< ಯಾಜಕಕಾಂಡ 23 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Szóla ismét az Úr Mózesnek, mondván:
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.
Szólj Izráel fiainak, és mondd meg nékik az Úrnak ünnepeit, a melyeken szent gyülekezésekre kell összegyülekeznetek. Ezek azok az én ünnepeim:
3 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
Hat napon át munkálkodjatok, a hetedik napon nyugodalomnak, szent gyülekezésnek szombatja van, semmi dolgot ne végezzetek: az Úrnak szombatja legyen az minden lakhelyeteken.
4 “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
Ezek az Úrnak ünnepei, szent gyülekezések napjai, a melyekre szabott idejökben kell összegyülekeznetek.
5 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
Az első hónapban, a hónapnak tizennegyedikén, estennen az Úrnak páskhája.
6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
E hónapnak tizenötödik napján pedig az Úr kovásztalan kenyerének ünnepe. Hét napig egyetek kovásztalan kenyeret.
7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
Az első napon szent gyülekezéstek legyen, semmi robota munkát ne végezzetek.
8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
Hét napon át pedig tűzáldozatot áldozzatok az Úrnak, és a hetedik napon szent gyülekezéstek is legyen: semmi robota munkát ne végezzetek.
9 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Szóla ismét az Úr Mózesnek, mondván:
10 ೧೦ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
Szólj Izráel fiainak és mondd meg nékik: Mikor bementek a földre, a melyet én adok néktek, és megaratjátok annak vetését: a ti aratástok zsengéjének első kévéjét vigyétek a papnak.
11 ೧೧ ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
Az pedig lóbálja meg a kévét az Úr előtt, hogy kedvesen fogadtassék érettetek; a szombat után való napon lóbálja azt meg a pap.
12 ೧೨ ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
A mely napon pedig meglóbáltatjátok a kévét, áldozzatok az Úrnak egy ép, esztendős bárányt egészen égőáldozatul.
13 ೧೩ ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
Ahhoz pedig ételáldozatul két tized efa lánglisztet, olajjal elegyítve; tűzáldozatul az Úrnak, kedves illatul; italáldozatul pedig egy hin bornak negyedrészét.
14 ೧೪ ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
Új kenyeret pedig és pergelt búzaszemeket és zsenge kalászokat ne egyetek mind a napig, a míg be nem viszitek a ti Isteneteknek áldozatját. Örök rendtartás ez nemzetségről nemzetségre minden lakóhelyeteken.
15 ೧೫ “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
Számláljatok azután a szombatra következő naptól, attól a naptól, a melyen beviszitek a meglóbálni való kévét, hét hetet, egészek legyenek azok.
16 ೧೬ ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
A hetedik hétre következő napig számláljatok ötven napot, és akkor járuljatok új ételáldozattal az Úrhoz.
17 ೧೭ ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
A ti lakóhelyeitekből hozzatok fel két meglóbálni való kenyeret; két tized efa lisztlángból legyenek azok, kovászszal sütve, zsengékül az Úrnak.
18 ೧೮ ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
A kenyérrel együtt pedig áldozzatok meg hét bárányt, épeket, esztendősöket, és egy tulkot, fiatal bikát, és két kost; egészen égőáldozatul legyenek ezek az Úrnak, étel- és italáldozatjokkal egybe; kedves illatú tűzáldozat ez az Úrnak.
19 ೧೯ ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
Készítsetek el egy kecskebakot is bűnért való áldozatul, és két bárányt, esztendősöket, hálaadó áldozatul.
20 ೨೦ ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
És lóbálja meg azokat a pap a zsengékből való kenyérrel az Úr előtt való lóbálással a két báránynyal egybe. Szentek legyenek ezek az Úrnak a pap számára.
21 ೨೧ ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
És gyülekezzetek egybe ugyanazon a napon; szent gyülekezéstek legyen néktek, semmi robota munkát ne végezzetek. Örök rendtartás ez minden lakóhelyeteken a ti nemzetségeitek szerint.
22 ೨೨ “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
Mikor pedig földetek termését learatjátok: ne arasd le egészen a meződnek széleit, és az elhullott gabonafejeket fel ne szedd; a szegénynek és jövevénynek hagyd azokat. Én vagyok az Úr, a ti Istenetek.
23 ೨೩ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Szóla ismét az Úr Mózesnek, mondván:
24 ೨೪ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
Szólj Izráel fiaihoz, mondván: A hetedik hónapban, a hónap első napján ünnepetek legyen néktek, emlékeztető kürtzengéssel, szent gyülekezéssel.
25 ೨೫ ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
Semmi robota munkát ne végezzetek, és tűzáldozattal áldozzatok az Úrnak.
26 ೨೬ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Szóla ismét az Úr Mózesnek, mondván:
27 ೨೭ “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
Ugyanennek a hetedik hónapnak tizedikén az engesztelés napja van: szent gyülekezéstek legyen néktek, és sanyargassátok meg magatokat, és tűzáldozattal áldozzatok az Úrnak.
28 ೨೮ ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
Semmi dolgot ne végezzetek azon a napon, mert engesztelésnek napja az, hogy engesztelés legyen érettetek az Úr előtt, a ti Istenetek előtt.
29 ೨೯ ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
Mert ha valaki nem sanyargatja meg magát ezen a napon, irtassék ki az ő népe közül.
30 ೩೦ ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
És ha valaki valami dolgot végez ezen a napon, elvesztem az ilyent az ő népe közül.
31 ೩೧ ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
Semmi dolgot ne végezzetek; örök rendtartás legyen ez nemzetségről nemzetségre minden lakhelyeteken.
32 ೩೨ ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.
Ünnepek ünnepe ez néktek, sanyargassátok meg azért magatokat. A hónap kilenczedikének estvéjén, egyik estvétől a másik estvéig ünnepeljétek a ti ünnepeteket.
33 ೩೩ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Szóla ismét az Úr Mózesnek, mondván:
34 ೩೪ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
Szólj Izráel fiainak, mondván: Ugyanennek a hetedik hónapnak tizenötödikén a sátorok ünnepe legyen az Úrnak hét napig.
35 ೩೫ ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.
Az első napon szent gyülekezés legyen, semmi robota munkát ne végezzetek.
36 ೩೬ ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
Hét napon áldozzatok az Úrnak tűzáldozatot, a nyolczadik napon pedig szent gyülekezéstek legyen és újra tűzáldozattal áldozzatok az Úrnak; berekesztő ünnep ez, semmi robota munkát ne végezzetek azon.
37 ೩೭ “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
Ezek az Úrnak ünnepei, a melyeken szent gyülekezésekre kell gyülekeznetek, hogy áldozzatok az Úrnak tűzáldozattal, egészen égőáldozattal, ételáldozattal, véres- és italáldozattal: minden napét a maga napján.
38 ೩೮ ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.
Az Úrnak szombatjain kivül, adományaitokon kivül, fogadásból és szabad akaratból való minden ajándékaitokon kivül a melyeket adni szoktatok az Úrnak,
39 ೩೯ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
Ugyancsak a hetedik hónapnak tizenötödik napján, a mikor a földnek termését betakarjátok, az Úrnak ünnepét ünnepeljétek hét napig: az első napon nyugodalom napja, és a nyolczadik napon is nyugodalom napja legyen.
40 ೪೦ ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
És vegyetek magatoknak az első napon szép fának gyümölcsét, pálmafa ágait, sűrű levelű fa lombját, és patak mellett való fűzgalyakat, és örvendezzetek az Úr előtt, a ti Istenetek előtt hét napig.
41 ೪೧ ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
Így ünnepeljétek meg azt az Úrnak ünnepét minden esztendőben hét napig. Örökkévaló rendtartás legyen ez a ti nemzetségeiteknél; a hetedik hónapban ünnepeljétek azt.
42 ೪೨ ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.
Sátorokban lakjatok hét napig, minden benszülött sátorokban lakjék Izráelben.
43 ೪೩ ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
Hogy megtudják a ti nemzetségeitek, hogy sátorokban lakattam Izráel fiait, a mikor kihoztam őket Égyiptom földéről. Én vagyok az Úr, a ti Istenetek.
44 ೪೪ ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.
És szóla Mózes Izráel fiainak az Úrnak ünnepei felől.

< ಯಾಜಕಕಾಂಡ 23 >