< ಲೂಕನು 6 >

1 ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
Zvino zvakaitika nesabata rechipiri shure kwerekutanga, achigura nemuminda yezviyo, vadzidzi vake vatanha hura, vakadya, vachidzipukuta nemaoko.
2 ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
Asi vamwe veVaFarisi vakati kwavari: Munoitirei zvisiri pamutemo kuita nemasabata?
3 ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
Zvino Jesu achivapindura, wakati: Hamuna kuverenga izvo kunyange Dhavhidhi zvaakaita, paakange ava nenzara iye nevakange vanaye,
4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
kuti wakapinda sei mumba maMwari, akatora akadya zvingwa zvekuratidza, akapa nevakange vanaye; izvo zvisiri pamutemo kudyiwa asi nevapristi vega?
5 “ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
Ndokuti kwavari: Mwanakomana wemunhu ndiIshe wesabatawo.
6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
Zvino zvakaitikawo nerimwe sabata kuti wakapinda musinagoge, akadzidzisa; zvino kwakange kune munhu ipapo uye ruoko rwake rwerudyi rwakange rwakawonyana.
7 ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
Vanyori neVaFarisi vakamutarisisa, kuona kana angaporesa nesabata, kuti vawane mhosva yavangamupomera.
8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
Asi iye wakaziva mifungo yavo, akati kumunhu wakange ane ruoko rwakawonyana: Simuka, uende unomira pakati. Akasimuka akamira.
9 ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
Zvino Jesu akati kwavari: Ndichakubvunzai chimwe chinhu: Zviri pamutemo here nemasabata kuita zvakanaka kana kuita zvakaipa? Kuponesa upenyu kana kuparadza?
10 ೧೦ ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
Zvino akaringa-ringa kwavari vese, akati kumunhu: Tandavadza ruoko rwako. Akaita saizvozvo. Ruoko rwake rwukaporeswa ndokugwinya serumwe.
11 ೧೧ ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Ivo vakazara neupengo; vakataurirana umwe neumwe, kuti vangamuitei Jesu.
12 ೧೨ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
Zvino zvakaitika nemazuva iwayo kuti wakabuda akaenda kugomo kunonyengetera; agara usiku hwese mukunyengetera kuna Mwari.
13 ೧೩ ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Zvino kwakati kwaedza, akadanira vadzidzi vake kwaari; akasanangura kwavari gumi nevaviri, vaakatumidzawo kuti vaapositori;
14 ೧೪ ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
Simoni, waakatumidzawo Petro, naAndiriya munin'ina wake, Jakobho naJohwani, Firipi naBhatoromiyo,
15 ೧೫ ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
Matewu naTomasi, Jakobho waArifiyosi, naSimoni wainzi Ziroti;
16 ೧೬ ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
Judhasi waJakobho, naJudhasi Isikariyoti, wakavawo mutengesi.
17 ೧೭ ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
Akaburuka navo, akamira panzvimbo pakaenzana, nechaunga chevadzidzi vake, nechaunga chikuru chevanhu vaibva Judhiya rese neJerusarema, nepagungwa reTire neSidhoni, vakauya kuzomunzwa, nekuporeswa pazvifo zvavo;
18 ೧೮ ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
nevakange vachitambudziwa nemweya yetsvina, vakaporeswa.
19 ೧೯ ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
Chaunga chese chikatsvaka kumubata; nokuti kwakabuda simba kwaari rikaporesa vese.
20 ೨೦ ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
Ndokusimudzira meso ake kuvadzidzi vake, akati: Makaropafadzwa varombo, nokuti ushe hwaMwari ndohwenyu.
21 ೨೧ ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
Makaropafadzwa imwi mune nzara zvino, nokuti muchagutiswa. Makaropafadzwa imwi munochema ikozvino, nokuti muchaseka.
22 ೨೨ “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
Makaropafadzwa, kana vanhu vachikuvengai, uye kana vachikusarurai, vachikunyombai, vachirasa zita renyu serakashata, nekuda kweMwanakomana wemunhu.
23 ೨೩ ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
Farai nezuva iro, muuruke nemufaro; nokuti tarirai, mubairo wenyu mukuru kudenga; nokuti zvakaita madzibaba avo saizvozvo kuvaporofita.
24 ೨೪ “ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
Asi mune nhamo imwi vakafuma! Nokuti magamuchira nyaradzo yenyu.
25 ೨೫ ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
Mune nhamo imwi munoguta! Nokuti muchanzwa nzara. Mune nhamo imwi munoseka zvino! Nokuti muchachema nekuwungudza.
26 ೨೬ “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
Mune nhamo kana vanhu vese vachitaura zvakanaka pamusoro penyu! Nokuti madzibaba avo akaita saizvozvo kuvaporofita venhema.
27 ೨೭ “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
Asi ndinoti kwamuri munonzwa: Idai mhandu dzenyu, itai zvakanaka kune vanokuvengai,
28 ೨೮ ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
ropafadzai vanokutukai, munyengeterere vanokubatai zvakaipa.
29 ೨೯ ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
Kune anokurova padama, umupe rimwewo; anokutorera nguvo, usarambidza neshati.
30 ೩೦ ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
Asi upe umwe neumwe anokumbira kwauri; neanokutorera zvako, usazvirevazve.
31 ೩೧ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
Uye sezvamunoda kuti vanhu vaite kwamuri, imwi muvaitirewo saizvozvo.
32 ೩೨ “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
Uye kana muchida avo vanokudai, mune kuvongwa kwakadini? Nokuti vatadziwo vanoda vanovada.
33 ೩೩ ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
Uye kana muchiitira zvakanaka kune avo vanokuitirai zvakanaka, mune kuvongwa kwakadini? Nokuti vatadzi vanoitawo izvozvo.
34 ೩೪ ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
Uye kana muchikweretesa vamunotarisira kugamuchira kwavari, mune kuvongwa kwakadini? Nokuti vatadzi vanokweretesawo vatadzi, kuti vagamuchirezve zvakaenzana nazvo.
35 ೩೫ ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Asi idai vavengi venyu, muite zvakanaka, mukweretese musingatarisirizve chinhu; zvino mubairo wenyu uchava mukuru, mugova vana veWekumusoro-soro; nokuti iye ane moyo munyoro kune vasingavongi nevakaipa.
36 ೩೬ ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
Naizvozvo ivai netsitsi, sababa venyuwo vane tsitsi.
37 ೩೭ “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
Musatonga, uye hamungazotongwi; musapa mhosva, uye hamungazopiwi mhosva; regererai, mugoregererwawo.
38 ೩೮ ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
Ipai, nemwi muchapiwa; chiyero chakanaka, chakatsikirirwa, nekuzunguzirwa, chinopfachukira vachakupai pachifuva chenyu. Nokuti nechiyero ichocho chamunoyera nacho muchayerwa nacho zvekare.
39 ೩೯ ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
Akataura mufananidzo kwavari akati: Ko bofu ringatungamirira bofu here? Ko haangawiri mugomba ari maviri here?
40 ೪೦ ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
Mudzidzi haasi pamusoro pemudzidzisi wake; asi umwe neumwe kana apedzeredzwa achava semudzidzisi wake.
41 ೪೧ “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
Uye unotarirei rubanzu rwuri muziso reumwe wako, asi danda riri muziso rako pachako haurinanzereri?
42 ೪೨ ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
Kana unogona kureva sei kune umwe wako, uchiti: Umwe wangu, rega ndibudise rubanzu rwuri muziso rako, iwe pachako usingaoni danda riri muziso rako? Iwe munyepedzeri, budisa pakutanga danda kubva muziso rako, zvino ipapo uchaona zvakanaka kubudisa rubanzu rwuri muziso reumwe wako.
43 ೪೩ ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
Nokuti hausi muti wakanaka unobereka chibereko chakaipa; kana muti wakaipa unobereka chibereko chakanaka.
44 ೪೪ ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
Nokuti muti umwe neumwe unozikanwa nechibereko chawo pachawo. Nokuti paminzwa, havatanhi maonde, kana parukato kutanha mazambiringa.
45 ೪೫ ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Munhu wakanaka kubva pafuma yakanaka yemoyo wake anobudisa zvakanaka, nemunhu wakaipa kubva pafuma yakaipa yemoyo wake anobudisa zvakaipa; nokuti kubva pazvizere mumoyo muromo wake anotaura.
46 ೪೬ “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
Zvino munondiidzirei Ishe, Ishe, musingaiti zvinhu zvandinoreva?
47 ೪೭ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
Ani nani anouya kwandiri akanzwa mashoko angu akaaita, ndichakuratidzai kuti wakafanana nani;
48 ೪೮ ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
wakafanana nemunhu wakavaka imba, akachera akadzikisa, akateya nheyo paruware; zvino mafashame akati auya, rukova rukarova zvine simba paimba iyo, rukasagona kuizunungusa; nokuti yakange yakateyiwa paruware.
49 ೪೯ ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”
Asi anonzwa asingaiti, wakafanana nemunhu wakavaka imba pavhu isina nheyo; ipo rukova rwakarova nesimba, pakarepo ikawa, kuwa kweimba iyo kukava kukuru.

< ಲೂಕನು 6 >