< ಲೂಕನು 21 >

1 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
وَتَطَلَّعَ فَرَأَى ٱلْأَغْنِيَاءَ يُلْقُونَ قَرَابِينَهُمْ فِي ٱلْخِزَانَةِ،١
2 ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
وَرَأَى أَيْضًا أَرْمَلَةً مِسْكِينَةً أَلْقَتْ هُنَاكَ فَلْسَيْنِ.٢
3 “ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.
فَقَالَ: «بِٱلْحَقِّ أَقُولُ لَكُمْ: إِنَّ هَذِهِ ٱلْأَرْمَلَةَ ٱلْفَقِيرَةَ أَلْقَتْ أَكْثَرَ مِنَ ٱلْجَمِيعِ،٣
4 ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.
لِأَنَّ هَؤُلَاءِ مِنْ فَضْلَتِهِمْ أَلْقَوْا فِي قَرَابِينِ ٱللهِ، وَأَمَّا هَذِهِ فَمِنْ إِعْوَازِهَا، أَلْقَتْ كُلَّ ٱلْمَعِيشَةِ ٱلَّتِي لَهَا».٤
5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
وَإِذْ كَانَ قَوْمٌ يَقُولُونَ عَنِ ٱلْهَيْكَلِ إِنَّهُ مُزَيَّنٌ بِحِجَارَةٍ حَسَنَةٍ وَتُحَفٍ، قَالَ:٥
6 ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
«هَذِهِ ٱلَّتِي تَرَوْنَهَا، سَتَأْتِي أَيَّامٌ لَا يُتْرَكُ فِيهَا حَجَرٌ عَلَى حَجَرٍ لَا يُنْقَضُ».٦
7 ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,
فَسَأَلُوهُ قَائِلِينَ: «يَا مُعَلِّمُ، مَتَى يَكُونُ هَذَا؟ ومَا هِيَ ٱلْعَلَامَةُ عِنْدَمَا يَصِيرُ هَذَا؟».٧
8 ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
فَقَالَ: «ٱنْظُرُوا! لَا تَضِلُّوا. فَإِنَّ كَثِيرِينَ سَيَأْتُونَ بِٱسْمِي قَائِلِينَ: إِنِّي أَنَا هُوَ! وَٱلزَّمَانُ قَدْ قَرُبَ! فَلَا تَذْهَبُوا وَرَاءَهُمْ.٨
9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.
فَإِذَا سَمِعْتُمْ بِحُرُوبٍ وَقَلَاقِلٍ فَلَا تَجْزَعُوا، لِأَنَّهُ لَا بُدَّ أَنْ يَكُونَ هَذَا أَوَّلًا، وَلَكِنْ لَا يَكُونُ ٱلْمُنْتَهَى سَرِيعًا».٩
10 ೧೦ ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
ثُمَّ قَالَ لَهُمْ: «تَقُومُ أُمَّةٌ عَلَى أُمَّةٍ وَمَمْلَكَةٌ عَلَى مَمْلَكَةٍ،١٠
11 ೧೧ ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
وَتَكُونُ زَلَازِلُ عَظِيمَةٌ فِي أَمَاكِنَ، وَمَجَاعَاتٌ وَأَوْبِئَةٌ. وَتَكُونُ مَخَاوِفُ وَعَلَامَاتٌ عَظِيمَةٌ مِنَ ٱلسَّمَاءِ.١١
12 ೧೨ ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
وَقَبْلَ هَذَا كُلِّهِ يُلْقُونَ أَيْدِيَهُمْ عَلَيْكُمْ وَيَطْرُدُونَكُمْ، وَيُسَلِّمُونَكُمْ إِلَى مَجَامِعَ وَسُجُونٍ، وَتُسَاقُونَ أَمَامَ مُلُوكٍ وَوُلَاةٍ لِأَجْلِ ٱسْمِي.١٢
13 ೧೩ ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
فَيَؤُولُ ذَلِكَ لَكُمْ شَهَادَةً.١٣
14 ೧೪ ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.
فَضَعُوا فِي قُلُوبِكُمْ أَنْ لَا تَهْتَمُّوا مِنْ قَبْلُ لِكَيْ تَحْتَجُّوا،١٤
15 ೧೫ ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
لِأَنِّي أَنَا أُعْطِيكُمْ فَمًا وَحِكْمَةً لَا يَقْدِرُ جَمِيعُ مُعَانِدِيكُمْ أَنْ يُقَاوِمُوهَا أَوْ يُنَاقِضُوهَا.١٥
16 ೧೬ ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
وَسَوْفَ تُسَلَّمُونَ مِنَ ٱلْوَالِدِينَ وَٱلْإِخْوَةِ وَٱلْأَقْرِبَاءِ وَٱلْأَصْدِقَاءِ، وَيَقْتُلُونَ مِنْكُمْ.١٦
17 ೧೭ ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
وَتَكُونُونَ مُبْغَضِينَ مِنَ ٱلْجَمِيعِ مِنْ أَجْلِ ٱسْمِي.١٧
18 ೧೮ ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
وَلَكِنَّ شَعْرَةً مِنْ رُؤُوسِكُمْ لَا تَهْلِكُ.١٨
19 ೧೯ ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
بِصَبْرِكُمُ ٱقْتَنُوا أَنْفُسَكُمْ.١٩
20 ೨೦ “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
وَمَتَى رَأَيْتُمْ أُورُشَلِيمَ مُحَاطَةً بِجُيُوشٍ، فَحِينَئِذٍ ٱعْلَمُوا أَنَّهُ قَدِ ٱقْتَرَبَ خَرَابُهَا.٢٠
21 ೨೧ ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
حِينَئِذٍ لِيَهْرُبِ ٱلَّذِينَ فِي ٱلْيَهُودِيَّةِ إِلَى ٱلْجِبَالِ، وَٱلَّذِينَ فِي وَسْطِهَا فَلْيَفِرُّوا خَارِجًا، وَٱلَّذِينَ فِي ٱلْكُوَرِ فَلَا يَدْخُلُوهَا،٢١
22 ೨೨ ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
لِأَنَّ هَذِهِ أَيَّامُ ٱنْتِقَامٍ، لِيَتِمَّ كُلُّ مَا هُوَ مَكْتُوبٌ.٢٢
23 ೨೩ ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
وَوَيْلٌ لِلْحَبَالَى وَٱلْمُرْضِعَاتِ فِي تِلْكَ ٱلْأَيَّامِ! لِأَنَّهُ يَكُونُ ضِيقٌ عَظِيمٌ عَلَى ٱلْأَرْضِ وَسُخْطٌ عَلَى هَذَا ٱلشَّعْبِ.٢٣
24 ೨೪ ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
وَيَقَعُونَ بِفَمِ ٱلسَّيْفِ، وَيُسْبَوْنَ إِلَى جَمِيعِ ٱلْأُمَمِ، وَتَكُونُ أُورُشَلِيمُ مَدُوسَةً مِنَ ٱلْأُمَمِ، حَتَّى تُكَمَّلَ أَزْمِنَةُ ٱلْأُمَمِ.٢٤
25 ೨೫ “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
«وَتَكُونُ عَلَامَاتٌ فِي ٱلشَّمْسِ وَٱلْقَمَرِ وَٱلنُّجُومِ، وَعَلَى ٱلْأَرْضِ كَرْبُ أُمَمٍ بحَيْرَةٍ. اَلْبَحْرُ وَٱلْأَمْوَاجُ تَضِجُّ،٢٥
26 ೨೬ ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
وَٱلنَّاسُ يُغْشَى عَلَيْهِمْ مِنْ خَوْفٍ وَٱنْتِظَارِ مَا يَأْتِي عَلَى ٱلْمَسْكُونَةِ، لِأَنَّ قُوَّاتِ ٱلسَّمَاوَاتِ تَتَزَعْزَعُ.٢٦
27 ೨೭ ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
وَحِينَئِذٍ يُبْصِرُونَ ٱبْنَ ٱلْإِنْسَانِ آتِيًا فِي سَحَابَةٍ بِقُوَّةٍ وَمَجْدٍ كَثِيرٍ.٢٧
28 ೨೮ ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.
وَمَتَى ٱبْتَدَأَتْ هَذِهِ تَكُونُ، فَٱنْتَصِبُوا وَٱرْفَعُوا رُؤُوسَكُمْ لِأَنَّ نَجَاتَكُمْ تَقْتَرِبُ».٢٨
29 ೨೯ ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
وَقَالَ لَهُمْ مَثَلًا: «اُنْظُرُوا إِلَى شَجَرَةِ ٱلتِّينِ وَكُلِّ ٱلْأَشْجَارِ.٢٩
30 ೩೦ ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.
مَتَى أَفْرَخَتْ تَنْظُرُونَ وَتَعْلَمُونَ مِنْ أَنْفُسِكُمْ أَنَّ ٱلصَّيْفَ قَدْ قَرُبَ.٣٠
31 ೩೧ ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.
هَكَذَا أَنْتُمْ أَيْضًا، مَتَى رَأَيْتُمْ هَذِهِ ٱلْأَشْيَاءَ صَائِرَةً، فَٱعْلَمُوا أَنَّ مَلَكُوتَ ٱللهِ قَرِيبٌ.٣١
32 ೩೨ “ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
اَلْحَقَّ أَقُولُ لَكُمْ: إِنَّهُ لَا يَمْضِي هَذَا ٱلْجِيلُ حَتَّى يَكُونَ ٱلْكُلُّ.٣٢
33 ೩೩ ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
اَلسَّمَاءُ وَٱلْأَرْضُ تَزُولَانِ، وَلَكِنَّ كَلَامِي لَايَزُولُ.٣٣
34 ೩೪ “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
«فَٱحْتَرِزُوا لِأَنْفُسِكُمْ لِئَلَّا تَثْقُلَ قُلُوبُكُمْ فِي خُمَارٍ وَسُكْرٍ وَهُمُومِ ٱلْحَيَاةِ، فَيُصَادِفَكُمْ ذَلِكَ ٱلْيَوْمُ بَغْتَةً.٣٤
35 ೩೫ ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.
لِأَنَّهُ كَٱلْفَخِّ يَأْتِي عَلَى جَمِيعِ ٱلْجَالِسِينَ عَلَى وَجْهِ كُلِّ ٱلْأَرْضِ.٣٥
36 ೩೬ ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.
اِسْهَرُوا إِذًا وَتَضَرَّعُوا فِي كُلِّ حِينٍ، لِكَيْ تُحْسَبُوا أَهْلًا لِلنَّجَاةِ مِنْ جَمِيعِ هَذَا ٱلْمُزْمِعِ أَنْ يَكُونَ، وَتَقِفُوا قُدَّامَ ٱبْنِ ٱلْإِنْسَانِ».٣٦
37 ೩೭ ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
وَكَانَ فِي ٱلنَّهَارِ يُعَلِّمُ فِي ٱلْهَيْكَلِ، وَفِي ٱللَّيْلِ يَخْرُجُ وَيَبِيتُ فِي ٱلْجَبَلِ ٱلَّذِي يُدْعَى جَبَلَ ٱلزَّيْتُونِ.٣٧
38 ೩೮ ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.
وَكَانَ كُلُّ ٱلشَّعْبِ يُبَكِّرُونَ إِلَيْهِ فِي ٱلْهَيْكَلِ لِيَسْمَعُوهُ.٣٨

< ಲೂಕನು 21 >