< ಯೆಹೋಶುವನು 1 >

1 ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
וַֽיְהִי אַחֲרֵי מוֹת מֹשֶׁה עֶבֶד יְהֹוָה וַיֹּאמֶר יְהֹוָה אֶל־יְהוֹשֻׁעַ בִּן־נוּן מְשָׁרֵת מֹשֶׁה לֵאמֹֽר׃
2 “ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
מֹשֶׁה עַבְדִּי מֵת וְעַתָּה קוּם עֲבֹר אֶת־הַיַּרְדֵּן הַזֶּה אַתָּה וְכׇל־הָעָם הַזֶּה אֶל־הָאָרֶץ אֲשֶׁר אָנֹכִי נֹתֵן לָהֶם לִבְנֵי יִשְׂרָאֵֽל׃
3 ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.
כׇּל־מָקוֹם אֲשֶׁר תִּדְרֹךְ כַּֽף־רַגְלְכֶם בּוֹ לָכֶם נְתַתִּיו כַּאֲשֶׁר דִּבַּרְתִּי אֶל־מֹשֶֽׁה׃
4 ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
מֵהַמִּדְבָּר וְהַלְּבָנוֹן הַזֶּה וְֽעַד־הַנָּהָר הַגָּדוֹל נְהַר־פְּרָת כֹּל אֶרֶץ הַֽחִתִּים וְעַד־הַיָּם הַגָּדוֹל מְבוֹא הַשָּׁמֶשׁ יִֽהְיֶה גְּבוּלְכֶֽם׃
5 ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
לֹא־יִתְיַצֵּב אִישׁ לְפָנֶיךָ כֹּל יְמֵי חַיֶּיךָ כַּאֲשֶׁר הָיִיתִי עִם־מֹשֶׁה אֶהְיֶה עִמָּךְ לֹא אַרְפְּךָ וְלֹא אֶעֶזְבֶֽךָּ׃
6 ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
חֲזַק וֶאֱמָץ כִּי אַתָּה תַּנְחִיל אֶת־הָעָם הַזֶּה אֶת־הָאָרֶץ אֲשֶׁר־נִשְׁבַּעְתִּי לַאֲבוֹתָם לָתֵת לָהֶֽם׃
7 ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
רַק חֲזַק וֶאֱמַץ מְאֹד לִשְׁמֹר לַֽעֲשׂוֹת כְּכׇל־הַתּוֹרָה אֲשֶׁר צִוְּךָ מֹשֶׁה עַבְדִּי אַל־תָּסוּר מִמֶּנּוּ יָמִין וּשְׂמֹאול לְמַעַן תַּשְׂכִּיל בְּכֹל אֲשֶׁר תֵּלֵֽךְ׃
8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
לֹֽא־יָמוּשׁ סֵפֶר הַתּוֹרָה הַזֶּה מִפִּיךָ וְהָגִיתָ בּוֹ יוֹמָם וָלַיְלָה לְמַעַן תִּשְׁמֹר לַעֲשׂוֹת כְּכׇל־הַכָּתוּב בּוֹ כִּי־אָז תַּצְלִיחַ אֶת־דְּרָכֶךָ וְאָז תַּשְׂכִּֽיל׃
9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
הֲלוֹא צִוִּיתִיךָ חֲזַק וֶאֱמָץ אַֽל־תַּעֲרֹץ וְאַל־תֵּחָת כִּי עִמְּךָ יְהֹוָה אֱלֹהֶיךָ בְּכֹל אֲשֶׁר תֵּלֵֽךְ׃
10 ೧೦ ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
וַיְצַו יְהוֹשֻׁעַ אֶת־שֹׁטְרֵי הָעָם לֵאמֹֽר׃
11 ೧೧ “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
עִבְרוּ ׀ בְּקֶרֶב הַֽמַּחֲנֶה וְצַוּוּ אֶת־הָעָם לֵאמֹר הָכִינוּ לָכֶם צֵידָה כִּי בְּעוֹד ׀ שְׁלֹשֶׁת יָמִים אַתֶּם עֹֽבְרִים אֶת־הַיַּרְדֵּן הַזֶּה לָבוֹא לָרֶשֶׁת אֶת־הָאָרֶץ אֲשֶׁר יְהֹוָה אֱלֹֽהֵיכֶם נֹתֵן לָכֶם לְרִשְׁתָּֽהּ׃
12 ೧೨ ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
וְלָרֽאוּבֵנִי וְלַגָּדִי וְלַחֲצִי שֵׁבֶט הַֽמְנַשֶּׁה אָמַר יְהוֹשֻׁעַ לֵאמֹֽר׃
13 ೧೩ “ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
זָכוֹר אֶת־הַדָּבָר אֲשֶׁר צִוָּה אֶתְכֶם מֹשֶׁה עֶבֶד־יְהֹוָה לֵאמֹר יְהֹוָה אֱלֹֽהֵיכֶם מֵנִיחַ לָכֶם וְנָתַן לָכֶם אֶת־הָאָרֶץ הַזֹּֽאת׃
14 ೧೪ ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
נְשֵׁיכֶם טַפְּכֶם וּמִקְנֵיכֶם יֵשְׁבוּ בָּאָרֶץ אֲשֶׁר נָתַן לָכֶם מֹשֶׁה בְּעֵבֶר הַיַּרְדֵּן וְאַתֶּם תַּעַבְרוּ חֲמֻשִׁים לִפְנֵי אֲחֵיכֶם כֹּל גִּבּוֹרֵי הַחַיִל וַעֲזַרְתֶּם אוֹתָֽם׃
15 ೧೫ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
עַד אֲשֶׁר־יָנִיחַ יְהֹוָה ׀ לַאֲחֵיכֶם כָּכֶם וְיָרְשׁוּ גַם־הֵמָּה אֶת־הָאָרֶץ אֲשֶׁר־יְהֹוָה אֱלֹהֵיכֶם נֹתֵן לָהֶם וְשַׁבְתֶּם לְאֶרֶץ יְרֻשַּׁתְכֶם וִירִשְׁתֶּם אוֹתָהּ אֲשֶׁר ׀ נָתַן לָכֶם מֹשֶׁה עֶבֶד יְהֹוָה בְּעֵבֶר הַיַּרְדֵּן מִזְרַח הַשָּֽׁמֶשׁ׃
16 ೧೬ ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
וַֽיַּעֲנוּ אֶת־יְהוֹשֻׁעַ לֵאמֹר כֹּל אֲשֶׁר־צִוִּיתָנוּ נַעֲשֶׂה וְאֶֽל־כׇּל־אֲשֶׁר תִּשְׁלָחֵנוּ נֵלֵֽךְ׃
17 ೧೭ ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
כְּכֹל אֲשֶׁר־שָׁמַעְנוּ אֶל־מֹשֶׁה כֵּן נִשְׁמַע אֵלֶיךָ רַק יִֽהְיֶה יְהֹוָה אֱלֹהֶיךָ עִמָּךְ כַּאֲשֶׁר הָיָה עִם־מֹשֶֽׁה׃
18 ೧೮ ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.
כׇּל־אִישׁ אֲשֶׁר־יַמְרֶה אֶת־פִּיךָ וְלֹֽא־יִשְׁמַע אֶת־דְּבָרֶיךָ לְכֹל אֲשֶׁר־תְּצַוֶּנּוּ יוּמָת רַק חֲזַק וֶאֱמָֽץ׃

< ಯೆಹೋಶುವನು 1 >