< ಲೂಕನು 14 >

1 ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
In zgodí se, ko vnide v hišo enega od starešin Farizejskih v soboto kruh jest, pa so oni na-nj pazili.
2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ,
In glej, neki človek vodeničen je bil pred njim.
3 “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
In odgovarjajoč Jezus, reče učenikom postave in Farizejem, govoreč: Ali se sme v soboto zdraviti?
4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
Oni pa umolknejo. In prijemši ga, uzdravi ga in odpustí.
5 “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
In odgovarjajoč jim, reče: Komu od vas bo padel osel ali vol v vodnjak in ga ne bo izvlekel na sobotni dan?
6 ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
In niso mu mogli odgovoriti na to.
7 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
Pravil je pa povabljenim priliko, opazivši, kako izbirajo prve prostore, govoreč jim:
8 ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು
Kedar te kdo povabi na svatovščino, ne sédaj na prve prostore, da ne bi bil med tistimi, kteri so povabljeni od njega, kdo pošteniji od tebe,
9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
In ne pride ta, kteri je tebe in njega povabil, in ti ne reče: Daj temu prostor! in ne boš tedaj s sramoto sédel na zadnji prostor.
10 ೧೦ ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
Nego kedar si povabljen in prideš, sédi na zadnji prostor, da ti ta, kteri te je povabil, kedar pride, poreče: Prijatelj, pomakni se više! tedaj ti bo čast pred tistimi, kteri sedé s teboj.
11 ೧೧ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Kajti vsak, kdor se povišuje, ponižal se bo; a kdor se ponižuje, povišal se bo.
12 ೧೨ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.
Pravil je pa tudi temu, kteri ga je bil povabil: Kedar napraviš obed ali pojedinjo, ne vabi prijateljev svojih, ne bratov svojih, ne sorodnikov svojih, ne sosedov bogatih: da te ne bi tudi oni povabili, in ti se ne bi vrnilo.
13 ೧೩ ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
Nego, kedar napraviš gostijo, povabi siromake, polomljene, hrome, slepce:
14 ೧೪ ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
In blagor ti, da ti nimajo s čim povrniti! povrnilo ti se bo namreč o vstajanji pravičnih.
15 ೧೫ ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
Slišavši pa to nekdo od téh, kteri so ž njim sedeli za mizo, reče mu: Blagor mu, kdor bo v kraljestvu Božjem jedel kruh!
16 ೧೬ ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
On mu pa reče: Neki človek je napravil pojedinjo; in povabil jih je veliko.
17 ೧೭ ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
In poslal je hlapca svojega v čas pojedinje, naj reče povabljencem: Pridite, ker je uže vse pripravljeno!
18 ೧೮ ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
In začnó se vsi h krati izgovarjati. Prvi mu reče: Njivo sem kupil, in silno mi je treba, da izidem in jo ogledam, prosim te, izgovori me.
19 ೧೯ ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
A drugi reč: Pet jarmov volov sem kupil, in grem jih izkušat; prosim te, izgovóri me.
20 ೨೦ ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
Zopet drugi pa: Oženil sem se, in zato ne morem priti.
21 ೨೧ ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
In ko ta hlapec pride, sporočí to gospodarju svojemu. Tedaj se gospodar razjezí, in reče hlapcu svojemu: Izidi naglo na razpotja in ulice mestne, in pripelji sêm siromake in polomljene in hrome in slepce.
22 ೨೨ ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.
In hlapec reče: Gospod, zgodilo se je, kakor si ukazal, in še je prostora.
23 ೨೩ ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
Pa reče gospodar hlapcu: Pojdi na pota in med ograje, in prinudi, naj vnidejo, da se napolni hiša moja;
24 ೨೪ ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
Kajti pravim vam, da ne bo nobeden onih móž, kteri so bili povabljeni, okusil pojedinje moje.
25 ೨೫ ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
Shajalo se je pa veliko ljudstva; in obrnivši se, reče jim;
26 ೨೬ “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
Če pride kdo k meni, pa ne sovraži očeta svojega in matere, in žene in otrók, in bratov in sester, in tudi lastne duše svoje, ne more moj učenec biti.
27 ೨೭ ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
In kdor ne zadene križa svojega, in gre za menoj, ne more moj učenec biti.
28 ೨೮ ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
Kdo namreč izmed vas, kedar hoče stolp zidati, ne bo proprej sédel in preračunil stroškov, če ima pač, da ga bo dozidal?
29 ೨೯ ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,
Da mu ne bi, ko bi postavil temelj, pa ne bi mogel dozidati, vsi, kteri bi to videli, jeli posmehovati se,
30 ೩೦ ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
Govoreč: Ta človek je jel zidati, pa ni mogel dozidati!
31 ೩೧ ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
Ali kteri kralj, kedar se gre z drugim kraljem vojskovat, ne bo sédel, in se poprej posvetoval, če se bo pač mogel z desetémi tisočmi srečati s tém, kteri gre z dvajsetémi tisočmi nad-nj?
32 ೩೨ ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
In če ne, poslal bo, dokler je še ta daleč, poslance, ter bo prosil mirú.
33 ೩೩ ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
Tako torej vsak izmed vas, kdor se ne odreče imenja svojega, ne more moj učenec biti.
34 ೩೪ “ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
Dobra je sol; če pa sol znorí, s čim se bo osolila?
35 ೩೫ ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
Ne za v zemljo ne za v gnoj ni dobra; mečejo jo proč. Kdor ima ušesa, da sliši, naj sliši!

< ಲೂಕನು 14 >