< ಪ್ರಲಾಪಗಳು 1 >

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
אֵיכָ֣ה ׀ יָשְׁבָ֣ה בָדָ֗ד הָעִיר֙ רַבָּ֣תִי עָ֔ם הָיְתָ֖ה כְּאַלְמָנָ֑ה רַבָּ֣תִי בַגֹּויִ֗ם שָׂרָ֙תִי֙ בַּמְּדִינֹ֔ות הָיְתָ֖ה לָמַֽס׃ ס
2 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
בָּכֹ֨ו תִבְכֶּ֜ה בַּלַּ֗יְלָה וְדִמְעָתָהּ֙ עַ֣ל לֶֽחֱיָ֔הּ אֵֽין־לָ֥הּ מְנַחֵ֖ם מִכָּל־אֹהֲבֶ֑יהָ כָּל־רֵעֶ֙יהָ֙ בָּ֣גְדוּ בָ֔הּ הָ֥יוּ לָ֖הּ לְאֹיְבִֽים׃ ס
3 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
גָּֽלְתָ֨ה יְהוּדָ֤ה מֵעֹ֙נִי֙ וּמֵרֹ֣ב עֲבֹדָ֔ה הִ֚יא יָשְׁבָ֣ה בַגֹּויִ֔ם לֹ֥א מָצְאָ֖ה מָנֹ֑וחַ כָּל־רֹדְפֶ֥יהָ הִשִּׂיג֖וּהָ בֵּ֥ין הַמְּצָרִֽים׃ ס
4 ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
דַּרְכֵ֨י צִיֹּ֜ון אֲבֵלֹ֗ות מִבְּלִי֙ בָּאֵ֣י מֹועֵ֔ד כָּל־שְׁעָרֶ֙יהָ֙ שֹֽׁומֵמִ֔ין כֹּהֲנֶ֖יהָ נֶאֱנָחִ֑ים בְּתוּלֹתֶ֥יהָ נּוּגֹ֖ות וְהִ֥יא מַר־לָֽהּ׃ ס
5 ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
הָי֨וּ צָרֶ֤יהָ לְרֹאשׁ֙ אֹיְבֶ֣יהָ שָׁל֔וּ כִּֽי־יְהוָ֥ה הֹוגָ֖הּ עַ֣ל רֹב־פְּשָׁעֶ֑יהָ עֹולָלֶ֛יהָ הָלְכ֥וּ שְׁבִ֖י לִפְנֵי־צָֽר׃ ס
6 ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
וַיֵּצֵ֥א מִן־בַת־ (מִבַּת)־צִיֹּ֖ון כָּל־הֲדָרָ֑הּ הָי֣וּ שָׂרֶ֗יהָ כְּאַיָּלִים֙ לֹא־מָצְא֣וּ מִרְעֶ֔ה וַיֵּלְכ֥וּ בְלֹא־כֹ֖חַ לִפְנֵ֥י רֹודֵֽף׃ ס
7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.
זָֽכְרָ֣ה יְרוּשָׁלַ֗͏ִם יְמֵ֤י עָנְיָהּ֙ וּמְרוּדֶ֔יהָ כֹּ֚ל מַחֲמֻדֶ֔יהָ אֲשֶׁ֥ר הָי֖וּ מִ֣ימֵי קֶ֑דֶם בִּנְפֹ֧ל עַמָּ֣הּ בְּיַד־צָ֗ר וְאֵ֤ין עֹוזֵר֙ לָ֔הּ רָא֣וּהָ צָרִ֔ים שָׂחֲק֖וּ עַ֥ל מִשְׁבַּתֶּֽהָ׃ ס
8 ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
חֵ֤טְא חָֽטְאָה֙ יְר֣וּשָׁלַ֔͏ִם עַל־כֵּ֖ן לְנִידָ֣ה הָיָ֑תָה כָּֽל־מְכַבְּדֶ֤יהָ הִזִּיל֙וּהָ֙ כִּי־רָא֣וּ עֶרְוָתָ֔הּ גַּם־הִ֥יא נֶאֶנְחָ֖ה וַתָּ֥שָׁב אָחֹֽור׃ ס
9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.
טֻמְאָתָ֣הּ בְּשׁוּלֶ֗יהָ לֹ֤א זָֽכְרָה֙ אַחֲרִיתָ֔הּ וַתֵּ֣רֶד פְּלָאִ֔ים אֵ֥ין מְנַחֵ֖ם לָ֑הּ רְאֵ֤ה יְהוָה֙ אֶת־עָנְיִ֔י כִּ֥י הִגְדִּ֖יל אֹויֵֽב׃ ס
10 ೧೦ ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
יָדֹו֙ פָּ֣רַשׂ צָ֔ר עַ֖ל כָּל־מַחֲמַדֶּ֑יהָ כִּֽי־רָאֲתָ֤ה גֹויִם֙ בָּ֣אוּ מִקְדָּשָׁ֔הּ אֲשֶׁ֣ר צִוִּ֔יתָה לֹא־יָבֹ֥אוּ בַקָּהָ֖ל לָֽךְ׃ ס
11 ೧೧ ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.
כָּל־עַמָּ֤הּ נֶאֱנָחִים֙ מְבַקְּשִׁ֣ים לֶ֔חֶם נָתְנ֧וּ מַחֲמֹודֵּיהֶם (מַחֲמַדֵּיהֶ֛ם) בְּאֹ֖כֶל לְהָשִׁ֣יב נָ֑פֶשׁ רְאֵ֤ה יְהוָה֙ וְֽהַבִּ֔יטָה כִּ֥י הָיִ֖יתִי זֹולֵלָֽה׃ ס
12 ೧೨ ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.
לֹ֣וא אֲלֵיכֶם֮ כָּל־עֹ֣בְרֵי דֶרֶךְ֒ הַבִּ֣יטוּ וּרְא֗וּ אִם־יֵ֤שׁ מַכְאֹוב֙ כְּמַכְאֹבִ֔י אֲשֶׁ֥ר עֹולַ֖ל לִ֑י אֲשֶׁר֙ הֹוגָ֣ה יְהוָ֔ה בְּיֹ֖ום חֲרֹ֥ון אַפֹּֽו׃ ס
13 ೧೩ ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
מִמָּרֹ֛ום שָֽׁלַח־אֵ֥שׁ בְּעַצְמֹתַ֖י וַיִּרְדֶּ֑נָּה פָּרַ֨שׂ רֶ֤שֶׁת לְרַגְלַי֙ הֱשִׁיבַ֣נִי אָחֹ֔ור נְתָנַ֙נִי֙ שֹֽׁמֵמָ֔ה כָּל־הַיֹּ֖ום דָּוָֽה׃ ס
14 ೧೪ ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
נִשְׂקַד֩ עֹ֨ל פְּשָׁעַ֜י בְּיָדֹ֗ו יִשְׂתָּ֥רְג֛וּ עָל֥וּ עַל־צַוָּארִ֖י הִכְשִׁ֣יל כֹּחִ֑י נְתָנַ֣נִי אֲדֹנָ֔י בִּידֵ֖י לֹא־אוּכַ֥ל קֽוּם׃ ס
15 ೧೫ ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.
סִלָּ֨ה כָל־אַבִּירַ֤י ׀ אֲדֹנָי֙ בְּקִרְבִּ֔י קָרָ֥א עָלַ֛י מֹועֵ֖ד לִשְׁבֹּ֣ר בַּחוּרָ֑י גַּ֚ת דָּרַ֣ךְ אֲדֹנָ֔י לִבְתוּלַ֖ת בַּת־יְהוּדָֽה׃ ס
16 ೧೬ ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
עַל־אֵ֣לֶּה ׀ אֲנִ֣י בֹוכִיָּ֗ה עֵינִ֤י ׀ עֵינִי֙ יֹ֣רְדָה מַּ֔יִם כִּֽי־רָחַ֥ק מִמֶּ֛נִּי מְנַחֵ֖ם מֵשִׁ֣יב נַפְשִׁ֑י הָי֤וּ בָנַי֙ שֹֽׁומֵמִ֔ים כִּ֥י גָבַ֖ר אֹויֵֽב׃ ס
17 ೧೭ ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.
פֵּֽרְשָׂ֨ה צִיֹּ֜ון בְּיָדֶ֗יהָ אֵ֤ין מְנַחֵם֙ לָ֔הּ צִוָּ֧ה יְהוָ֛ה לְיַעֲקֹ֖ב סְבִיבָ֣יו צָרָ֑יו הָיְתָ֧ה יְרוּשָׁלַ֛͏ִם לְנִדָּ֖ה בֵּינֵיהֶֽם׃ ס
18 ೧೮ ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
צַדִּ֥יק ה֛וּא יְהוָ֖ה כִּ֣י פִ֣יהוּ מָרִ֑יתִי שִׁמְעוּ־נָ֣א כָל־עַמִּים (הָֽעַמִּ֗ים) וּרְאוּ֙ מַכְאֹבִ֔י בְּתוּלֹתַ֥י וּבַחוּרַ֖י הָלְכ֥וּ בַשֶּֽׁבִי׃ ס
19 ೧೯ ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
קָרָ֤אתִי לַֽמְאַהֲבַי֙ הֵ֣מָּה רִמּ֔וּנִי כֹּהֲנַ֥י וּזְקֵנַ֖י בָּעִ֣יר גָּוָ֑עוּ כִּֽי־בִקְשׁ֥וּ אֹ֙כֶל֙ לָ֔מֹו וְיָשִׁ֖יבוּ אֶת־נַפְשָֽׁם׃ ס
20 ೨೦ ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.
רְאֵ֨ה יְהוָ֤ה כִּֽי־צַר־לִי֙ מֵעַ֣י חֳמַרְמָ֔רוּ נֶהְפַּ֤ךְ לִבִּי֙ בְּקִרְבִּ֔י כִּ֥י מָרֹ֖ו מָרִ֑יתִי מִח֥וּץ שִׁכְּלָה־חֶ֖רֶב בַּבַּ֥יִת כַּמָּֽוֶת׃ ס
21 ೨೧ ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!
שָׁמְע֞וּ כִּ֧י נֶאֱנָחָ֣ה אָ֗נִי אֵ֤ין מְנַחֵם֙ לִ֔י כָּל־אֹ֨יְבַ֜י שָׁמְע֤וּ רָֽעָתִי֙ שָׂ֔שׂוּ כִּ֥י אַתָּ֖ה עָשִׂ֑יתָ הֵבֵ֥אתָ יֹום־קָרָ֖אתָ וְיִֽהְי֥וּ כָמֹֽונִי׃ ס
22 ೨೨ ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.
תָּבֹ֨א כָל־רָעָתָ֤ם לְפָנֶ֙יךָ֙ וְעֹולֵ֣ל לָ֔מֹו כַּאֲשֶׁ֥ר עֹולַ֛לְתָּ לִ֖י עַ֣ל כָּל־פְּשָׁעָ֑י כִּֽי־רַבֹּ֥ות אַנְחֹתַ֖י וְלִבִּ֥י דַוָּֽי׃ פ

< ಪ್ರಲಾಪಗಳು 1 >