< ಯಾಜಕಕಾಂಡ 3 >

1 “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
Аще же жертва спасения дар его Господу, аще убо от говяд е принесет, аще мужеск пол или женск, непорочен да принесет и пред Господа:
2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
и возложит руце свои на главу дара, и да заколет и пред Господем у дверий скинии свидения: и да возлиют сынове Аарони жерцы кровь на олтарь всесожжений окрест,
3 ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
и да принесут от жертвы спасения принос Господу, тук покрывающий утробу, и весь тук иже на утробе,
4 ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
и обе почки, и тук иже на них и иже на стегнах, и препонку, яже на печени, с почками отимет:
5 ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
и да вознесут я сынове Аарони жерцы, на олтарь во всесожжения на дрова сущая на огни, яже на олтари: принос воня благовония Господу.
6 “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
Аще же от овец дар его жертва спасения Господу, мужеск пол или женск, непорочен да принесет,
7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
аше агнца принесет дар свой, да приведет его пред Господа,
8 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
и да возложит руку на главу дара своего, и да заколет его у дверий скинии свидения: и да пролиют сынове Аарони жерцы кровь на олтарь окрест,
9 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
и да принесет от жертвы спасения принос Господу, тук и чресла чиста с лядвиями да отлучит и: и весь тук покрывающий утробу, и весь тук иже на утробе,
10 ೧೦ ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
и обе почки, и тук иже на них, иже на стегнах: и препонку, яже на печени, с почками отемь,
11 ೧೧ ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
да вознесет жрец на олтарь: воня благоухания, принос Господви.
12 ೧೨ “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
Аще же от козлов дар его Господу, да принесет пред Господа:
13 ೧೩ ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
и возложит руце на главу его, и да заколют е пред Господем у дверий скинии свидения: и да пролиют сынове Аарони жерцы кровь на олтарь около:
14 ೧೪ ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
и да вознесет от него принос Господу тук покрывающий утробу, и весь тук иже на утробе,
15 ೧೫ ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
и обе почки, и весь тук, иже на них, иже на стегнах, и препонку, яже на печени, с почками отлучит:
16 ೧೬ ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
и да вознесет жрец на олтарь, принос воня благовония Господу: весь тук Господу.
17 ೧೭ ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
Законное в веки в роды вашя, во всяком обитании вашем: всякаго тука и всякия крове да не ясте.

< ಯಾಜಕಕಾಂಡ 3 >