< ಯಾಜಕಕಾಂಡ 24 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
Gospod je spregovoril Mojzesu, rekoč:
2 “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
»Zapovej Izraelovim otrokom, da ti prinesejo čistega olja iz stolčenih oliv za svetlobo, da bi svetilke nenehno gorele.
3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
Zunaj zagrinjala pričevanja, v šotorskem svetišču skupnosti, bo Aron to nenehno ukazoval od večera do jutra pred Gospodom. To bo zakon na veke v vaših rodovih.
4 ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
Svetike bo nenehno oskrboval na čistem svečniku pred Gospodom.
5 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
Vzel boš fino moko in iz nje spekel dvanajst kolačev. Dve desetinki bosta v enem kolaču.
6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
Postavil jih boš v dve vrsti, šest v vrsto, na čisto mizo pred Gospodom.
7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
Nad vsako vrsto boš dal čisto kadilo, da bo ta lahko na kruhu za spomin, torej ognjena daritev Gospodu.
8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
Vsak šabat ga bo nenehno postavljal v vrsto pred Gospodom, vzetega od Izraelovih otrok z večno zavezo.
9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
To bo Aronovo in od njegovih sinov in to bodo jedli na svetem prostoru, kajti to mu je najsvetejše od daritev Gospodu, narejenih z ognjem, z večnim zakonom.«
10 ೧೦ ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
Sin Izraelke, katere oče je bil Egipčan, je odšel ven med Izraelove otroke in ta sin izraelske ženske in mož iz Izraela sta se skupaj prepirala v taboru.
11 ೧೧ ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
Sin Izraelke je izrekal bogokletje proti Gospodovemu imenu in preklinjal. Privedli so ga k Mojzesu. (In ime njegove matere je bilo Šelomíta, hči Dibríja, iz Danovega rodu.)
12 ೧೨ ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
Dali so ga pod stražo, da bi jim bil lahko pokazan Gospodov um.
13 ೧೩ ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Gospod je spregovoril Mojzesu, rekoč:
14 ೧೪ “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
»Privedite tistega, ki je klel zunaj tabora, in naj vsi, ki so ga slišali, položijo roke na njegovo glavo in naj ga vsa skupnost kamna.
15 ೧೫ ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
Izraelovim otrokom boš govoril, rekoč: ›Kdorkoli preklinja svojega Boga, bo nosil svoj greh.
16 ೧೬ ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
Kdor preklinja Gospodovo ime, bo zagotovo usmrčen in zagotovo ga bo vsa skupnost kamnala; tako tujca, kakor tistega, ki je rojen v deželi, ko preklinja Gospodovo ime, bo usmrčen.
17 ೧೭ “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
Kdor ubija kateregakoli človeka, bo zagotovo usmrčen.
18 ೧೮ ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
Kdor ubije žival, bo to poplačal; žival za žival.
19 ೧೯ ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
Če človek povzroči madež na svojem bližnjem; kakor je storil on, tako naj bo to storjeno njemu;
20 ೨೦ ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
zlom za zlom, oko za oko, zob za zob. Kakor je on na človeku povzročil pomanjkljivost, tako naj bo njemu ponovno storjeno.
21 ೨೧ ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
Kdor ubije žival, bo to povrnil, kdor pa ubije človeka, bo usmrčen.
22 ೨೨ ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.
Imeli boste eno vrsto postave, prav tako za tujca, kakor za nekoga iz svoje lastne dežele, kajti jaz sem Gospod, vaš Bog.‹«
23 ೨೩ ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
Mojzes je Izraelovim otrokom spregovoril, da naj tistega, ki je preklet, privedejo ven iz tabora in kamnajo s kamni. In Izraelovi otroci so storili tako, kakor je Gospod zapovedal Mojzesu.

< ಯಾಜಕಕಾಂಡ 24 >