< ಲೂಕನು 16 >

1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
Pravil pa je tudi učencem svojim: Bil je en človek bogat, kteri je imel pristavnika; in tega so bili ovadili pri njem, da mu razsiplje imenje.
2 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
In poklicavši ga, reče mu: Kaj to slišim za te? Daj račun od gospodarstva svojega, ker ne moreš dalje gospodariti.
3 ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
A pristavnik reče sam s seboj: Kaj bom storil, ko mi gospodar moj odjemlje gospodarstvo? Kopati ne morem, prositi me je sram.
4 ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
Vém, kaj bom storil, da me bodo, kedar bom odstavljen gospodarstva, sprejeli v hiše svoje.
5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,
In poklicavši vsakega posameznega od dolžnikov gospodarja svojega, reče prvemu: Koliko si dolžen gospodarju mojemu?
6 ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
On pa reče: Sto mer olja. In reče mu: Vzemi svojo pismo, pa sedí hitro, in napiši petdeset.
7 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
Po tem reče drugemu: A ti koliko si dolžen? On pa reče: Sto korcev pšenice. In velí mu: Vzemi svoje pismo, in napiši osemdeset.
8 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn g165)
In gospodar pohvali krivičnega hlapca, da je pametno storil. Kajti sinovi tega sveta so pametniji od sinov svetlobe v svojem rodu. (aiōn g165)
9 “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios g166)
Tudi jaz vam pravim: Naredite si prijateljev s krivičnim bogastvom, da vas, kedar ubožate, sprejmó v večna stanovališča. (aiōnios g166)
10 ೧೦ ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
Kdor je v najmanjem zvest, zvest je tudi v velikem; in kdor je v najmanjem krivičen, krivičen je tudi v velikem.
11 ೧೧ ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
Če torej v krivičnem bogastvu niste bili zvesti, kdo vam bo zaupal pravično?
12 ೧೨ ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
In če v tujem niste bili zvesti, kdo vam bo dal, kar je vaše?
13 ೧೩ ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
Noben hlapec ne more dvema gospodoma služiti: ali bo enega sovražil, in drugega ljubil; ali se bo enega držal, in drugega bo zaničeval. Ne morete Bogu služiti in mamonu.
14 ೧೪ ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
Poslušali so pa vse to tudi Farizeji, kteri so srebro ljubili, ter so ga zasmehovali.
15 ೧೫ ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
Pa jim reče: Vi ste tisti, kteri se delate pravične pred ljudmí; ali Bog pozná srca vaša: kajti kar je pri ljudéh visoko, gnjusoba je pred Bogom.
16 ೧೬ “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
Zakon in preroki so do Janeza; odtlej se oznanjuje kraljestvo Božje, in vsak s silo va-nj tišči.
17 ೧೭ ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
Laže je pa nebu in zemlji prejti, nego enej pičici iz zakona izpasti.
18 ೧೮ “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Vsak, kdor pustí ženo svojo in se oženi z drugo, prešestvuje; in vsak, kdor popuščeno od moža vzeme, prešestvuje.
19 ೧೯ “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
Bil je pa neki človek bogat, in oblačil se je v škrlat in tančico, in razveseljeval se je vsak dan sijajno.
20 ೨೦ ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.
Bil je pa neki ubožec po imenu Lazar, kteri jo ležal pred vratmi njegovimi, gnôjen,
21 ೨೧ ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
In hrepeneč nasititi se z drobtinami, ktere so padale z mize bogatina; ali tudi psi so dohajali, ter so lizali gnoj njegov
22 ೨೨ ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Zgodí se pa, da ubožec umrè, in odnesó ga angelji na naročje Abrahamovo; umrè pa tudi bogatin, in pokopljejo ga.
23 ೨೩ ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs g86)
In v peklu, ko je bil v bolečinah, povzdigne očí svoje, in ugleda Abrahama od daleč, in Lazarja na naročji njegovem. (Hadēs g86)
24 ೨೪ ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
In on zaklicavši, reče: Oče Abraham! usmili se me, in pošlji Lazarja, naj omoči konec prsta svojega v vodi, in mi jezik ohladí, ker se mučim v tem plamenu.
25 ೨೫ ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
Abraham pa reče: Sin! spomeni se, da si ti prejel dobroto svojo v življenji svojem, in ravno tako Lazar slabo. Sedaj pa; on se tolaži, a ti se mučiš.
26 ೨೬ ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
In vrh vsega tega, med nami in vami je postavljen prepad velik, da kteri hočejo odtod sniti k vam, ne morejo, in kteri odondod k nam, da ne prehajajo.
27 ೨೭ ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Pa reče: Prosim te torej, oče, da ga pošlji na mojega očeta dom,
28 ೨೮ ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
Ker imam pet bratov: da jim to izpriča, da ne pridejo tudi oni na ta kraj trpljenja.
29 ೨೯ ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,
Velí mu Abraham: Mojzesa imajo in preroke; poslušajo naj jih.
30 ೩೦ ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
On pa reče: Ne, oče Abraham! nego če kdo od mrtvih pride k njim, potem se bodo spokorili.
31 ೩೧ ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
Pa mu reče: Če Mojzesa in prerokov ne poslušajo, ne bodo verovali, če tudi kdo od mrtvih vstane.

< ಲೂಕನು 16 >