< ಲೂಕನು 17 >

1 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
ויאמר אל תלמידיו אי אפשר שלא יבאו המכשלים אבל אוי לאיש אשר על ידו יבאו׃
2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
נוח לו שיתלה פלח רכב על צוארו וישלך אל הים מאשר יכשיל את אחד מהקטנים wאלה׃
3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
השמרו לנפשותיכם אם יחטא לך אחיך הוכח לו ואם ינחם סלח לו׃
4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
ואם יחטא לך שבע פעמים ביום ושב אליך שבע פעמים ביום ואמר נחמתי וסלחת לו׃
5 ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
ויאמרו השליחים אל האדון הוסף לנו אמונה׃
6 ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
ויאמר האדון לו היתה לכם אמונה כגרגר החרדל אז תאמרו אל התות הזה העקר והנטע בתוך הים וישמע לכם׃
7 “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
מי הוא זה מכם ולו עבד חרש או רעה אשר בבאו מן השדה יאמר אליו מהר גשה הנה והסב׃
8 ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
הלא יאמר אליו הכן לי ארוחת הערב וחגר מתניך ושרתני עד אם כליתי לאכל ולשתות ואחר תאכל ותשתה גם אתה׃
9 ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
הגם יתן תודה לעבד על עשתו את אשר צוהו אמרתי לא יתן׃
10 ೧೦ ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
ככה גם אתם אחרי עשותכם את כל אשר צויתם אמרו עבדים אין מועיל בם אנחנו כי רק את המטל עלינו לעשות עשינו׃
11 ೧೧ ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
ויהי בנסעו ירושלים והוא עבר בתוך שמרון והגליל׃
12 ೧೨ ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
ויבא אל כפר אחד ויפגעהו עשרה אנשים מצרעים והם עמדים מרחוק׃
13 ೧೩ “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
וישאו את קולם לאמר ישוע מורה חננו׃
14 ೧೪ ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
וירא אותם ויאמר אליהם לכו והראו אל הכהנים ויהי בלכתם ויטהרו׃
15 ೧೫ ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
ואחד מהם בראתו כי נרפא וישב וישבח את האלהים בקול גדול׃
16 ೧೬ ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
ויפל על פניו לרגליו ויודה לו והוא היה שמרוני׃
17 ೧೭ ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
ויען ישוע ויאמר הלא העשרה טהרו והתשעה איה הם׃
18 ೧೮ ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
האם לא נמצא אשר שב לתת כבוד לאלהים זולתי הנכרי הזה׃
19 ೧೯ ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
ויאמר אליו קום ולך אמונתך הושיעה לך׃
20 ೨೦ ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
וישאלהו הפרושים מתי תבוא מלכות האלהים ויען אתם לאמר מלכות האלהים לא תבוא במראה עינים׃
21 ೨೧ ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
ולא יאמרו הנה פה או הנה שם כי מלכות האלהים הנה בקרבכם היא׃
22 ೨೨ ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
ויאמר אל התלמידים ימים באים והתאויתם לראות יום אחד מימי בן האדם ולא תראו׃
23 ೨೩ ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
ואם יאמרו אליכם הנה שם הנה פה אל תלכו ואל תרוצו אחריהם׃
24 ೨೪ ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
כי כברק אשר יברק מקצה השמים ויאיר עד קצה השמים כן יהיה בן האדם ביומו׃
25 ೨೫ ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
אך בראשונה צריך הוא לסבל הרבה ולהמאס מן הדור הזה׃
26 ೨೬ ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
וכאשר היה נח כן יהיה בימי בן האדם׃
27 ೨೭ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
אכלו ושתו נשאו נשים והשיאו נשים לאנשים עד היום אשר בא נח אל התבה ויבא המבול וישחת את כלם׃
28 ೨೮ ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
וכאשר היה בימי לוט אכל ושתה קנה ומכר נטע ובנה׃
29 ೨೯ ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
ויהי ביום אשר יצא לוט מסדום וימטר אש וגפרית מן השמים וישחת את כלם׃
30 ೩೦ ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
ככה יהיה ביום אשר יגלה בן האדם׃
31 ೩೧ ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
ביום ההוא איש אשר יהיה על הגג וכליו בבית אל ירד לשאת אתם ואיש אשר בשדה אל ישב הביתה׃
32 ೩೨ ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
זכרו את אשת לוט׃
33 ೩೩ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
המבקש למלט את נפשו יאבדנה ואשר יאבד אתה יהיה׃
34 ೩೪ ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
אני אמר לכם בלילה ההוא שנים יהיו במטה אחת האחד יאסף והאחר יעזב׃
35 ೩೫ ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
שתים תהיינה טחנות יחד האחת תאסף והאחרת תעזב׃
36 ೩೬ “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
שנים יהיו בשדה ונאסף האחד והאחר יעזב׃
37 ೩೭ ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
ויענו ויאמרו אליו איה זאת אדנינו ויאמר אליהם באשר הפגר שם יקבצו הנשרים׃

< ಲೂಕನು 17 >