۵
26 ೨೬ ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
ویوشع این سخنان را در کتاب تورات خدا نوشت و سنگی بزرگ گرفته، آن را در آنجا زیر درخت بلوطی که نزد قدس خداوند بود برپا داشت.۲۶
27 ೨೭ ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
ویوشع به تمامی قوم گفت: «اینک این سنگ برای ما شاهد است، زیرا که تمامی سخنان خداوند را که به ما گفت، شنیده است؛ پس برای شما شاهدخواهد بود، مبادا خدای خود را انکار نمایید.»۲۷
28 ೨೮ ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.
پس یوشع، قوم یعنی هر کس را به ملک خودروانه نمود.۲۸
29 ೨೯ ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.
و بعد از این امور واقع شد که یوشع بن نون، بنده خداوند، چون صد و ده ساله بود، مرد.۲۹
30 ೩೦ ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
و او را در حدود ملک خودش در تمنه سارح که در کوهستان افرایم به طرف شمال کوه جاعش است، دفن کردند.۳۰
31 ೩೧ ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
و اسرائیل در همه ایام یوشع و همه روزهای مشایخی که بعد از یوشع زنده ماندند وتمام عملی که خداوند برای اسرائیل کرده بوددانستند، خداوند را عبادت نمودند.۳۱
32 ೩೨ ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
واستخوانهای یوسف را که بنی‌اسرائیل از مصرآورده بودند در شکیم، در حصه زمینی که یعقوب از بنی حمور، پدر شکیم به صد قسیطه خریده بود، دفن کردند، و آن ملک بنی یوسف شد.۳۲
33 ೩೩ ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
و العازار بن هارون مرد، و او را در تل پسرش فینحاس که در کوهستان افرایم به او داده شد، دفن کردند.۳۳

< ಯೆಹೋಶುವನು 24 >