< ನ್ಯಾಯಸ್ಥಾಪಕರು 2 >

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,
Mala’ikan Ubangiji ya haura daga Gilgal zuwa Bokim ya ce, “Na hauro da ku daga Masar zuwa ƙasar da na rantse zan ba wa kakanninku. Na ce, ‘Ba zan taɓa tā da yarjejjeniyata da ku ba,
2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
ku kuma kada ku shiga wata yarjejjeniya da mazaunan ƙasan nan, sai dai za ku rurrushe bagadansu.’ Duk da haka ba ku yi biyayya mini ba. Me ya sa kuka yi haka?
3 ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
Saboda haka ina gaya muku cewa ba zan kore su a gabanku ba; za su zama muku ƙaya, gumakansu kuma za su zama muku tarko.”
4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
Da mala’ikan Ubangiji ya faɗa wa dukan Isra’ilawa waɗannan abubuwa, sai mutane suka yi kuka mai zafi,
5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.
sai suka sa wa wannan wuri suna, Bokim. A nan suka miƙa hadaya a gaban Ubangiji.
6 ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
Bayan Yoshuwa ya sallami Isra’ilawa, sai suka tafi don su mallaki ƙasar, kowa da nasa gādon.
7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
Mutane suka bauta wa Ubangiji duk tsawon kwanakin Yoshuwa da na dattawan da suka rayu bayansa waɗanda suka ga manyan abubuwan da Ubangiji ya yi wa Isra’ila.
8 ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.
Yoshuwa ɗan Nun, bawan Ubangiji, ya mutu yana da shekara ɗari da goma.
9 ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.
Aka binne shi a ƙasar gādonsa, a Timnat Heres a ƙasar tudu ta Efraim, arewa da Dutsen Ga’ash.
10 ೧೦ ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
Bayan tsaran nan duka suka rasu, sai wata tsara ta taso wadda ba tă san Ubangiji ko abin da ya yi wa Isra’ila ba.
11 ೧೧ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
Sai Isra’ilawa suka yi mugaye abubuwa a gaban Ubangiji suka kuma bauta Ba’al.
12 ೧೨ ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
Suka yashe Ubangiji Allah na kakanninsu, wanda ya fitar da su daga Masar. Suka bi suka kuma bauta alloli dabam-dabam na mutanen da suke kewaye da su. Suka tsokani Ubangiji ya yi fushi
13 ೧೩ ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.
domin sun bar shi suka bauta wa Ba’al da Ashtarot.
14 ೧೪ ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
Cikin fushinsa a kan Isra’ila Ubangiji ya ba da su ga hannun waɗanda suka kawo musu hari suka washe su. Ya sayar da su ga abokan gābansu da suke kewaye da su, waɗanda ba za su iya yin tsayayya da su ba.
15 ೧೫ ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
Duk sa’ad da Isra’ila suka fita yaƙi, Ubangiji yakan yi gāba da su don a ci su a yaƙi, kamar dai yadda ya rantse musu. Suka kuwa shiga wahala ƙwarai.
16 ೧೬ ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
Sa’an nan Ubangiji ya naɗa mahukunta, waɗanda suka cece su daga hannun waɗannan musu hari.
17 ೧೭ ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.
Duk da haka ba su saurari mahukuntansu ba amma sai suka shiga ha’inci da waɗansu alloli suka kuma bauta musu. Ba kamar kakanninsu ba, nan da nan suka kauce daga hanyar da kakanninsu suka bi, hanyar biyayya ga umarnan Ubangiji.
18 ೧೮ ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
Duk sa’ad da Ubangiji ya naɗa musu mahukunci, yakan kasance tare da mahukuncin, yă kuma cece su daga hannun abokan gāba, muddin mahukuncin yana a raye; gama Ubangiji yakan ji tausayinsu yayinda suke gunaguni ƙarƙashin waɗanda suka danne su suke kuma gasa musu azaba.
19 ೧೯ ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
Amma sa’ad da mahukuncin ya mutu, mutanen suka koma hanyar da ta fi ta kakanninsu muni, sukan bi waɗansu alloli suna bauta musu. Suka ƙi barin mugun ayyukansu da taurin zuciyarsu.
20 ೨೦ ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
Saboda haka sai Ubangiji ya fusata da Isra’ila ya ce, “Domin wannan al’umma ta tā da yarjejjeniyar da na yi da kakanninsu ba su kuwa saurare ni ba,
21 ೨೧ ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
ba zan ƙara kori wata al’ummar da Yoshuwa ya bari sa’ad da ya rasu ba.
22 ೨೨ ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
Zan yi amfani da su in gwada Isra’ila in ga ko za su bi hanyar Ubangiji su kuma yi tafiya a cikinta kamar yadda kakanninsu suka yi.”
23 ೨೩ ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
Ubangiji ya bar waɗannan al’ummai su kasance; bai kore su nan take ta wurin ba da su a hannun Yoshuwa ba.

< ನ್ಯಾಯಸ್ಥಾಪಕರು 2 >