< ಲೂಕನು 1 >

1 ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
Mutane da yawa sun ɗau niyyar rubuta labarin abubuwan da aka cika a cikinmu,
2 ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,
kamar yadda muka karɓe su daga waɗanda tun farko shaidu ne da kuma masu hidimar bishara.
3 ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.
Saboda haka, da yake ni da kaina na binciko kome a hankali daga farko, na ga ya yi kyau in rubuta maka labarin dalla-dalla, ya mafifici Tiyofilus,
4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
don ka san tabbacin abubuwan da aka koyar da kai.
5 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
A lokacin da Hiridus ne yake sarautar Yahudiya, an yi wani firist mai suna Zakariya, na sashin firistoci gidan Abiya. Matarsa Elizabet ma’yar zuriyar Haruna ce.
6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
Dukansu biyu kuwa masu adalci ne a gaban Allah, suna kuma bin umarnan Ubangiji da farillansa duka da halin rashin zargi.
7 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.
Sai dai ba su da’ya’ya, domin Elizabet bakararriya ce; kuma dukansu biyu sun tsufa.
8 ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.
Wata rana da lokacin aikin firistoci na sashen Zakariya na yin hidima ya kewayo, yana kuma cikin hidimarsa ta firist a gaban Allah,
9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
sai aka zaɓe shi ta wurin ƙuri’a, bisa ga al’adar aikin firist, yă shiga haikalin Ubangiji yă ƙone turare.
10 ೧೦ ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
Da lokacin ƙone turare ya yi, duk taron masu sujada suna a waje suna addu’a.
11 ೧೧ ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.
Sai mala’ikan Ubangiji ya bayyana gare shi, tsaye a dama da bagaden turare.
12 ೧೨ ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
Da Zakariya ya gan shi sai ya firgita, tsoro kuma ya kama shi.
13 ೧೩ ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
Amma mala’ikan ya ce masa, “Kada ka ji tsoro, Zakariya; an ji addu’arka. Matarka Elizabet za tă haifa maka ɗa, za ka kuma ba shi suna Yohanna.
14 ೧೪ ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.
Zai zama abin murna da farin ciki a gare ka, mutane da yawa kuwa za su yi murna don haihuwarsa,
15 ೧೫ ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
gama zai zama mai girma a gaban Ubangiji. Ba kuwa zai taɓa shan ruwan inabi ko wani abu mai sa maye ba. Zai cika da Ruhu Mai Tsarki tun haihuwa.
16 ೧೬ ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.
Shi ne zai juye mutanen Isra’ila da yawa zuwa wurin Ubangiji Allahnsu.
17 ೧೭ ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
Zai sha gaban Ubangiji, a ruhu da kuma iko irin na Iliya, domin yă juye zukatan iyaye ga’ya’yansu, marasa biyayya kuma ga zama masu biyayya don yă kintsa mutane su zama shiryayyu domin Ubangiji.”
18 ೧೮ ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
Sai Zakariya ya tambayi mala’ikan ya ce, “Yaya zan tabbatar da wannan? Ga ni tsoho, matana kuma ta kwana biyu.”
19 ೧೯ ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
Mala’ikan ya ce, “Ni ne Jibra’ilu. Ina tsaya a gaban Allah, an kuma aiko ni in yi maka magana, in kuma faɗa maka wannan labari mai daɗi.
20 ೨೦ ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
Yanzu za ka zama bebe, ba za ka ƙara iya magana ba sai ranar da wannan magana ta cika, saboda ba ka gaskata da kalmomina waɗanda za su zama gaskiya a daidai lokacinsu ba.”
21 ೨೧ ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Ana cikin haka, mutane suna jiran Zakariya, suna kuma mamaki me ya sa ya daɗe haka a cikin haikali.
22 ೨೨ ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
Da ya fito, bai iya yin musu magana ba. Sai suka gane, ya ga wahayi ne a haikali, domin ya dinga yin musu alamu, amma ya kāsa yin magana.
23 ೨೩ ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು.
Da lokacin hidimarsa ya cika, sai ya koma gida.
24 ೨೪ ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.
Bayan wannan, matarsa Elizabet ta yi ciki, ta kuma riƙa ɓuya har wata biyar.
25 ೨೫ “ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
Sai ta ce, “Ubangiji ne ya yi mini wannan. A waɗannan kwanaki ya nuna tagomashinsa ya kuma kawar mini da kunya a cikin mutane.”
26 ೨೬ ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;
A wata na shida, sai Allah ya aiki mala’ika Jibra’ilu zuwa Nazaret, wani gari a Galili,
27 ೨೭ ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
gun wata budurwar da aka yi alkawarin aurenta ga wani mutum mai suna Yusuf daga zuriyar Dawuda. Sunan budurwar Maryamu.
28 ೨೮ ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.
Mala’ikan ya je wurinta ya ce, “A gaishe ki, ya ke da kika sami tagomashi ƙwarai! Ubangiji yana tare da ke.”
29 ೨೯ ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.
Maryamu ta damu ƙwarai da kalmominsa, tana tunani wace irin gaisuwa ce haka?
30 ೩೦ ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.
Amma mala’ikan ya ce mata, “Kada ki ji tsoro, Maryamu, kin sami tagomashi a wurin Allah.
31 ೩೧ ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
Ga shi za ki yi ciki ki kuma haifi ɗa, za ki kuma ba shi suna Yesu.
32 ೩೨ ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
Zai zama mai girma, za a kuma kira shi Ɗan Maɗaukaki. Ubangiji Allah zai ba shi gadon sarautar kakansa Dawuda,
33 ೩೩ ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. (aiōn g165)
zai yi mulkin gidan Yaƙub har abada, mulkinsa kuma ba zai taɓa ƙare ba.” (aiōn g165)
34 ೩೪ ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.
Maryamu ta tambayi mala’ikan ta ce, “Yaya wannan zai yiwu, da yake ni budurwa ce?”
35 ೩೫ ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
Mala’ikan ya amsa ya ce, “Ruhu Mai Tsarki zai sauko miki, ikon Maɗaukaki kuma zai rufe ke. Saboda haka, Mai Tsarkin nan da za a haifa, za a kira shi Ɗan Allah.
36 ೩೬ ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
’Yar’uwarki Elizabet ma za tă haifi ɗa a tsufanta, ita da aka ce bakararriya, ga shi tana a watanta na shida.
37 ೩೭ ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.
Gama ba abin da zai gagari Allah.”
38 ೩೮ ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Maryamu ta amsa ta ce, “To, ni baiwar Allah ce, bari yă zama mini kamar yadda ka faɗa.” Sai mala’ikan ya tafi abinsa.
39 ೩೯ ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.
A lokacin sai Maryamu ta shirya ta gaggauta zuwa wani gari a ƙasar tudu ta Yahudiya,
40 ೪೦ ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.
inda ta shiga gidan Zakariya ta kuma gai da Elizabet.
41 ೪೧ ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.
Da Elizabet ta ji gaisuwar Maryamu, sai jaririn da yake a cikinta ya yi motsi. Elizabet kuma ta cika da Ruhu Mai Tsarki.
42 ೪೨ ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.
Sai ta ɗaga murya da ƙarfi ta ce, “Ke mai albarka ce a cikin mata. Mai albarka ne kuma ɗan da za ki haifa!
43 ೪೩ ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?
Me ya sa na sami wannan tagomashi har da mahaifiyar Ubangijina za tă zo wurina?
44 ೪೪ ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.
Da jin gaisuwarki, sai jaririn da yake cikina ya yi motsi don murna.
45 ೪೫ ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
Mai albarka ce wadda ta gaskata cewa abin da Ubangiji ya faɗa mata zai cika!”
46 ೪೬ ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
Sai Maryamu ta ce, “Raina yana ɗaukaka Ubangiji
47 ೪೭ ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.
ruhuna kuma yana farin ciki da Allah Mai Cetona,
48 ೪೮ ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,
gama ya lura da ƙasƙancin baiwarsa. Daga yanzu nan gaba dukan zamanai za su ce da ni mai albarka,
49 ೪೯ ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.
gama Mai Iko Duka ya yi mini manyan abubuwa, sunansa labudda Mai Tsarki ne.
50 ೫೦ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.
Jinƙansa ya kai ga masu tsoronsa, daga zamani zuwa zamani.
51 ೫೧ ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.
Ya aikata manyan ayyuka da hannunsa; ya watsar da waɗanda suke masu girman kai a zurfin tunaninsu.
52 ೫೨ ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.
Ya saukar da masu mulki daga gadajen sarautarsu amma ya ɗaukaka ƙasƙantattu.
53 ೫೩ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.
Ya ƙosar da masu yunwa da kyawawan abubuwa amma ya sallami mawadata hannu wofi.
54 ೫೪ ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. (aiōn g165)
Ya taimaki bawansa Isra’ila, yana tunawa yă nuna jinƙai
55 ೫೫
ga Ibrahim da zuriyarsa har abada, kamar yadda ya faɗa wa kakanninmu.” (aiōn g165)
56 ೫೬ ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
Maryamu ta zauna da Elizabet kusan wata uku sa’an nan ta koma gida.
57 ೫೭ ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.
Sa’ad da kwanaki suka yi don Elizabet ta haihu, sai ta haifi ɗa.
58 ೫೮ ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
Maƙwabtanta da’yan’uwanta suka ji cewa Ubangiji ya nuna mata jinƙai mai yawa, suka kuma taya ta farin ciki.
59 ೫೯ ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
A rana ta takwas, sai suka zo don a yi wa yaron kaciya, dā za su sa masa sunan mahaifinsa Zakariya ne,
60 ೬೦ ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,
amma mahaifiyar yaron ta ce, “A’a! Za a ce da shi Yohanna.”
61 ೬೧ ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.
Sai suka ce mata, “Ba wani a cikin danginku mai wannan suna.”
62 ೬೨ ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.
Sai suka yi alamu wa mahaifinsa, don su san sunan da zai su a kira yaron.
63 ೬೩ ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
Ya yi alama a kawo masa allo, a gaban kowa sai ya rubuta, “Sunansa Yohanna.” Dukan mutane kuwa suka yi mamaki.
64 ೬೪ ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.
Nan da nan bakinsa ya buɗe harshensa kuma ya saku, sai ya fara magana yana yabon Allah.
65 ೬೫ ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.
Maƙwabta duk suka cika da tsoro, mutane kuwa suka yi ta yin magana game da dukan waɗannan abubuwa a ko’ina a cikin ƙasar tudu ta Yahudiya.
66 ೬೬ ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
Duk waɗanda suka ji wannan kuwa sun yi mamaki suna cewa, “To, me yaron nan zai zama?” Gama hannun Ubangiji yana tare da shi.
67 ೬೭ ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,
Mahaifinsa Zakariya ya cika da Ruhu Mai Tsarki sai ya yi annabci ya ce,
68 ೬೮ “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;
“Yabo ya tabbata ga Ubangiji, Allah na Isra’ila, domin ya zo ya kuma fanshe mutanensa.
69 ೬೯ ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
Ya tā mana ƙahon ceto a gidan bawansa Dawuda
70 ೭೦ ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, (aiōn g165)
(yadda ya yi magana tun tuni ta wurin annabawansa masu tsarki), (aiōn g165)
71 ೭೧ ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.
cewa zai cece mu daga abokan gābanmu daga kuma hannun dukan waɗanda suke ƙinmu
72 ೭೨ ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
don yă nuna jinƙai ga kakanninmu, yă kuma tuna da alkawarinsa mai tsarki,
73 ೭೩
rantsuwar da ya yi wa mahaifinmu Ibrahim,
74 ೭೪ ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
don yă kuɓutar da mu daga hannun abokan gābanmu, yă kuma sa mu iya yin masa hidima babu tsoro,
75 ೭೫
cikin tsarki da adalci a gabansa dukan kwanakinmu.
76 ೭೬ ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,
“Kai kuma, ɗana, za a ce da kai annabin Maɗaukaki; gama za ka sha gaban Ubangiji don ka shirya masa hanya,
77 ೭೭ ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,
don ka sanar da mutanensa ceto, ta wurin gafarar zunubansu,
78 ೭೮
saboda jinƙai na Allahnmu mai ƙauna, hasken nan na ceto zai ɓullo mana daga sama,
79 ೭೯ ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”
don yă haskaka a kan waɗanda suke zama cikin duhu, da kuma cikin inuwar mutuwa, don yă bi da ƙafafunmu a hanyar salama.”
80 ೮೦ ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
Yaron kuwa ya yi girma ya kuma ƙarfafa a ruhu; ya zauna a hamada sai lokacin da ya fito a fili ga mutanen Isra’ila.

< ಲೂಕನು 1 >