< ಯಾಜಕಕಾಂಡ 4 >

1 ಯೆಹೋವನು ಮೋಶೆಗೆ ಇಂತೆಂದನು,
וַיְדַבֵּר יְהוָה אֶל־מֹשֶׁה לֵּאמֹֽר׃
2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
דַּבֵּר אֶל־בְּנֵי יִשְׂרָאֵל לֵאמֹר נֶפֶשׁ כִּֽי־תֶחֱטָא בִשְׁגָגָה מִכֹּל מִצְוֺת יְהוָה אֲשֶׁר לֹא תֵעָשֶׂינָה וְעָשָׂה מֵאַחַת מֵהֵֽנָּה׃
3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
אִם הַכֹּהֵן הַמָּשִׁיחַ יֶחֱטָא לְאַשְׁמַת הָעָם וְהִקְרִיב עַל חַטָּאתוֹ אֲשֶׁר חָטָא פַּר בֶּן־בָּקָר תָּמִים לַיהוָה לְחַטָּֽאת׃
4 ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
וְהֵבִיא אֶת־הַפָּר אֶל־פֶּתַח אֹהֶל מוֹעֵד לִפְנֵי יְהוָה וְסָמַךְ אֶת־יָדוֹ עַל־רֹאשׁ הַפָּר וְשָׁחַט אֶת־הַפָּר לִפְנֵי יְהוָֽה׃
5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
וְלָקַח הַכֹּהֵן הַמָּשִׁיחַ מִדַּם הַפָּר וְהֵבִיא אֹתוֹ אֶל־אֹהֶל מוֹעֵֽד׃
6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
וְטָבַל הַכֹּהֵן אֶת־אֶצְבָּעוֹ בַּדָּם וְהִזָּה מִן־הַדָּם שֶׁבַע פְּעָמִים לִפְנֵי יְהוָה אֶת־פְּנֵי פָּרֹכֶת הַקֹּֽדֶשׁ׃
7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
וְנָתַן הַכֹּהֵן מִן־הַדָּם עַל־קַרְנוֹת מִזְבַּח קְטֹרֶת הַסַּמִּים לִפְנֵי יְהוָה אֲשֶׁר בְּאֹהֶל מוֹעֵד וְאֵת ׀ כָּל־דַּם הַפָּר יִשְׁפֹּךְ אֶל־יְסוֹד מִזְבַּח הָעֹלָה אֲשֶׁר־פֶּתַח אֹהֶל מוֹעֵֽד׃
8 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
וְאֶת־כָּל־חֵלֶב פַּר הַֽחַטָּאת יָרִים מִמֶּנּוּ אֶת־הַחֵלֶב הַֽמְכַסֶּה עַל־הַקֶּרֶב וְאֵת כָּל־הַחֵלֶב אֲשֶׁר עַל־הַקֶּֽרֶב׃
9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
וְאֵת שְׁתֵּי הַכְּלָיֹת וְאֶת־הַחֵלֶב אֲשֶׁר עֲלֵיהֶן אֲשֶׁר עַל־הַכְּסָלִים וְאֶת־הַיֹּתֶרֶת עַל־הַכָּבֵד עַל־הַכְּלָיוֹת יְסִירֶֽנָּה׃
10 ೧೦ ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
כַּאֲשֶׁר יוּרַם מִשּׁוֹר זֶבַח הַשְּׁלָמִים וְהִקְטִירָם הַכֹּהֵן עַל מִזְבַּח הָעֹלָֽה׃
11 ೧೧ ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
וְאֶת־עוֹר הַפָּר וְאֶת־כָּל־בְּשָׂרוֹ עַל־רֹאשׁוֹ וְעַל־כְּרָעָיו וְקִרְבּוֹ וּפִרְשֽׁוֹ׃
12 ೧೨ ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
וְהוֹצִיא אֶת־כָּל־הַפָּר אֶל־מִחוּץ לַֽמַּחֲנֶה אֶל־מָקוֹם טָהוֹר אֶל־שֶׁפֶךְ הַדֶּשֶׁן וְשָׂרַף אֹתוֹ עַל־עֵצִים בָּאֵשׁ עַל־שֶׁפֶךְ הַדֶּשֶׁן יִשָּׂרֵֽף׃
13 ೧೩ “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
וְאִם כָּל־עֲדַת יִשְׂרָאֵל יִשְׁגּוּ וְנֶעְלַם דָּבָר מֵעֵינֵי הַקָּהָל וְעָשׂוּ אַחַת מִכָּל־מִצְוֺת יְהוָה אֲשֶׁר לֹא־תֵעָשֶׂינָה וְאָשֵֽׁמוּ׃
14 ೧೪ ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
וְנֽוֹדְעָה הַֽחַטָּאת אֲשֶׁר חָטְאוּ עָלֶיהָ וְהִקְרִיבוּ הַקָּהָל פַּר בֶּן־בָּקָר לְחַטָּאת וְהֵבִיאוּ אֹתוֹ לִפְנֵי אֹהֶל מוֹעֵֽד׃
15 ೧೫ ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
וְסָמְכוּ זִקְנֵי הָעֵדָה אֶת־יְדֵיהֶם עַל־רֹאשׁ הַפָּר לִפְנֵי יְהוָה וְשָׁחַט אֶת־הַפָּר לִפְנֵי יְהוָֽה׃
16 ೧೬ ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
וְהֵבִיא הַכֹּהֵן הַמָּשִׁיחַ מִדַּם הַפָּר אֶל־אֹהֶל מוֹעֵֽד׃
17 ೧೭ ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
וְטָבַל הַכֹּהֵן אֶצְבָּעוֹ מִן־הַדָּם וְהִזָּה שֶׁבַע פְּעָמִים לִפְנֵי יְהוָה אֵת פְּנֵי הַפָּרֹֽכֶת׃
18 ೧೮ ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
וּמִן־הַדָּם יִתֵּן ׀ עַל־קַרְנֹת הַמִּזְבֵּחַ אֲשֶׁר לִפְנֵי יְהוָה אֲשֶׁר בְּאֹהֶל מוֹעֵד וְאֵת כָּל־הַדָּם יִשְׁפֹּךְ אֶל־יְסוֹד מִזְבַּח הָעֹלָה אֲשֶׁר־פֶּתַח אֹהֶל מוֹעֵֽד׃
19 ೧೯ ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
וְאֵת כָּל־חֶלְבּוֹ יָרִים מִמֶּנּוּ וְהִקְטִיר הַמִּזְבֵּֽחָה׃
20 ೨೦ ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
וְעָשָׂה לַפָּר כַּאֲשֶׁר עָשָׂה לְפַר הַֽחַטָּאת כֵּן יַעֲשֶׂה־לּוֹ וְכִפֶּר עֲלֵהֶם הַכֹּהֵן וְנִסְלַח לָהֶֽם׃
21 ೨೧ ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
וְהוֹצִיא אֶת־הַפָּר אֶל־מִחוּץ לַֽמַּחֲנֶה וְשָׂרַף אֹתוֹ כַּאֲשֶׁר שָׂרַף אֵת הַפָּר הָרִאשׁוֹן חַטַּאת הַקָּהָל הֽוּא׃
22 ೨೨ “‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
אֲשֶׁר נָשִׂיא יֶֽחֱטָא וְעָשָׂה אַחַת מִכָּל־מִצְוֺת יְהוָה אֱלֹהָיו אֲשֶׁר לֹא־תֵעָשֶׂינָה בִּשְׁגָגָה וְאָשֵֽׁם׃
23 ೨೩ ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
אֽוֹ־הוֹדַע אֵלָיו חַטָּאתוֹ אֲשֶׁר חָטָא בָּהּ וְהֵבִיא אֶת־קָרְבָּנוֹ שְׂעִיר עִזִּים זָכָר תָּמִֽים׃
24 ೨೪ ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
וְסָמַךְ יָדוֹ עַל־רֹאשׁ הַשָּׂעִיר וְשָׁחַט אֹתוֹ בִּמְקוֹם אֲשֶׁר־יִשְׁחַט אֶת־הָעֹלָה לִפְנֵי יְהוָה חַטָּאת הֽוּא׃
25 ೨೫ ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
וְלָקַח הַכֹּהֵן מִדַּם הַֽחַטָּאת בְּאֶצְבָּעוֹ וְנָתַן עַל־קַרְנֹת מִזְבַּח הָעֹלָה וְאֶת־דָּמוֹ יִשְׁפֹּךְ אֶל־יְסוֹד מִזְבַּח הָעֹלָֽה׃
26 ೨೬ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
וְאֶת־כָּל־חֶלְבּוֹ יַקְטִיר הַמִּזְבֵּחָה כְּחֵלֶב זֶבַח הַשְּׁלָמִים וְכִפֶּר עָלָיו הַכֹּהֵן מֵחַטָּאתוֹ וְנִסְלַח לֽוֹ׃
27 ೨೭ “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
וְאִם־נֶפֶשׁ אַחַת תֶּחֱטָא בִשְׁגָגָה מֵעַם הָאָרֶץ בַּעֲשֹׂתָהּ אַחַת מִמִּצְוֺת יְהוָה אֲשֶׁר לֹא־תֵעָשֶׂינָה וְאָשֵֽׁם׃
28 ೨೮ ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
אוֹ הוֹדַע אֵלָיו חַטָּאתוֹ אֲשֶׁר חָטָא וְהֵבִיא קָרְבָּנוֹ שְׂעִירַת עִזִּים תְּמִימָה נְקֵבָה עַל־חַטָּאתוֹ אֲשֶׁר חָטָֽא׃
29 ೨೯ ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
וְסָמַךְ אֶת־יָדוֹ עַל רֹאשׁ הַֽחַטָּאת וְשָׁחַט אֶת־הַחַטָּאת בִּמְקוֹם הָעֹלָֽה׃
30 ೩೦ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
וְלָקַח הַכֹּהֵן מִדָּמָהּ בְּאֶצְבָּעוֹ וְנָתַן עַל־קַרְנֹת מִזְבַּח הָעֹלָה וְאֶת־כָּל־דָּמָהּ יִשְׁפֹּךְ אֶל־יְסוֹד הַמִּזְבֵּֽחַ׃
31 ೩೧ ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
וְאֶת־כָּל־חֶלְבָּהּ יָסִיר כַּאֲשֶׁר הוּסַר חֵלֶב מֵעַל זֶבַח הַשְּׁלָמִים וְהִקְטִיר הַכֹּהֵן הַמִּזְבֵּחָה לְרֵיחַ נִיחֹחַ לַיהוָה וְכִפֶּר עָלָיו הַכֹּהֵן וְנִסְלַח לֽוֹ׃
32 ೩೨ “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
וְאִם־כֶּבֶשׂ יָבִיא קָרְבָּנוֹ לְחַטָּאת נְקֵבָה תְמִימָה יְבִיאֶֽנָּה׃
33 ೩೩ ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
וְסָמַךְ אֶת־יָדוֹ עַל רֹאשׁ הַֽחַטָּאת וְשָׁחַט אֹתָהּ לְחַטָּאת בִּמְקוֹם אֲשֶׁר יִשְׁחַט אֶת־הָעֹלָֽה׃
34 ೩೪ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
וְלָקַח הַכֹּהֵן מִדַּם הַֽחַטָּאת בְּאֶצְבָּעוֹ וְנָתַן עַל־קַרְנֹת מִזְבַּח הָעֹלָה וְאֶת־כָּל־דָּמָהּ יִשְׁפֹּךְ אֶל־יְסוֹד הַמִּזְבֵּֽחַ׃
35 ೩೫ ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
וְאֶת־כָּל־חֶלְבָּה יָסִיר כַּאֲשֶׁר יוּסַר חֵֽלֶב־הַכֶּשֶׂב מִזֶּבַח הַשְּׁלָמִים וְהִקְטִיר הַכֹּהֵן אֹתָם הַמִּזְבֵּחָה עַל אִשֵּׁי יְהוָה וְכִפֶּר עָלָיו הַכֹּהֵן עַל־חַטָּאתוֹ אֲשֶׁר־חָטָא וְנִסְלַח לֽוֹ׃

< ಯಾಜಕಕಾಂಡ 4 >