< ಲೂಕನು 18 >

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
Каза им една притча за как трябва всякога да се молят, да не отслабват, думайки:
2 ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
О Знаеш заповедите: "Не прелюбодействувай", "Не убивай"; "Не кради"; "Не лъжесвидетелствувай"; "Почитай баща си и майка си";
3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
В същия град имаше и една вдовица, която дохождаше при него и му казваше: Отдай ми правото спрямо противника ми.
4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
Но той за известно време не искаше. А после си каза: При все, че от Бога не се боя и човеците не зачитам,
5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
пак, понеже тая вдовица ми досажда, ще - отдам правото, да не би да ме измори с безкрайното си дохождане.
6 ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
И Господ рече: Слушайте що каза неправедният съдия!
7 ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
А Бог няма ли да отдаде правото на Своите избрани, които викат към Него ден и нощ, ако и да се бави спрямо тях?
8 ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
Казвам ви, че ще им отдаде правото скоро. Обаче, когато дойде Човешкият Син ще намери ли вяра на земята?
9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
И на някои, които уповаваха на себе си, че са праведни, и презираха другите, каза и тая притча:
10 ೧೦ ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
Двама души влязоха в храма да се помолят, единият фарисей, а другият бирник.
11 ೧೧ ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
Фарисеят, като се изправи, молеше се в себе си така: Боже, благодаря Ти, че не съм като другите човеци, грабители, неправедни, прелюбодейци и особено не като тоя бирник.
12 ೧೨ ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
Постя дваж в седмицата, давам десятък от всичко що придобия.
13 ೧೩ ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
А бирникът като стоеше издалеч, не щеше нито очите си да подигне към небето, но удряше се в гърди и казваше: Боже бъди милостив към мене грешника.
14 ೧೪ ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Казвам ви, че този слезе у дома си оправдан, а не онзи; защото всеки, който възвишава себе си, ще се смири, а който смирява себе си, ще се възвиси.
15 ೧೫ ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
Донесоха още при Него младенците си, за да се докосне до тях; а учениците, като видяха, смъмриха ги.
16 ೧೬ ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
Но Исус ги повика и рече: Оставете дечицата да дойдат при Мене и не ги възпирайте; защото на такива е Божието царство.
17 ೧೭ ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
Истина ви казвам: Който не приеме като детенце Божието царство, той никак няма да влезе в него.
18 ೧೮ ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios g166)
И някой си началник Го попита, казвайки: Благи Учителю, какво да сторя, за да наследя вечен живот? (aiōnios g166)
19 ೧೯ ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
А Исус му рече: Защо Ме наричаш благ? Никой не е благ, освен един Бог.
20 ೨೦ ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
Знаеш заповедите: "Не убивай"; "Не кради"; "Не лъжесвидетелствувай"; "Почитай баща си и майка си";
21 ೨೧ ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
а той каза: Всичко това съм опазил от младостта си.
22 ೨೨ ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Исус, като го чу, рече му: Едно още ти не достига. Продай все що имаш и раздай на сиромасите и ще имаш съкровище на небето; дойди и Ме следвай!
23 ೨೩ ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
Но той, като чу това, наскърби се много, защото беше твърде богат.
24 ೨೪ ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
И Исус като го видя, каза: Колко мъчно ще влязат в Божието царство ония, които имат богатство!
25 ೨೫ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
Защото по-лесно е камила да мине през иглени уши, отколкото богат да влезе в Божието царство.
26 ೨೬ ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
А ония, които чуха това рекоха: Тогава кой може да се спаси?
27 ೨೭ ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
А Той каза: Невъзможното за човеците за Бога е възможно.
28 ೨೮ ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
А Петър рече: Ето, ние оставихме своето и Те последвахме.
29 ೨೯ ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
А Той им рече: Истина ви казвам, няма никой, който да е оставил къща или жена, или братя, или родители, или чада, заради Божието царство,
30 ೩೦ ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn g165, aiōnios g166)
който да не получи многократно повече в сегашно време, а в идещия свят вечен живот. (aiōn g165, aiōnios g166)
31 ೩೧ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
И като взе дванадесетте при Себе Си, рече им: Ето, възлизаме в Ерусалим и ще се изпълни в Човешкия Син всичко, що е писано чрез пророците.
32 ೩೨ ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
Защото ще бъде предаден на езичниците, които ще Му се поругаят и безсрамно ще Го оскърбят, и ще Го заплюят,
33 ೩೩ ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
и, когато Го бият, ще Го убият; и на третия ден ще възкръсне.
34 ೩೪ ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
Но те не разбираха нищо от това; и тая дума беше скрита за тях, и не разбираха това, което се казваше.
35 ೩೫ ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
А когато Той се приближаваше до Ерихон, един слепец седеше край пътя да проси.
36 ೩೬ ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
И като чу, че минава народ, попита какво е това.
37 ೩೭ ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
И казаха му, че Исус назарянинът минава.
38 ೩೮ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
Тогава той извика, казвайки: Исусе, сине Давидов, смили се за мене!
39 ೩೯ ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
А тия, които вървяха отпред го смъмриха, за да млъкне; но той още повече викаше: Сине Давидов, смили се за мене!
40 ೪೦ ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
И тъй, Исус се спря и заповяда да Му го доведат. И като се приближи, попита го:
41 ೪೧ ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
Какво искаш да ти сторя? А той каза: Господи, да прогледам,
42 ೪೨ ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
Исус му рече: Прогледай; твоята вяра те изцели.
43 ೪೩ ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
И той веднага прогледа, и тръгна след Него, като славеше Бога. И всичките люде, като видяха това, въздадоха хвала на Бога.

< ಲೂಕನು 18 >