< ನ್ಯಾಯಸ್ಥಾಪಕರು 16 >

1 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
Samsoni alikwenda Gaza na akamwona kahaba huko, naye akalala pamoja naye.
2 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.
Watu wa Gaza wakaambiwa, “Samsoni amekuja hapa.” Watu wa Gaza wakazunguka mahali hapo kwa siri, wakamngoja usiku wote katika lango la jiji. Walikaa kimya usiku wote. Wakisema, “Hebu tusubiri mpaka mchana, na kisha tumwuue.”
3 ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
Samsoni akalala kitandani mpaka usiku wa manane. Usiku wa manane akaamka na akashika mlango wa jiji na miimo yake miwili. Akavivuta kutoka nje, komeo na vyote, akaviweka kwenye mabega yake, akavichukua hadi juu ya kilima, mbele ya Hebroni.
4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
Baada ya hayo, Samsoni alimpenda mwanamke aliyeishi katika bonde la Soreki. Jina lake alikuwa Delila.
5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
Wale wakuu wa Wafilisti wakamwendea, wakamwambia, “mdanganye Samsoni ili uone mahali zilipo nguvu zake kuu, na kwa namna gani tunaweza kumshinda, ili tumfunge na kumtesa. Fanya hili, na kila mmoja wetu atakupa vipande 1, 100 vya fedha.”
6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
Ndipo Delila akamwambia Samsoni, “Tafadhali, niambie ni kwa jinsi gani wewe ni mwenye nguvu sana, na kwa namna gani mtu anaweza kukufunga, ili aweze kukudhibiti?”
7 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
Samsoni akamwambia, “Ikiwa watanifunga na kamba saba safi ambazo hazijakauka, nitakuwa dhaifu na kuwa kama mtu mwingine yeyote.”
8 ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
Basi wakuu wa Wafilisti wakamletea Delila kamba saba ambazo hazijakauka, naye akamfunga Samsoni.
9 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.
Sasa alikuwa na watu waliojificha kwa siri, walikaa katika chumba chake cha ndani. Akamwambia, “Wafilisti wako juu yako, Samsoni!” Lakini akazikata kamba kama uzi wakati unapogusa moto. Na hawakujifunza siri ya nguvu zake.
10 ೧೦ ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
Ndipo Delila akamwambia Samsoni, “Ndivyo ulivyonidanganya mimi na kuniambia uongo. Tafadhali, niambie kwa namna gani unaweza kufungwa.”
11 ೧೧ ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.
Akamwambia, “Ikiwa watanifunga na kamba mpya ambayo haijawahi kutumika kwa kazi, nitakuwa dhaifu na kama mtu mwingine yeyote.”
12 ೧೨ ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
Basi Delila alichukua kamba mpya akamfunga pamoja naye, akamwambia, “Wafilisti wako juu yako Samsoni!” Watu waliokuwa wakisubiri walikuwa ndani ya chumba cha ndani. Lakini Samsoni akaondoa kamba kutoka mikono yake kama kilikuwa kipande cha uzi.
13 ೧೩ ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
Delila akamwambia Samsoni, “Mpaka sasa umenidanganya na kuniambia uongo. Niambie kwa namna gani unaweza kufungwa.” Samsoni akamwambia, 'Ikiwa utavifuma vifungo saba vya nywele zangu na kuvifunga kwenye kitambaa, kisha kufunga kwenye msumari, nitakuwa kama mtu mwingine yeyote.”
14 ೧೪ ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
Alipokuwa amelala, Dalila akavifuma vifungo saba vya nywele zake akavifunga ndani ya kitambaa na kuzifunga kwenye msumari, akamwambia, “Wafilisti wako juu yako, Samsoni!” Aliamka kutoka usingizini akang'oa kitambaa na pini zilizokuwa zimefungwa.
15 ೧೫ ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
Akamwambia, “Wawezaje kusema,” Unanipenda, wakati hushiriki siri zako na mimi? Umenidhihaki mara tatu hizi na hukukuambia ni kwa jinsi gani unazo nguvu nyingi.”
16 ೧೬ ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
Kila siku alisisitiza kwa bidii na maneno yake, naye akamkemea sana kiasi kwamba alitamani kufa.
17 ೧೭ ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
Basi Samsoni alimwambia kila kitu, akamwambia, “Wembe haujawahi kukata nywele juu ya kichwa changu, kwa maana nimekuwa Mnaziri kwa Mungu kutoka tumboni mwa mama yangu. Ikiwa kichwa changu kitanyolewa, basi nguvu zangu zitaniacha, nami nitakuwa dhaifu na kuwa kama kila mtu mwingine. '
18 ೧೮ ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
Delila alipoona kwamba amemwambia ukweli juu ya kila kitu, akawatuma na kuwaita watawala wa Wafilisti, akisema, “Njooni tena, kwa maana ameniambia kila kitu.” Ndipo wakuu wa Wafilisti wakamwendea, wakaleta fedha mkononi mwao.
19 ೧೯ ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
Alimfanya alale katika magoti yake. Alimwita mtu avinyoe vifungo saba vya kichwa chake, naye akaanza kumshinda, kwa maana nguvu zake zilikuwa zimemwacha.
20 ೨೦ ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
Alisema, “Wafilisti wako juu yako, Samsoni!” Aliamka nje ya usingizi wake akasema, “Nitatoka nje kama nyakati nyingine na kujiweka huru.” Lakini hakujua kwamba Bwana amemwacha.
21 ೨೧ ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
Wafilisti walimkamata na kumng'oa macho. Wakampeleka Gaza na kumfunga kwa shaba. Alikuwa akisaga ngano katika gerezani.
22 ೨೨ ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.
Lakini nywele juu ya kichwa chake zilianza kukua tena baada ya kunyolewa.
23 ೨೩ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
Watawala wa Wafilisti walikusanyika ili kutoa dhabihu kubwa kwa Dagoni mungu wao, na kufurahi. Walisema, “mungu wetu amemshinda Samsoni, adui yetu, na kumtia katika ufahamu wetu.”
24 ೨೪ ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.
Watu walipomwona, walimsifu mungu wao, kwa sababu walisema, “mungu wetu ameshinda adui yetu na kutupa sisi - mharibifu wa nchi yetu, ambaye aliwaua wengi wetu.”
25 ೨೫ ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
Walipokuwa wakisherehekea, wakasema, 'Mwite Samsoni, aje kutufurahisha.' Walimwita Samsoni nje ya jela na akawafanya wacheke. Walimsimamisha katikati ya nguzo.
26 ೨೬ ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
Samsoni akamwambia yule kijana ambaye alikuwa ameshika mkono wake, 'Niruhusu nishike nguzo zilizoshikilia nyumba hii, ili nipate kuegemea.”
27 ೨೭ ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
Sasa nyumba ilikuwa imejaa wanaume na wanawake. Watawala wote wa Wafilisti walikuwa huko. Juu ya paa kulikuwa na wanaume na wanawake elfu tatu, ambao walikuwa wakiangalia wakati Samsoni alipokuwa akiwafurahisha.
28 ೨೮ ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
Samsoni akamwita Bwana, akasema, “Bwana MUNGU, nipe nia! Tafadhali niimarishe mara moja tu, Mungu, ili nipate kulipiza kisasi kwa Wafilisti kwa kuchukua macho yangu mawili.
29 ೨೯ ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
Samsoni aliweka nguzo mbili katikati ambzo zinashikilia nyumba hiyo, naye akaegemea juu yake, nguzo moja kwa mkono wake wa kuume, na mwingine kwa kushoto kwake.
30 ೩೦ “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
Samsoni akasema, “Na nife pamoja na Wafilisti!” Alipanda kwa nguvu zake na jengo likaanguka juu ya watawala na juu ya watu wote waliokuwa ndani yake. Hivyo waliouawa wakati alikufa walikuwa zaidi ya wale waliouawa wakati wa maisha yake.
31 ೩೧ ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.
Kisha ndugu zake na nyumba yote ya baba yake wakashuka. Wakamchukua, wakamrudisha na kumzika kati ya Sora na Eshtaoli katika mahali pa kuzikwa Manoa, baba yake. Samsoni alikuwa mwamuzi wa Israeli kwa miaka ishirini.

< ನ್ಯಾಯಸ್ಥಾಪಕರು 16 >