< ಲೂಕನು 10 >

1 ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
Now after these things the Lord appointed seventy others also, and sent them two and two before his face into every city and place where he himself was about to come.
2 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
And he said to them, The harvest indeed [is] great, but the workmen few; supplicate therefore the Lord of the harvest that he may send out workmen into his harvest.
3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
Go: behold I send you forth as lambs in the midst of wolves.
4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
Carry neither purse nor scrip nor sandals, and salute no one on the way.
5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
And into whatsoever house ye enter, first say, Peace to this house.
6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
And if a son of peace be there, your peace shall rest upon it; but if not it shall turn to you again.
7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
And in the same house abide, eating and drinking such things as they have; for the workman is worthy of his hire. Remove not from house to house.
8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
And into whatsoever city ye may enter and they receive you, eat what is set before you,
9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
and heal the sick in it, and say to them, The kingdom of God is come nigh to you.
10 ೧೦ ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
But into whatsoever city ye may have entered and they do not receive you, go out into its streets and say,
11 ೧೧ ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
Even the dust of your city, which cleaves to us on the feet, do we shake off against you; but know this, that the kingdom of God is come nigh.
12 ೧೨ ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
I say to you that it shall be more tolerable for Sodom in that day than for that city.
13 ೧೩ ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
Woe to thee, Chorazin! woe to thee, Bethsaida! for if the works of power which have taken place in you had taken place in Tyre and Sidon, they had long ago repented, sitting in sackcloth and ashes.
14 ೧೪ ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
But it shall be more tolerable for Tyre and Sidon in the judgment than for you.
15 ೧೫ ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs g86)
And thou, Capernaum, who hast been raised up to heaven, shalt be brought down even to hades. (Hadēs g86)
16 ೧೬ ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
He that hears you hears me; and he that rejects you rejects me; and he that rejects me rejects him that sent me.
17 ೧೭ ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
And the seventy returned with joy, saying, Lord, even the demons are subject to us through thy name.
18 ೧೮ ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
And he said to them, I beheld Satan as lightning falling out of heaven.
19 ೧೯ ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Behold, I give you the power of treading upon serpents and scorpions and over all the power of the enemy, and nothing shall in anywise injure you.
20 ೨೦ ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
Yet in this rejoice not, that the spirits are subjected to you, but rejoice that your names are written in the heavens.
21 ೨೧ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
In the same hour Jesus rejoiced in spirit and said, I praise thee, Father, Lord of the heaven and of the earth, that thou hast hid these things from wise and prudent, and hast revealed them to babes: yea, Father, for thus has it been well-pleasing in thy sight.
22 ೨೨ ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
All things have been delivered to me by my Father, and no one knows who the Son is but the Father, and who the Father is but the Son, and he to whomsoever the Son is pleased to reveal [him].
23 ೨೩ ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
And having turned to the disciples privately he said, Blessed are the eyes which see the things that ye see.
24 ೨೪ ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
For I say to you that many prophets and kings have desired to see the things which ye behold, and did not see [them]; and to hear the things which ye hear, and did not hear [them].
25 ೨೫ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios g166)
And behold, a certain lawyer stood up tempting him, and saying, Teacher, having done what, shall I inherit life eternal? (aiōnios g166)
26 ೨೬ ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
And he said to him, What is written in the law? how readest thou?
27 ೨೭ ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
But he answering said, Thou shalt love the Lord thy God with all thy heart, and with all thy soul, and with all thy strength, and with all thine understanding; and thy neighbour as thyself.
28 ೨೮ ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
And he said to him, Thou hast answered right: this do and thou shalt live.
29 ೨೯ ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
But he, desirous of justifying himself, said to Jesus, And who is my neighbour?
30 ೩೦ ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
And Jesus replying said, A certain man descended from Jerusalem to Jericho and fell into [the hands of] robbers, who also, having stripped him and inflicted wounds, went away leaving him in a half-dead state.
31 ೩೧ ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
And a certain priest happened to go down that way, and seeing him, passed on on the opposite side;
32 ೩೨ ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
and in like manner also a Levite, being at the spot, came and looked [at him] and passed on on the opposite side.
33 ೩೩ ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
But a certain Samaritan journeying came to him, and seeing [him], was moved with compassion,
34 ೩೪ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
and came up [to him] and bound up his wounds, pouring in oil and wine; and having put him on his own beast, took him to [the] inn and took care of him.
35 ೩೫ ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
And on the morrow [as he left], taking out two denarii he gave them to the innkeeper, and said to him, Take care of him, and whatsoever thou shalt expend more, I will render to thee on my coming back.
36 ೩೬ ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
Which [now] of these three seems to thee to have been neighbour of him who fell into [the hands of] the robbers?
37 ೩೭ ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
And he said, He that shewed him mercy. And Jesus said to him, Go, and do thou likewise.
38 ೩೮ ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
And it came to pass as they went that he entered into a certain village; and a certain woman, Martha by name, received him into her house.
39 ೩೯ ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
And she had a sister called Mary, who also, having sat down at the feet of Jesus was listening to his word.
40 ೪೦ ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
Now Martha was distracted with much serving, and coming up she said, Lord, dost thou not care that my sister has left me to serve alone? Speak to her therefore that she may help me.
41 ೪೧ ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
But Jesus answering said to her, Martha, Martha, thou art careful and troubled about many things;
42 ೪೨ ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.
but there is need of one, and Mary has chosen the good part, the which shall not be taken from her.

< ಲೂಕನು 10 >