< ನ್ಯಾಯಸ್ಥಾಪಕರು 4 >

1 ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
וַיֹּסִפוּ בְּנֵי יִשְׂרָאֵל לַעֲשׂוֹת הָרַע בְּעֵינֵי יְהֹוָה וְאֵהוּד מֵֽת׃
2 ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
וַיִּמְכְּרֵם יְהֹוָה בְּיַד יָבִין מֶלֶךְ־כְּנַעַן אֲשֶׁר מָלַךְ בְּחָצוֹר וְשַׂר־צְבָאוֹ סִֽיסְרָא וְהוּא יוֹשֵׁב בַּחֲרֹשֶׁת הַגּוֹיִֽם׃
3 ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
וַיִּצְעֲקוּ בְנֵֽי־יִשְׂרָאֵל אֶל־יְהֹוָה כִּי תְּשַׁע מֵאוֹת רֶֽכֶב־בַּרְזֶל לוֹ וְהוּא לָחַץ אֶת־בְּנֵי יִשְׂרָאֵל בְּחׇזְקָה עֶשְׂרִים שָׁנָֽה׃
4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.
וּדְבוֹרָה אִשָּׁה נְבִיאָה אֵשֶׁת לַפִּידוֹת הִיא שֹׁפְטָה אֶת־יִשְׂרָאֵל בָּעֵת הַהִֽיא׃
5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
וְהִיא יוֹשֶׁבֶת תַּחַת־תֹּמֶר דְּבוֹרָה בֵּין הָרָמָה וּבֵין בֵּֽית־אֵל בְּהַר אֶפְרָיִם וַיַּעֲלוּ אֵלֶיהָ בְּנֵי יִשְׂרָאֵל לַמִּשְׁפָּֽט׃
6 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
וַתִּשְׁלַח וַתִּקְרָא לְבָרָק בֶּן־אֲבִינֹעַם מִקֶּדֶשׁ נַפְתָּלִי וַתֹּאמֶר אֵלָיו הֲלֹא צִוָּה ׀ יְהֹוָה אֱלֹהֵֽי־יִשְׂרָאֵל לֵךְ וּמָֽשַׁכְתָּ בְּהַר תָּבוֹר וְלָקַחְתָּ עִמְּךָ עֲשֶׂרֶת אֲלָפִים אִישׁ מִבְּנֵי נַפְתָּלִי וּמִבְּנֵי זְבֻלֽוּן׃
7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
וּמָשַׁכְתִּי אֵלֶיךָ אֶל־נַחַל קִישׁוֹן אֶת־סִֽיסְרָא שַׂר־צְבָא יָבִין וְאֶת־רִכְבּוֹ וְאֶת־הֲמוֹנוֹ וּנְתַתִּיהוּ בְּיָדֶֽךָ׃
8 ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
וַיֹּאמֶר אֵלֶיהָ בָּרָק אִם־תֵּלְכִי עִמִּי וְהָלָכְתִּי וְאִם־לֹא תֵֽלְכִי עִמִּי לֹא אֵלֵֽךְ׃
9 ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
וַתֹּאמֶר הָלֹךְ אֵלֵךְ עִמָּךְ אֶפֶס כִּי לֹא תִֽהְיֶה תִּֽפְאַרְתְּךָ עַל־הַדֶּרֶךְ אֲשֶׁר אַתָּה הוֹלֵךְ כִּי בְֽיַד־אִשָּׁה יִמְכֹּר יְהֹוָה אֶת־סִֽיסְרָא וַתָּקׇם דְּבוֹרָה וַתֵּלֶךְ עִם־בָּרָק קֶֽדְשָׁה׃
10 ೧೦ ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
וַיַּזְעֵק בָּרָק אֶת־זְבוּלֻן וְאֶת־נַפְתָּלִי קֶדְשָׁה וַיַּעַל בְּרַגְלָיו עֲשֶׂרֶת אַלְפֵי אִישׁ וַתַּעַל עִמּוֹ דְּבוֹרָֽה׃
11 ೧೧ (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
וְחֶבֶר הַקֵּינִי נִפְרָד מִקַּיִן מִבְּנֵי חֹבָב חֹתֵן מֹשֶׁה וַיֵּט אׇֽהֳלוֹ עַד־אֵילוֹן (בצענים) [בְּצַעֲנַנִּים] אֲשֶׁר אֶת־קֶֽדֶשׁ׃
12 ೧೨ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
וַיַּגִּדוּ לְסִֽיסְרָא כִּי עָלָה בָּרָק בֶּן־אֲבִינֹעַם הַר־תָּבֽוֹר׃
13 ೧೩ ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.
וַיַּזְעֵק סִֽיסְרָא אֶת־כׇּל־רִכְבּוֹ תְּשַׁע מֵאוֹת רֶכֶב בַּרְזֶל וְאֶת־כׇּל־הָעָם אֲשֶׁר אִתּוֹ מֵחֲרֹשֶׁת הַגּוֹיִם אֶל־נַחַל קִישֽׁוֹן׃
14 ೧೪ ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
וַתֹּאמֶר דְּבֹרָה אֶל־בָּרָק קוּם כִּי זֶה הַיּוֹם אֲשֶׁר נָתַן יְהֹוָה אֶת־סִֽיסְרָא בְּיָדֶךָ הֲלֹא יְהֹוָה יָצָא לְפָנֶיךָ וַיֵּרֶד בָּרָק מֵהַר תָּבוֹר וַעֲשֶׂרֶת אֲלָפִים אִישׁ אַחֲרָֽיו׃
15 ೧೫ ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
וַיָּהׇם יְהֹוָה אֶת־סִֽיסְרָא וְאֶת־כׇּל־הָרֶכֶב וְאֶת־כׇּל־הַֽמַּחֲנֶה לְפִי־חֶרֶב לִפְנֵי בָרָק וַיֵּרֶד סִֽיסְרָא מֵעַל הַמֶּרְכָּבָה וַיָּנׇס בְּרַגְלָֽיו׃
16 ೧೬ ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
וּבָרָק רָדַף אַחֲרֵי הָרֶכֶב וְאַחֲרֵי הַֽמַּחֲנֶה עַד חֲרֹשֶׁת הַגּוֹיִם וַיִּפֹּל כׇּל־מַחֲנֵה סִֽיסְרָא לְפִי־חֶרֶב לֹא נִשְׁאַר עַד־אֶחָֽד׃
17 ೧೭ ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
וְסִֽיסְרָא נָס בְּרַגְלָיו אֶל־אֹהֶל יָעֵל אֵשֶׁת חֶבֶר הַקֵּינִי כִּי שָׁלוֹם בֵּין יָבִין מֶלֶךְ־חָצוֹר וּבֵין בֵּית חֶבֶר הַקֵּינִֽי׃
18 ೧೮ ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
וַתֵּצֵא יָעֵל לִקְרַאת סִֽיסְרָא וַתֹּאמֶר אֵלָיו סוּרָה אֲדֹנִי סוּרָה אֵלַי אַל־תִּירָא וַיָּסַר אֵלֶיהָ הָאֹהֱלָה וַתְּכַסֵּהוּ בַּשְּׂמִיכָֽה׃
19 ೧೯ ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
וַיֹּאמֶר אֵלֶיהָ הַשְׁקִינִי־נָא מְעַט־מַיִם כִּי צָמֵאתִי וַתִּפְתַּח אֶת־נֹאוד הֶחָלָב וַתַּשְׁקֵהוּ וַתְּכַסֵּֽהוּ׃
20 ೨೦ ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
וַיֹּאמֶר אֵלֶיהָ עֲמֹד פֶּתַח הָאֹהֶל וְהָיָה אִם־אִישׁ יָבֹא וּשְׁאֵלֵךְ וְאָמַר הֲיֵֽשׁ־פֹּה אִישׁ וְאָמַרְתְּ אָֽיִן׃
21 ೨೧ ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
וַתִּקַּח יָעֵל אֵֽשֶׁת־חֶבֶר אֶת־יְתַד הָאֹהֶל וַתָּשֶׂם אֶת־הַמַּקֶּבֶת בְּיָדָהּ וַתָּבוֹא אֵלָיו בַּלָּאט וַתִּתְקַע אֶת־הַיָּתֵד בְּרַקָּתוֹ וַתִּצְנַח בָּאָרֶץ וְהֽוּא־נִרְדָּם וַיָּעַף וַיָּמֹֽת׃
22 ೨೨ ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.
וְהִנֵּה בָרָק רֹדֵף אֶת־סִֽיסְרָא וַתֵּצֵא יָעֵל לִקְרָאתוֹ וַתֹּאמֶר לוֹ לֵךְ וְאַרְאֶךָּ אֶת־הָאִישׁ אֲשֶׁר־אַתָּה מְבַקֵּשׁ וַיָּבֹא אֵלֶיהָ וְהִנֵּה סִֽיסְרָא נֹפֵל מֵת וְהַיָּתֵד בְּרַקָּתֽוֹ׃
23 ೨೩ ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.
וַיַּכְנַע אֱלֹהִים בַּיּוֹם הַהוּא אֵת יָבִין מֶֽלֶךְ־כְּנָעַן לִפְנֵי בְּנֵי יִשְׂרָאֵֽל׃
24 ೨೪ ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
וַתֵּלֶךְ יַד בְּנֵֽי־יִשְׂרָאֵל הָלוֹךְ וְקָשָׁה עַל יָבִין מֶלֶךְ־כְּנָעַן עַד אֲשֶׁר הִכְרִיתוּ אֵת יָבִין מֶלֶךְ־כְּנָֽעַן׃

< ನ್ಯಾಯಸ್ಥಾಪಕರು 4 >